ಸಂಕಷ್ಟದಲ್ಲಿರುವ ದೇಶದ ಮರು ನಿರ್ಮಾಣಕ್ಕೆ ಕಾಂಗ್ರೆಸ್ ಅನಿವಾರ್ಯ : ಡಿಕೆಶಿ

Social Share

ಬೆಂಗಳೂರು, ಫೆ.7- ದೇಶ ಮತ್ತು ರಾಜ್ಯಕ್ಕೆ ಸಂಕಷ್ಟ ಒದಗಿ ಬಂದಿದೆ, ಅದನ್ನು ಸಮರ್ಥವಾಗಿ ನಿಭಾಯಿಸಿ ಸ್ವಾತಂತ್ರ್ಯ ಆಶಯಗಳನ್ನು ಕಾಪಾಡಿಕೊಳ್ಳಲು ಹೊಸ ಸದಸ್ಯತ್ವದ ಮೂಲಕ ಕಾಂಗ್ರೆಸ್ ಮುಂದಡಿ ಇಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟು 75 ವರ್ಷಗಳಾಗಿವೆ. ಪ್ರಸ್ತುತ ದೇಶ ಸಂಕಷ್ಟಕ್ಕೆ ಸಿಲುಕಿದೆ. ದೇಶವನ್ನು ಮರು ನಿರ್ಮಾಣ ಮಾಡುವ ಪರಿಸ್ಥಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ದೇಶಕ್ಕೆ ಕಾಂಗ್ರೆಸ್ ಅನಿವಾರ್ಯವಾಗಿದೆ ಎಂದರು.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನವನ್ನು ಆರಂಭಿಸಿದ್ದಾರೆ. ಮುಂದೆ ಪಕ್ಷದಲ್ಲಿ ನಡೆಯುವ ಸಾಂಸ್ಥಿಕ ಚುನಾವಣೆಯಲ್ಲಿ ಮತದಾನ ಮಾಡುವ ಹಕ್ಕು ಪಡೆಯಬೇಕಾದರೆ ಒಂದು ತಿಂಗಳಲ್ಲಿ ಸದಸ್ಯತ್ವ ಪಡೆಯಬೇಕು. ಅನಂತರವೂ ಸದಸ್ಯತ್ವ ಪಡೆಯಬಹುದು. ಆದರೆ ಬ್ಲಾಕ್, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ನಡೆಯುವ ಚುನಾವಣೆಯಲ್ಲಿ ಮತದಾನ ಮಾಡಬೇಕಾದರೆ ತಿಂಗಳ ಅವಯಲ್ಲಿ ಡಿಜಿಟಲ್ ಸದಸ್ಯತ್ವ ಪಡೆಯಬೇಕು ಎಂದು ಹೇಳಿದರು.
ಸದಸ್ಯತ್ವ ಅಭಿಯಾನವನ್ನು ನಿಗಾ ವಹಿಸಲು ಪ್ರತಿ 40 ಬೂತ್‍ಗೆ ಒಬ್ಬ ನೋಂದಣಾಕಾರಿಯನ್ನು ನಿಯೋಜಿಸಲಾಗಿದೆ. ಅವರಿಗೆ ನೋಂದಣಿ ಪ್ರಕ್ರಿಯೆಗಳು ಯಾವ ರೀತಿ ನಡೆಯಬೇಕು. ಮುಂದಿನ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವುದು ಹೇಗೆ ಎಂಬ ಎಲ್ಲಾ ಮಾಹಿತಿಗಳನ್ನು ತರಬೇತಿ ಮೂಲಕ ತಿಳಿಸಿಕೊಡಲಾಗುವುದು ಎಂದರು.
ಮುಂದೆ ಸಾರ್ವತ್ರಿಕ ಚುನಾವಣೆಯಲ್ಲಿ ಅಭ್ಯರ್ಥಿಗಳಾಗಲು ಮತ್ತು ಪಕ್ಷದಲ್ಲಿ ಯಾವುದೇ ಅಕಾರ ಪಡೆಯಬೇಕಾದರ ಕೆಳ ಹಂತದಲ್ಲಿ ಕಾರ್ಯಕರ್ತರ ಅಭಿಪ್ರಾಯ ಬಹಳ ಮುಖ್ಯವಾಗಿದೆ. ಕಾರ್ಯಕರ್ತರ ಅಭಿಪ್ರಾಯಗಳೇ ಅಧ್ಯಕ್ಷರ ನಿಲುವುಗಳಾಗಲಿವೆ. ಪಕ್ಷ ಸಂಘಟನೆಯಲ್ಲಿ ಕಾರ್ಯಕರ್ತರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಪ್ರತಿಯೊಬ್ಬರು 5 ರೂಪಾಯಿ ಶುಲ್ಕ ಪಾವತಿಸಿ ಸದಸ್ಯತ್ವ ಪಡೆಯಬೇಕು, ಪಕ್ಷದ ಗುರುತಿನ ಚೀಟಿ ಬೇಕಾದರೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 10 ರೂ. ಶುಲ್ಕ ಪಾವತಿಸಬೇಕು ಎಂದು ಹೇಳಿದರು.
ಕರಾವಳಿ ಭಾಗದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದದ ಕುರಿತು ನಂತರ ಪ್ರತಿಕ್ರಿಯಿಸುವುದಾಗಿ ಹೇಳಿದ ಅವರು, ಸಚಿವ ವಿ.ಸುನೀಲ್ ಕುಮಾರ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ರಾಜ್ಯದಲ್ಲಿ ಶಾಂತಿ ಕದಡುವುದು ಛಾಳಿಯಾಗಿದೆ. ಈ ನಿಟ್ಟಿನಲ್ಲಿ ಅವರು ಪದೇ ಪದೇ ವಿವಾದಿತ ಹೇಳಿಕೆಗಳನ್ನು ನೀಡುತ್ತಿರುತ್ತಾರೆ ಎಂದರು.

Articles You Might Like

Share This Article