Friday, May 3, 2024
Homeರಾಜಕೀಯದೇಶ ವಿಭಜನೆಯಾಗಬೇಕು ಎಂದು ನಾನು ಎಲ್ಲಿಯೂ ಹೇಳಿಲ್ಲ : ಡಿ.ಕೆ.ಸುರೇಶ್

ದೇಶ ವಿಭಜನೆಯಾಗಬೇಕು ಎಂದು ನಾನು ಎಲ್ಲಿಯೂ ಹೇಳಿಲ್ಲ : ಡಿ.ಕೆ.ಸುರೇಶ್

ಬೆಂಗಳೂರು,ಫೆ.4-ಬಿಜೆಪಿ ನನ್ನ ಹೇಳಿಕೆಯನ್ನು ತಿರುಚಿ ಪ್ರತಿಭಟನೆ ನಡೆಸುತ್ತಿದೆ ಎಂದು ಕಿಡಿಕಾರಿರುವ ಸಂಸದ ಡಿ.ಕೆ.ಸುರೇಶ್, ದೇಶ ವಿಭಜನೆಯಾಗಬೇಕು ಎಂದು ನಾನು ಎಲ್ಲಿಯೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ಮನೆಯ ಬಳಿ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಅವರು, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಪ್ರತಿಭಟನೆ ನಡೆಸುವ ಹಾಗೂ ಮಾತನಾಡುವ ಸ್ವಾತಂತ್ರ್ಯವಿದೆ. ಅದಕ್ಕೆ ಯಾರೂ ಅಡ್ಡಿಪಡಿಸುವುದಿಲ್ಲ ಎಂದರು.

ಬಿಜೆಪಿಯವರ ಹೋರಾಟಕ್ಕೆ ರಾಜ್ಯ ಸರ್ಕಾರವು ಸಹಕಾರ ನೀಡುತ್ತದೆ. ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ಹೋರಾಟ ಮಾಡುವುದರಲ್ಲಿ ತಪ್ಪೇನು ಇಲ್ಲ. ನನ್ನ ಮನೆ ಬಳಿ ಬಂದವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಹೇಳಿದರು.

ದಕ್ಷಿಣ ಭಾರತದ ರಾಜ್ಯಗಳು ಬಿಜೆಪಿಗೆ ಸಂಕಟವಾಗಿವೆ : ಡಿಸಿಎಂ ಡಿಕೆಶಿ

ನನ್ನ ಹೇಳಿಕೆಗಳು ಸ್ಪಷ್ಟವಾಗಿದೆ. ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ನಾನು ಮಾತನಾಡಿದ್ದೇನೆ. ಬಿಜೆಪಿಯವರು ಅದನ್ನು ತಿರುಚಿ ಪ್ರತಿಭಟನೆ ಮಾಡುತ್ತಿದ್ದಾರೆ. ನಾನು ಎಲ್ಲಿಯೂ ದೇಶ ವಿಭಜನೆಯ ಮಾತನಾಡಿಲ್ಲ. ಇದು ಉದ್ದೇಶಪೂರ್ವಕವಾದ ಅಪಪ್ರಚಾರ. ರಾಜಕಾರಣದಲ್ಲಿ ಬೇರೆ ಬೇರೆ ಆಯಾಮವಿರುತ್ತದೆ. ಬಿಜೆಪಿಯವರು ಚುನಾವಣೆಯ ಕಾರಣಕ್ಕೆ ನಾನಾ ರೀತಿಯ ಷಡ್ಯಂತ್ರಗಳನ್ನು ರೂಪಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

RELATED ARTICLES

Latest News