ಬೆಳಗಾವಿ, ಅ.18- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬೆಳಗಾವಿ ಜಿಲ್ಲೆ ಭೇಟಿ ನೀಡಿದ್ದು, ಅವರನ್ನು ಸ್ವಾಗತಿಸಲು ಪ್ರಮುಖ ಶಾಸಕರು, ಸಚಿವರು ವಿಮಾನನಿಲ್ದಾಣಕ್ಕೆ ಆಗಮಿಸದೇ ಇದ್ದಿದ್ದು ಹಲವು ಕುತೂಹಲಗಳನ್ನು ಕೆರಳಿಸಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ಹುಕ್ಕೇರಿ ಕಾಂಗ್ರೆಸ್ ಕಾರ್ಯಕತರ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದರು.
ಈ ವೇಳೆ ಸ್ಥಳಿಯ ನಾಯಕರು ಮಾತ್ರ ಹಾಜರಿದ್ದರು. ವಿಮಾನನಿಲ್ದಾಣದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದೇನೆ. ಮೊನ್ನೆ ಸತೀಶ್ ಅವರು ಮತ್ತು ನಾನು ಜೊತೆಯಲ್ಲಿಯೇ ಕುಳಿತು ಮಾತನಾಡಿದ್ದೇವೆ. ನಾನು ಬಂದಿರುವುದು ಖಾಸಗಿ ಕಾರ್ಯಕ್ರಮಕ್ಕೆ. ಲಕ್ಷ್ಮಿ ಹೆಬ್ಬಾಳಕರ್ ಅವರು ನಾಮಕರಣ ಕಾರ್ಯಕ್ರಮ ನಿಮಿತ್ತ ಭದ್ರಾವತಿಯಲ್ಲಿ ಇದ್ದಾರೆ. ಕೌಜಲಗಿ ಅವರಿಗೆ ಆರೋಗ್ಯ ಸರಿಯಿಲ್ಲ. ದಿಢೀರ್ ಎಂದು ನಿನ್ನೆ ರಾತ್ರಿ ಈ ಕಾರ್ಯಕ್ರಮ ನಿಗದಿಯಾದ ಕಾರಣಕ್ಕೆ ಬಂದಿದ್ದೇನೆ. ಎಲ್ಲರಿಗೂ ಅವರದೇ ಆದ ವೈಯಕ್ತಿಕ ಕೆಲಸಗಳು ಇರುತ್ತವೆ ಎಂದು ಹೇಳಿದರು.
ಸಿಬಿಐ ತನಿಖೆ ಅಗತ್ಯತೆ ಕುರಿತು ಐಟಿ ಅಧಿಕಾರಿಗಳೇ ನಿರ್ಧರಿಸುತ್ತಾರೆ : ಪರಮೇಶ್ವರ್
ಸತೀಶ್ ಜಾರಕಿಹೊಳಿ ಹಾಗೂ ನಿಮ್ಮ ನಡುವೆ ಬಿರುಕು ಮೂಡಿದೆಯೇ ಎಂದು ಕೇಳಿದಾಗ ನಮ್ಮ ನಡುವೆ ಯಾವುದೇ ಬಿರುಕಿಲ್ಲ. ನನ್ನನ್ನು ಸ್ವಾಗತಿಸಲು ಬರಲಿಲ್ಲ, ಅದು ಇದು, ಎಂದು ನೀವೇ ಏನೇನೋ ಹೇಳುತ್ತೀರಿ?. ಇದೆಲ್ಲಾ ಕೇವಲ ಮಾಧ್ಯಮಗಳ ಸೃಷ್ಟಿ. ನಮ್ಮಲ್ಲಿ ಯಾರ ಬಗ್ಗೆಯೂ ಮುನಿಸಿಲ್ಲ. ಎಲ್ಲಾ ಶಾಸಕರು ನಮ್ಮವರೇ. ನಿಮಗೂ ಹಾಗೂ ಬಿಜೆಪಿಯವರಿಗೆ ಒಂದು ಸುದ್ದಿ ಬೇಕು, ಅದಕ್ಕೆ ಹೀಗೆಲ್ಲಾ ಹೇಳುತ್ತೀರಿ ಎಂದರು.
ಸತೀಶ್ ಅವರು ಶಾಸಕರ ಜೊತೆ ಪ್ರವಾಸ ಮಾಡುತ್ತೇನೆ ಎಂದು ಹೇಳಿದ್ದಾರೆ. ಈ ವಿಚಾರವಾಗಿ ನಾವಿಬ್ಬರೂ ಚರ್ಚಿಸಿದೆವು. ಬೆಳಗಾವಿಯಿಂದಲೇ ಕಾಂಗ್ರೆಸ್ ಬಂಡಾಯ ಆರಂಭ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ ಎಂದು ಕೇಳಿದಾಗ ಜೆ.ಎಚ್. ಪಟೇಲರ ಸರ್ಕಾರದ ವಿರುದ್ದ ಅವಿಶ್ವಾಸ ನಿರ್ಣಯ ಮಂಡನೆ ಆದಾಗ ಅವರು ಒಂದು ಭಾಷಣ ಮಾಡಿದ್ದರು. ಹೋರಿ ಮತ್ತು ನಾಯಿ ಕತೆ. ಅದನ್ನು ನೀವು ಕೇಳಿದ್ದೀರಾ? ಅದನ್ನು ಬಿಜೆಪಿಯವರಿಗೆ ಕೇಳಿಸಿಕೊಳ್ಳಲು ಹೇಳಿ ಎಂದು ತಿರುಗೇಟು ನೀಡಿದರು.
ಶೆಟ್ಟರ್ – ಸಾಹುಕಾರ್ ಭೇಟಿ ಬಗ್ಗೆ ಡಿಕೆಶಿ ಹೇಳಿದ್ದೇನು..?
ಹುಕ್ಕೇರಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರನ್ನು ಭೇಟಿ ಮಾಡಲು, ಈ ಭಾಗದ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಲು ಹಾಗೂ ಮುಖ್ಯವಾಗಿ ಹುಕ್ಕೇರಿ ಮಠದ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದರು.