ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಇನ್ನಷ್ಟು ಅಭ್ಯರ್ಥಿಗಳ ಪ್ರಕಟಣೆ : ಡಿಕೆಶಿ

ಬೆಂಗಳೂರು,ಮಾ.9- ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಇಂದಿನ ಪಟ್ಟಿಯಲ್ಲಿ ಇನ್ನಷ್ಟು ಹೆಸರು ಪ್ರಕಟವಾಗಬೇಕಿತ್ತು. 11ರಂದು ಸ್ಕ್ರೀನಿಂಗ್ ಕಮಿಟಿ ಸಭೆ ನಂತರ ಆ ಹೆಸರುಗಳು ಅಂತಿಮವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಸ್ಥಳೀಯ ಶಾಸಕರು, ಮುಖಂಡರ ಜತೆ ಚರ್ಚೆ ಮಾಡಿದಾಗ ಅವರು ಯಾರ ಹೆಸರನ್ನು ಪ್ರಸ್ತಾಪ ಮಾಡಿರುತ್ತಾರೋ ಹಾಗೂ ನಮ್ಮ ಸಮೀಕ್ಷೆಗಳ ಆಧಾರದ ಮೇಲೆ ನಾವು ಅಭ್ಯರ್ಥಿ ಆಯ್ಕೆ ಮಾಡಿದ್ದೇವೆ. 11ರಂದು ನಡೆಯಲಿರುವ ಸಭೆ ನಂತರ … Continue reading ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಇನ್ನಷ್ಟು ಅಭ್ಯರ್ಥಿಗಳ ಪ್ರಕಟಣೆ : ಡಿಕೆಶಿ