Thursday, April 3, 2025
Homeರಾಜ್ಯಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

ಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಿಂದ ತಲೆ ತಗ್ಗಿಸುವಂತಾಗಿರುವುದು ತೀವ್ರ ನೋವಾಗಿದೆ. ಮನೆಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ಮಹಿಳೆ ನೀಡಿದ ದೂರು ಆಧರಿಸಿ ಮಹಿಳಾ ಆಯೋಗ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದೆ. ಮುಖ್ಯಮಂತ್ರಿಯವರೇ ಖುದ್ದಾಗಿ ನಿಗಾ ವಹಿಸಿದ್ದು, ಗೃಹಸಚಿವರು ಉಸ್ತುವಾರಿ ವಹಿಸಿದ್ದಾರೆ ಎಂದರು.

ಮಾಧ್ಯಮಗಳಿಂದ ತಿಳಿದಿರುವ ಮಾಹಿತಿ ಪ್ರಕಾರ, ಪ್ರಜ್ವಲ್‌ ರೇವಣ್ಣ ದೇಶ ಬಿಟ್ಟು ಪರಾರಿಯಾಗಿದ್ದಾರೆ. ಇದು ಅಕ್ಷಮ್ಯ ಅಪರಾಧ. ಇಡೀ ದೇಶವೇ ನಾಚಿಕೆಪಡುವಂತಹ ವಿಚಾರ. ಸಂಸದರಾಗಿರುವವರು, ಮಾಜಿ ಪ್ರಧಾನಿಯವರ ಮೊಮ್ಮಗ ಈ ರೀತಿ ಕೆಲಸ ಮಾಡಿ ತಲೆ ಮರೆಸಿಕೊಂಡಿರುವುದು ನಾಚಿಕೆಗೇಡು ಎಂದರು.

ಬಿಜೆಪಿ ನಾಯಕರು ಈ ವಿಚಾರವಾಗಿ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂದು ಕಾದು ನೋಡುತ್ತೇನೆ. ಇಲ್ಲಿ ಮಹಿಳೆಯರ ಘನತೆ ಅತೀ ಮುಖ್ಯವಾದ ವಿಚಾರ. ಕಾನೂನು ತನ್ನದೇ ಆದ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.

RELATED ARTICLES

Latest News