ಮೆಂಟಲ್ ಗಿರಾಕಿಗಳ ಬಗ್ಗೆ ಪ್ರತಿಕ್ರಿಯೆ ನೀಡಲ್ಲ : ಡಿಕೆಶಿ

Social Share

ಬೆಂಗಳೂರು,ಮಾ.13- ಕಾಂಗ್ರೆಸ್ ಪಕ್ಷದ ಕುರಿತು ಆಧಾರರಹಿತ ಆರೋಪ ಮಾಡುತ್ತಾ ಬಾಯಿಗೆ ಬಂದಂತೆ ಮಾತನಾಡುವ ಮೆಂಟಲ್ ಗಿರಾಕಿಗಳ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷ ಹಿನಾಯ ಪರಿಸ್ಥಿತಿಯಲ್ಲಿದ್ದು, ಬಿಜೆಪಿ ಸಚಿವರಿಗೆ ಸಿ.ಡಿ. ತೋರಿಸಿ ಪಕ್ಷಕ್ಕೆ ಕರೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದರು.
ಬಿಜೆಪಿ ಪಕ್ಷದಲ್ಲಿ ಆಂತರಿಕವಾಗಿ ಏನೇನಾಗುತ್ತಿದೆಯೋ ಅದನ್ನು ಮೊದಲು ನೋಡಿಕೊಳ್ಳಲಿ. ನಿಮ್ಹಾನ್ಸ್ ಸೇರಬೇಕಾದ ಗಿರಾಕಿಗಳು ಹೇಳಿದ್ದಕ್ಕೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ. ಅವರನ್ನು ಆಸ್ಪತ್ರೆಗೆ ಸೇರಿಸುವುದು ಉತ್ತಮ ಎಂದು ತಿರುಗೇಟು ನೀಡಿದರು.

ಡಿ.ಕೆ. ಶಿವಕುಮಾರ್ ಅವರ ಕೈಗೆ ರಾಜ್ಯ ಸಿಕ್ಕರೆ ಡಿ.ಕೆ. ಶಿವಕುಮಾರ್ ಟೋಲ್ ಎಂಬ ಮತ್ತೊಂದು ಟೋಲ್ ಹಾಕುತ್ತಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದರ ಅವರು, ಟೋಲ್ ವಿಚಾರವಾಗಿ ಮಾತನಾಡುವುದೇ ಆದರೆ, ಸದ್ಯಕ್ಕೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಟೋಲ್ ವಿಚಾರವಾಗಿ ಮಾತನಾಡೋಣ. ಮಿಕ್ಕ ವಿಚಾರವನ್ನು ನಂತರ ಮಾತನಾಡೋಣ ಎಂದರು.

ಶಾಶ್ವತವಾಗಿ ಮುಚ್ಚಿದ ಅಮೇರಿಕಾದ ಸಿಲಿಕಾನ್ ವ್ಯಾಲಿ ಬ್ಯಾಂಕ್

ಧೃವನಾರಾಯಣ ಅವರ ಪುತ್ರನಿಗೆ ಟಿಕೆಟ್ ನೀಡುವಂತೆ ಒತ್ತಡ ಇರುವ ಬಗ್ಗೆ ಕೇಳಿದ ಪ್ರಶ್ನೆಗೆ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಧೃವನಾರಾಯಣ ಅವರ ಕುಟುಂಬಕ್ಕೆ ಆಪ್ತರಾಗಿದ್ದಾರೆ. ಇನ್ನು ಪಕ್ಷದ ಟಿಕೆಟ್ ಹಂಚಿಕೆ ವಿಚಾರವಾಗಿ ಅವರು ಅಂತಿಮ ತೀರ್ಮಾನ ಮಾಡಲಿದ್ದಾರೆ.

ಪಕ್ಷದ ನಿಷ್ಠಾವಂತ ನಾಯಕರಾದ ಧೃವನಾರಾಯಣ ಅವರ ವಿಚಾರದಲ್ಲಿ ನಾನು ಪ್ರಾಮಾಣಿಕವಾಗಿ ನಮ್ಮ ನಾಯಕರಿಗೆ ಯಾವ ಸಲಹೆ ನೀಡಬೇಕೋ ನೀಡಿದ್ದೇನೆ. ಧೃವನಾರಾಯಣ ಅವರಂತಹ ಕಾರ್ಯಾಧ್ಯಕ್ಷರನ್ನು ಕಳೆದುಕೊಂಡಿರುವುದು ಇಡೀ ಪಕ್ಷಕ್ಕೆ ದೊಡ್ಡ ನಷ್ಟವಾಗಿದೆ. ಆ ಆಘಾತದಿಂದ ನಾವಿನ್ನೂ ಹೊರಬರಲು ಸಾಧ್ಯವಾಗಿಲ್ಲ.

ಸಂಘಟನೆ ಶಕ್ತಿ, ತಾಳ್ಮೆ, ನಿಷ್ಠೆ, ಸೌಮ್ಯ ವ್ಯಕ್ತಿತ್ವಕ್ಕೆ ಮತ್ತೊಂದು ಹೆಸರು ಧೃವನಾರಾಯಣ ಅವರು. ಅವರ ಆತ್ಮಕ್ಕೆ ಶಾಂತಿ ಸಿಗುವಂತಹ ಕೆಲಸವನ್ನು ಪಕ್ಷ ಮಾಡಲಿದೆ ಎಂದು ತಿಳಿಸಿದರು.

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ -ಅಖಿಲೇಶ್ ಯಾದವ್ ಭೇಟಿ

ಪಕ್ಷದ ಟಿಕೆಟ್ ಪಟ್ಟಿ ಅಂತಿಮವಾಗುವುದು ಯಾವಾಗ ಎಂದು ಕೇಳಿದಾಗ, ಮಾ.16 ರಂದು ಇಲ್ಲಿ ಒಂದು ಸಭೆ ನಡೆಯಲಿದ್ದು, ಮಾ.17ರಂದು ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದೆ. ಅಲ್ಲಿ ಅಂತಿಮ ತೀರ್ಮಾನವಾಗಲಿದೆ ಎಂದರು.

ಪ್ರಧಾನಮಂತ್ರಿಗಳು ರೌಡಿ ಶೀಟರ್ ಗೆ ಕೈಮುಗಿದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಅವರ ಪಕ್ಷ, ಅವರಿಗೆ ಯಾರು ಬೇಕೋ ಅವರನ್ನು ಸೇರಿಸಿಕೊಂಡಿದ್ದಾರೆ. ಅವರು ಸ್ಯಾಂಟ್ರೋ ರವಿ ಅವರನ್ನಾದರೂ ಸೇರಿಸಿಕೊಳ್ಳಲಿ, ಫೈಟರ್ ರವಿ ಅವರನ್ನಾದರೂ ಸೇರಿಸಿಕೊಳ್ಳಲಿ, ಅತ್ಯಾಚಾರಿಗಳನ್ನು ಜೊತೆಯಲ್ಲಿ ಇಟ್ಟುಕೊಳ್ಳಲಿ, ಲಂಚಕೋರರನ್ನಾದರೂ ಇಟ್ಟುಕೊಳ್ಳಲಿ. ಅದು ಅವರ ಪಕ್ಷದ ವಿಚಾರ. ಅದರ ಬಗ್ಗೆ ನಾನ್ಯಾಕೆ ಮಾತನಾಡಲಿ ಎಂದರು.

ರಾಜಾಜಿನಗರದ ಆಕಾಂಕ್ಷಿಗಳು ತಮ್ಮನ್ನು ಭೇಟಿ ಮಾಡಿ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡುವುದು ಬೇಡ ಎಂಬ ಬೇಡಿಕೆ ಇಟ್ಟಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾವು ಅವರಿಗೆ ಟಿಕೆಟ್ ನೀಡುತ್ತಿದ್ದೇವೆ ಎಂದು ಯಾರು ಹೇಳಿದರು? ಪಕ್ಷದ ಅನುಕೂಲಕ್ಕೆ ತಕ್ಕಂತೆ ತೀರ್ಮಾನ ಮಾಡಲಾಗುವುದು. ಯಾರ ಬೆದರಿಕೆಗೂ ಕಾಂಗ್ರೆಸ್ ಪಕ್ಷ ಬಗ್ಗುವುದಿಲ್ಲ. ದಕ್ಷಿಣ ಕಾಶ್ಮಿರದಲ್ಲಿ ಉಗ್ರರ ಅಡಗುತಾಣ ಪತ್ತೆ

ಪಕ್ಷ ಈ ವಿಚಾರವಾಗಿ ಯಾವ ತೀರ್ಮಾನ ಮಾಡಬೇಕೋ ಅದನ್ನು ಮಾಡಲಾಗುವುದು ಎಂದರು.
ಮಂಡ್ಯವನ್ನು ರಾಷ್ಟ್ರದಲ್ಲಿ ಮಾದರಿ ಜಿಲ್ಲೆ ಮಾಡುವುದಾಗಿ ಪ್ರಧಾನಿ ಹೇಳಿದ್ದಾರೆ. ಮೋದಿ ಅವರು ಯಾರ ಬಗ್ಗೆ ಮಾತನಾಡಿದ್ದಾರೆ, ಯಾರ ಬಗ್ಗೆ ಮಾತನಾಡಿಲ್ಲ ಎಂದು ನಾನು ಹೇಳಬೇಕಾಗಿಲ್ಲ, ಮಾಧ್ಯಮಗಳು ವರದಿ ಮಾಡಿವೆ. ಜನರಿಗೆ ಅದು ತಿಳಿದಿದೆ ಎಂದು ಹೇಳಿದರು.

ಕೆಪಿಟಿಸಿಎಲ್ ನೌಕರರು ವಿದ್ಯುತ್ ಕಡಿತ ಮಾಡಿ ಕೆಲಸಕ್ಕೆ ಗೈರಾಗಿ ವೇತನ ಪರಿಷ್ಕರಣೆಗೆ ಒತ್ತಾಯಿಸಿದ್ದಾರೆ ಎಂಬ ಮಾಹಿತಿ ಇದೆ. ಈ ವಿಚಾರದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

DK Shivakumar, ramesh jarkiholi, mental ,

Articles You Might Like

Share This Article