Friday, February 28, 2025
Homeರಾಜಕೀಯ | Politicsಡಿಕೆಶಿ ರಕ್ತದಲ್ಲೇ ಕಾಂಗ್ರೆಸ್ ಇದೆ, ಬೇರೆ ಪಕ್ಷಕ್ಕೆ ಸೇರುತ್ತಾರೆಂಬುದು ವದಂತಿಯಷ್ಟೇ : ಸಚಿವ ಜಮೀರ್

ಡಿಕೆಶಿ ರಕ್ತದಲ್ಲೇ ಕಾಂಗ್ರೆಸ್ ಇದೆ, ಬೇರೆ ಪಕ್ಷಕ್ಕೆ ಸೇರುತ್ತಾರೆಂಬುದು ವದಂತಿಯಷ್ಟೇ : ಸಚಿವ ಜಮೀರ್

DK Shivakumar has Congress in his blood,

ವಿಜಯಪುರ,ಫೆ.28– ಡಿ.ಕೆ.ಶಿವಕುಮಾರ್‌ರವರ ರಕ್ತದಲ್ಲೇ ಕಾಂಗ್ರೆಸ್ ಇದೆ. ಹೀಗಾಗಿ ಅವರು ಬೇರೆ ಪಕ್ಷಕ್ಕೆ ಸೇರುತ್ತಾರೆ ಎಂಬುದು ತಪ್ಪು ವದಂತಿ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕ್ಷಿಪ್ರ ರಾಜ್ಯ ಕ್ರಾಂತಿಯಾಗಲಿದೆ ಎಂದು ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ. ಈ ಸರ್ಕಾರ ಅವಧಿ ಪೂರ್ಣಗೊಳಿಸಲಿದೆ. ಮುಂದಿನ 15 ವರ್ಷಗಳಲ್ಲೂ ಕಾಂಗ್ರೆಸ್ ಪಕ್ಷವೇ ಆಡಳಿತದಲ್ಲಿರಲಿದೆ. ಬಿಜೆಪಿಯವರು ಕೇವಲ ಕನಸು ಕಾಣುತ್ತಾ ಇರಬೇಕು ಎಂದು ಲೇವಡಿ ಮಾಡಿದರು.

ಬಿಜೆಪಿಯಲ್ಲಿ ಸಾಕಷ್ಟು ಭಿನ್ನಾಭಿಪ್ರಾಯಗಳಿವೆ. ಮೊದಲು ಅದರತ್ತ ಗಮನ ಹರಿಸಲಿ. ಕಾಂಗ್ರೆಸ್‌ನಲ್ಲಿ ಯಾವುದೇಗೊಂದಲಗಳಿಲ್ಲ, ಆಪರೇಷನ್ ಕಮಲ ಯಾವುದೂ ನಡೆಯುವುದಿಲ್ಲ. ಬಿಜೆಪಿಯ ಏಳೆಂಟು ಮಂದಿ, ಜೆಡಿಎಸ್‌ನ 12 ರಿಂದ 13 ಮಂದಿ ಶಾಸಕರು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಆದರೆ ಈಗಾಗಲೇ ನಮ್ಮ ಸಂಖ್ಯಾಬಲ 140ರಷ್ಟಿದೆ. ಬೇರೆ ಪಕ್ಷಗಳ ಶಾಸಕರ ಅಗತ್ಯ ಇಲ್ಲ ಎಂದರು.

ಬಿಜೆಪಿ-ಜೆಡಿಎಸ್‌ನವರು ರಾಜಕೀಯವಾಗಿ ಆಟ ಆಡಲು ಪ್ರಯತ್ನಿಸುವ ಅವಕಾಶವೇ ಇಲ್ಲ ಎಂದ ಅವರು, ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ. ಬದಲಾವಣೆ ಕುರಿತಂತೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಬೇಕು. ಪಕ್ಷದ ವರಿಷ್ಠರು ಹಾಕಿದ ಗೆರೆಯನ್ನು ನಾವ್ಯಾರೂ ದಾಟುವುದಿಲ್ಲ. ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ.

ರಾಜ್ಯಾದ್ಯಂತ ಸಂಚರಿಸುತ್ತಿದ್ದಾರೆ. ಕೆ.ಎನ್.ರಾಜಣ್ಣ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಕೊಯಮತ್ತೂರಿನಲ್ಲಿ ಈಶಾ ಫೌಂಡೇಷನ್ ವತಿಯಿಂದ ಮಹಾಶಿವರಾತ್ರಿ ಆಚರಣೆಗೆ ಡಿ.ಕೆ.ಶಿವಕುಮಾ‌ರ್ ಅವರನ್ನು ಆಹ್ವಾನಿಸಲಾಗಿತ್ತು. ಕೇಂದ್ರ ಸಚಿವ ಅಮಿತ್ ಷಾ ಕೂಡ ಬಂದಿದ್ದರು. ಅದನ್ನು ಬಿಟ್ಟರೆ ಬೇರಾವ ಚರ್ಚೆಗಳೂ ಇಲ್ಲ. ಡಿ.ಕೆ.ಶಿವಕುಮಾರ್ ಪಕ್ಕಾ ಕಾಂಗ್ರೆಸ್ಸಿಗ ಎಂದರು.

ವಿಜಯಪುರದ ಹಂಪಿ ಉತ್ಸವಕ್ಕೆ ಎಲ್ಲಾ ಸಿದ್ಧತೆಗಳಾಗಿವೆ. ಮುಖ್ಯಮಂತ್ರಿ ಬರುತ್ತಾರೆ ಎಂಬ ನಿರೀಕ್ಷೆಗಳಿತ್ತು. ಆದರೆ ಅನಾರೋಗ್ಯದ ಕಾರಣಕ್ಕೆ ಅವರು ಬರುತ್ತಿಲ್ಲ. ಇದಕ್ಕಾಗಿ ಜನರ ಕ್ಷಮೆ ಕೇಳುವಂತೆ ಅವರು ತಮಗೆ ತಿಳಿಸಿದ್ದಾರೆ ಎಂದರು. ಡಿ.ಕೆ.ಶಿವಕುಮಾರ್, ಎಚ್.ಕೆ.ಪಾಟೀಲರಂತಹ ಪ್ರಮುಖ ನಾಯಕರು ಕಾರ್ಯಕ್ರಮಕ್ಕೆ ಬರುವ ನಿರೀಕ್ಷೆಯಿದೆ ಎಂದರು.

ಕಳೆದ ವರ್ಷಕ್ಕಿಂತಲೂ ಈ ಬಾರಿ ವಸ್ತುಪ್ರದರ್ಶನ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನೂ ಹೊಸದಾಗಿ ರೂಪಿಸಲಾಗಿದೆ ಎಂದು ತಿಳಿಸಿದರು. ಮಹಾರಾಷ್ಟ್ರದಲ್ಲಿ ಕನ್ನಡದ ನಿರ್ವಾಹಕರ ಮೇಲೆ ದೌರ್ಜನ್ಯವಾಗುತ್ತಿರುವುದು ಖಂಡನೀಯ ಎಂದರು.

RELATED ARTICLES

Latest News