ಬೆಂಗಳೂರು, ಜ.14- ಸಂಕಷ್ಟದಲ್ಲಿರುವ ರೈತರಿಗೆ ವೈಜ್ಞಾನಿಕ ಬೆಲೆ ಕೊಡಿಸಲು ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.
ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ನಾಡಿನ ಜನರಿಗೆ ಸಂಕ್ರಾತಿಯ ಶುಭಾಷಯಗಳನ್ನು ತಿಳಿಸಿದರು. ರೈತರು ತಮ್ಮ ಬೆಳೆ ಹಾಗೂ ಇಡೀ ಬದುಕನ್ನು ಬೇರೆಯವರಿಗಾಗಿ ತ್ಯಾಗ ಮಾಡುತ್ತಾರೆ. ಅವರು ಆರೋಗ್ಯಪೂರ್ಣವಾಗಿರಬೇಕು ಎಂದು ಕಾಂಗ್ರೆಸ್ ಪರವಾಗಿ ಪ್ರಾರ್ಥಿಸುವುದಾಗಿ ತಿಳಿಸಿದರು.
ಕೋವಿಡ್ ಮಹಾಮಾರಿ ಇನ್ನೂ ಗ್ರಾಮೀಣ ಭಾಗಕ್ಕೆ ಹೆಚ್ಚು ವ್ಯಾಪಿಸಿಲ್ಲ. ರೈತರಿಗೆ ಪೌಷ್ಠಿಕ ಆಹಾರ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸಬೇಕಿದೆ. ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ದೊರಕಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಕಾಂಗ್ರೆಸ್‍ನ ಪಾದಯಾತ್ರೆ ಅಂತ್ಯಗೊಳಿಸಿದ ಕುರಿತಂತೆ ಬಿಜೆಪಿ ನಾಯಕರು ಮಾಡುತ್ತಿರುವ ಟೀಕೆಗಳಿಗೆ ಮುಂದಿನ ದಿನಗಳಲ್ಲಿ ಪ್ರತಿಕ್ರಿಯಿಸುವುದಾಗಿ ಹೇಳಿದರು.
