Thursday, September 19, 2024
Homeರಾಜ್ಯರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ದಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ : ಡಿಕೆಶಿ

ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ದಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ : ಡಿಕೆಶಿ

Governor

ಬೆಂಗಳೂರು, ಆ.23- ಬಿಜೆಪಿಯ ಶಾಸಕರುಗಳ ಮಾತುಕೇಳಿ 15 ಬಿಲ್‌ಗಳನ್ನು ರಾಜ್ಯಪಾಲರು ವಾಪಸ್‌‍ ಕಳುಹಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ. ತಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಬಿಜೆಪಿಯವರ ಮಾತನ್ನೇ ಕೇಳುವುದಾದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಏಕಿರಬೇಕು ಎಂದರು.

ಮಸೂದೆಗಳ ಬಗ್ಗೆ ರಾಜ್ಯಪಾಲರು ಸ್ಪಷ್ಟನೆ ಕೇಳಿದರೆ ಉತ್ತರ ನೀಡಬಹುದು. ಅದನ್ನು ತಪ್ಪು ಎಂದು ಹೇಳಲಾಗುವುದಿಲ್ಲ. ರಾಜ್ಯಪಾಲರಿಗೆ ದೇವರು ಒಳ್ಳೆ ಬುದ್ದಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದರು.

ಕಾಂಗ್ರೆಸ್‌‍ ಸರ್ಕಾರವನ್ನು ಪತನಗೊಳಿಸಲು ಯಾವ ಪ್ರಯತ್ನ ಮಾಡಿದರೂ ಪ್ರಯೋಜನ ಆಗುವುದಿಲ್ಲ. ನಾವೂ ಸಹ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಾವು ನಮ್ಮ ಕೆಲಸ ಮಾಡುತ್ತೇವೆ ಎಂದು ಖಾರವಾಗಿ ಉತ್ತರಿಸಿದರು.

ಜಿಂದಾಲ್‌ಗೆ ಭೂಮಿ ನೀಡಿದ್ದನ್ನು ಈ ಹಿಂದೆ ವಿರೋಧಿಸಿದ್ದ ಕಾಂಗ್ರೆಸ್‌‍ ಅದೇ ಜಿಂದಾಲ್‌ಗೆ ಭೂಮಿ ಮಾರಾಟ ಮಾಡಿದೆ ಎಂದು ಕೇಳಿದಾಗ, ಉದ್ಯೋಗ ಸೃಷ್ಟಿಯಾಗಬೇಕು. ರಾಜ್ಯಕ್ಕೆ ಕೈಗಾರಿಕೆಗಳು ಬರಬೇಕು. ಕರ್ನಾಟಕದಲ್ಲಿ ಇರುವ ಕೈಗಾರಿಕಾ ಕಾನೂನಿಗೆ ತಕ್ಕಂತೆ ಅವರಿಗೆ ಭೂಮಿ ನೀಡಿದ್ದೇವೆ. ನಾವು ಅವರಿಗೆ ಹೊಸದಾಗಿ ಭೂಮಿ ಕೊಟ್ಟಿಲ್ಲ.

ಈ ಹಿಂದೆ ಕೊಟ್ಟಿದ್ದನ್ನೇ ಪರಿಶೀಲಿಸಿ ಸೇಲ್‌ ಡೀಡ್‌ ಮಾಡಿಕೊಟ್ಟಿದ್ದೇವೆ. ಸಾವಿರಾರು ಲಕ್ಷಾಂತರ ಜನ ಕೈಗಾರಿಕೆಗಳಿಗೆ ಅನುಕೂಲ ಮಾಡಿಕೊಟ್ಟಂತೆ ಇಲ್ಲಿಯೂ ಅದನ್ನೇ ಮಾಡಲಾಗಿದೆ. ಬಿಜೆಪಿಯವರು ಮಾಡಿದ್ದನ್ನು ನಾವು ಸರಿ ಮಾಡಿಕೊಟ್ಟಿದ್ದೇವೆ ಎಂದರು.

ಗೃಹ ಸಚಿವ ಪರಮೇಶ್ವರ್‌ ದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಕೇಳಿದಾಗ, ಬರುವವರನ್ನು ಬೇಡ ಎನ್ನಲು ಆಗುತ್ತದೆಯೇ? ಅವರದೇ ಇಲಾಖೆ ಕೆಲಸ, ಪಕ್ಷದ ಕೆಲಸ ಇರುತ್ತದೆ. ನಮಗೂ ಸಹ ಎರಡೂ ಕೆಲಸಗಳಿದ್ದು. ಎಲ್ಲರು ಒಟ್ಟಿಗೆ ಹೋಗುತ್ತಿದ್ದೇವೆ ಎಂದು ಹೇಳಿದರು.

RELATED ARTICLES

Latest News