Friday, May 10, 2024
Homeರಾಜ್ಯತಮಿಳುನಾಡು ಕೇಳಿದಷ್ಟು ನೀರು ಬಿಡಲು ಸಾಧ್ಯವಿಲ್ಲ : ಡಿಕೆಶಿ

ತಮಿಳುನಾಡು ಕೇಳಿದಷ್ಟು ನೀರು ಬಿಡಲು ಸಾಧ್ಯವಿಲ್ಲ : ಡಿಕೆಶಿ

ಬೆಂಗಳೂರು, ಸೆ.26- ತಮಿಳುನಾಡು ಏನೇ ವಾದ ಮಾಡಿದರೂ ನಮ್ಮಲ್ಲಿ ನೀರಿಲ್ಲ, ತಮಿಳುನಾಡು ಕೇಳಿದಷ್ಟು ನೀರನ್ನು ಬಿಡಲು ಆಗುವುದಿಲ್ಲ, ನೀರನ್ನು ಬಿಡುವುದೂ ಇಲ್ಲ. ನಮ್ಮ ಬಳಿ ಅಷ್ಟು ನೀರಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಮದಿಗೆ ಮಾಡಿನಾಡಿರುವ ಅವರು, ಇಂದು ನಡೆದ ಕಾವೇರಿ ನೀರು ನಿಯಂತ್ರಣಾ ಸಮಿತಿ ಮುಂದೆ ತಮಿಳುನಾಡು ಕೆಆರ್‍ಎಸ್‍ನ ಒಳಹರಿವು ಹೆಚ್ಚಾಗಿದೆ ಎಂಬ ವಾದ ಮಂಡಿಸಿ ಇದರ ಆಧಾರದ ಮೇಲೆ ತಮಿಳುನಾಡಿಗೆ ಪ್ರತಿದಿನ 12,500 ಕ್ಯೂಸೆಕ್ ನೀರು ಬಿಡಬೇಕೆಂಬ ವಾದ ಮಂಡಿಸಿದೆ.

5,000 ಕ್ಯೂಸೆಕ್ ಬಿಡಲು ನಮ್ಮ ಬಳಿ ನೀರಿಲ್ಲ. ಇನ್ನು 12,500 ಕ್ಯೂಸೆಕ್ ಬಿಡಲು ಹೇಗೆ ಸಾಧ್ಯ, ಅವರು ಏನೇ ವಾದ ಮಾಡಿದರೂ ನಮ್ಮಲ್ಲಿ ನೀರಿಲ್ಲ ಎಂದು ಸ್ಪಷ್ಟಪಡಿಸಿದರು. ಪ್ರತಿದಿನ ಕಾವೇರಿ ನದಿಪಾತ್ರದ ಜಲಾಶಯಗಳಿಗೆ ಎಷ್ಟು ನೀರು ಬರುತ್ತದೆ ಮತ್ತು ಹೊರ ಹೋಗುತ್ತದೆ ಎನ್ನುವ ಮಾಹಿತಿಯನ್ನು ಮುಚ್ಚಿಡಲು ಸಾಧ್ಯವಿಲ್ಲ. ತಾವು ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಒಳಹರಿವಿನ ಮೇಲೆ ನಿಗಾ ವಹಿಸಿದ್ದು, 8 ರಿಂದ 10 ಸಾವಿರ ಕ್ಯೂಸೆಕ್ ಹರಿವು ಹೆಚ್ಚಾಗಿದೆ. ಅದೇ ಸಂದರ್ಭದಲ್ಲಿ ಬೆಂಗಳೂರು ಹಾಗೂ ಸುತ್ತಮುತ್ತ ಬಿದ್ದ ಮಳೆಯಿಂದಾಗಿ ಸಹಜವಾಗಿಯೇ ತಮಿಳುನಾಡಿಗೆ ನೀರು ಹರಿಯುತ್ತಿರುವ ಪ್ರಮಾಣವೂ ಹೆಚ್ಚಾಗಿದೆ. ಬಿಳಿಗುಂಡ್ಲು ಜಲಾಶಯದಲ್ಲಿ ಪ್ರತಿಕ್ಷಣವೂ ಅದು ದಾಖಲಾಗುತ್ತದೆ. ಇದನ್ನು ಎರಡೂ ರಾಜ್ಯಗಳ ಅಧಿಕಾರಿಗಳು ಗಮನಿಸುತ್ತಿದ್ದಾರೆ ಎಂದು ಹೇಳಿದರು.

ಬೆಂಗಳೂರು ಬಂದ್ : ತಾರಕಕ್ಕೇರಿದ ಕಾವೇರಿ ಕೂಗು, ರಾಜಭವನ ಮುತ್ತಿಗೆಗೆ ಹೋರಾಟಗಾರರ ಯತ್ನ

ಜಲಾಶಯಗಳಿಗೆ ನೀರಿನ ಒಳಹರಿವು ಮತ್ತು ಹೊರಹರಿವಿನ ಮೇಲೆ ನೀರು ನಿಯಂತ್ರಣಾ ಸಮಿತಿ ನಿಗಾ ಇಟ್ಟಿದೆ. ಆದ ಕಾರಣ ನೀರಿನ ಹರಿವಿನ ವಿಚಾರದಲ್ಲಿ ನಾನಾಗಲಿ, ಅವರಾಗಲಿ ಸುಳ್ಳು ಹೇಳಲು ಸಾಧ್ಯವಿಲ್ಲ ಎಂದು ಹೇಳಿದರು.

ನಾವು ಸುಳ್ಳು ಹೇಳಿದರೆ ನಮ್ಮ ಮುಂದೆ ವಾಸ್ತಾವಾಂಶ ಇಡುತ್ತಾರೆ. ತಾಂತ್ರಿಕ ವಿಚಾರಗಳು ಅದಕ್ಕೆ ಸಂಬಂಧಿಸಿದ ಅಧಿಕಾರಿಗಳು ನೀಡುತ್ತಾರೆ. ನಾವು ಹೇಳಿದರೆ ಕೇಳುವುದಿಲ್ಲ ಎಂದರು. ರಾಜ್ಯದಲ್ಲಿ ಕನ್ನಡಿಗರ ಸರ್ಕಾರವಿಲ್ಲ, ಸ್ಟಾಲಿನ್ ಸರ್ಕಾರವಿದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಅವರು, ಮನಮೋಹನ್ ಸಿಂಗ್ ಅವರು ಪ್ರಧಾನಿಗಳಾಗಿದ್ದಾಗ ಕುಮಾರಸ್ವಾಮಿ ಅವರ ತಂದೆ ದೇವೇಗೌಡರು ಏನು ಹೇಳಿದ್ದರು, ಈಗ ಏನು ಪತ್ರ ಬರೆದಿದ್ದಾರೆ ಎಂದು ಗೊತ್ತಿದೆಯೇ ಅವರಿಗೆ? ನೀರಿನ ವಿಚಾರದಲ್ಲಿ ರಾಜಕಾರಣ ಬಿಟ್ಟು ರಾಜ್ಯದ ಹಿತ ಕಾಪಾಡಲಿ ಎಂದು ತಿಳಿಸಿದರು.

ನೋವನ್ನು ವ್ಯಕ್ತಪಡಿಸಲು ನಮ್ಮ ಜನ ಬಂದ್ ಮಾಡಿದ್ದಾರೆ : ಎಚ್‍ಡಿಡಿ

ಇಂದು ಕಾವೇರಿ ನೀರು ನಿರ್ವಹಣಾ ಸಮಿತಿಯ ಸಭೆಯಿದ್ದು ರಾಜ್ಯದ ಅಧಿಕಾರಿಗಳು ವಾಸ್ತವಾಂಶವನ್ನು ಸಮಿತಿಯ ಮುಂಡಿಡಲಿದ್ದಾರೆ. ರಾಜ್ಯದ ಹಿತವೇ ನಮ್ಮ ಮೊದಲ ಆದ್ಯತೆ, ಇಂದು ಅಥವಾ ನಾಳೆ ನಾನು ಮತ್ತು ಮುಖ್ಯಮಂತ್ರಿಗಳು ಚರ್ಚೆ ಮಾಡಿ ನಿರ್ಧಾರ ತಿಳಿಸುತ್ತೇವೆ ಎಂದು ಹೇಳಿದರು. ಇದೇ ವೇಳೆ, ಕಾವೇರಿ ನೀರಿನ ವಿಚಾರವಾಗಿ ಬಂದ್‍ಗೆ ಸಹಕಾರ ನೀಡಿದ ಬೆಂಗಳೂರಿನ ನಾಗರಿಕರಿಗೆ ಅಭಿನಂದನೆಗಳು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿಯುತವಾಗಿ ಪ್ರತಿಭಟನೆ ಮಾಡಿದ ಎಲ್ಲಾ ಸಂಘಟನೆಯವರಿಗೆ ಮಾಧ್ಯಮಗಳ ಮೂಲಕ ಧನ್ಯವಾದ ಎಂದು ತಿಳಿಸಿದರು.

RELATED ARTICLES

Latest News