Friday, January 10, 2025
Homeರಾಜ್ಯಉಗ್ರ ಸ್ವರೂಪಿಣಿ ʻಪ್ರತ್ಯಂಗಿರಾ ದೇವಿʼ ದರ್ಶನ ಪಡೆದ ಡಿಕೆಶಿ

ಉಗ್ರ ಸ್ವರೂಪಿಣಿ ʻಪ್ರತ್ಯಂಗಿರಾ ದೇವಿʼ ದರ್ಶನ ಪಡೆದ ಡಿಕೆಶಿ

ಬೆಂಗಳೂರು,ಜ.9- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇಂದು ಬೆಳಿಗ್ಗೆ ತಮಿಳುನಾಡಿನ ಕುಂಭಕೋಣಂಗೆ ತೆರಳಿ ಪ್ರತ್ಯೇಂಕರ ಹೋಮದಲ್ಲಿ ಭಾಗಿಯಾಗಿದ್ದಾರೆ. ಹೆಲಿಕಾಫ್ಟರ್‌ನಲ್ಲಿ ಪತ್ನಿ ಉಷಾ ಅವರೊಂದಿಗೆ ತೆರಳಿದ ಡಿ.ಕೆ.ಶಿವಕುಮಾರ್‌ ಶ್ರೀ ಮಹಾ ಪ್ರತ್ಯಂಗಿರ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಹೋಮ ಚಟುವಟಿಕೆಯಲ್ಲಿ ಭಾಗವಹಿಸಿದ್ದರು. ವೈಕುಂಠ ಏಕಾದಶಿಗೂ ಮುನ್ನ ಡಿ.ಕೆ.ಶಿವಕುಮಾರ್‌ ದೇವಸ್ಥಾನಗಳ ದರ್ಶನಕ್ಕೆ ತೆರಳಿರುವುದು ಕುತೂಹಲ ಕೆರಳಿಸಿದೆ. ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ನಾನಾ ರೀತಿಯ ಚಟುವಟಿಕೆಗಳು ನಡೆಯುತ್ತಿವೆ. ಅದರ ನಡುವೆ ಡಿ.ಕೆ.ಶಿವಕುಮಾರ್‌ ದೇವರ ಮೊರೆ ಹೋಗಿದ್ದಾರೆ.

ತಮಿಳುನಾಡಿನಲ್ಲಿ ಡಿ.ಕೆ.ಶಿವಕುಮಾರ್‌ ಅವರನ್ನು ಸ್ಥಳೀಯ ಮೇಯರ್‌ ಶರವಣನ್‌, ತಾಂಜಾವೂರು ಜಿಲ್ಲಾ ಕಾಂಗ್ರೆಸ್‌‍ ಅಧ್ಯಕ್ಷ ಲೋಕನಾಥನ್‌, ಕಾಂಗ್ರೆಸ್‌‍ ಮುಖಂಡ ಕೃಷ್ಣಸ್ವಾಮಿ, ವೆಂಕಟೇಶ್‌ ಮತ್ತಿತರರು ಬರಮಾಡಿಕೊಂಡರು. ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿ.ಕೆ.ಶಿವಕುಮಾರ್‌, ಕೇಂದ್ರ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಬಿಜೆಪಿಯೇತರ ಆಡಳಿತ ಇರುವ ರಾಜ್ಯಸರ್ಕಾರಗಳಿಗೆ ಸಮರ್ಪಕವಾದ ಅನುದಾನ ನೀಡುತ್ತಿಲ್ಲ. ತೆರಿಗೆ ಹಂಚಿಕೆಯಲ್ಲೂ ಅನ್ಯಾಯ ಮಾಡುತ್ತಿದೆ ಎಂದು ಕಿಡಿಕಾರಿದರು.

RELATED ARTICLES

Latest News