ಬೆಂಗಳೂರು,ಫೆ.7- ಕುಮಾರಸ್ವಾಮಿಯವರಿಗೆ ರಾಜ್ಯದ ಅಭಿವೃದ್ಧಿಯ ಬಗ್ಗೆ ಆಸಕ್ತಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರುವ ಕೆಲಸ ಮಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯನ್ನು ಭೇಟಿ ಮಾಡಲು ಅವರೇನು ವಿತ್ತ ಸಚಿವರಲ್ಲ ಎಂದು ಟೀಕಿಸಿದರು.
ಕೇಂದ್ರದಿಂದ ಅನುದಾನ ತರಲು ರಾಜ್ಯದ ಸಚಿವರು ನಮ ಜತೆ ಚರ್ಚೆ ಮಾಡುವುದಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, ಮಿಸ್ಟರ್ ಕುಮಾರಸ್ವಾಮಿ ನಿಮಗೆ ಜವಾಬ್ದಾರಿ ಇಲ್ಲವೇ? ಸಚಿವರು ನಿಮ ಜತೆ ಚರ್ಚೆ ಮಾಡಬೇಕೆ?, ಈ ರಾಜ್ಯಕ್ಕೆ ಜವಾಬ್ದಾರಿ ನೀಡಬೇಕು ಎಂದು ನಿಮಗೆ ಜವಾಬ್ದಾರಿ ಇಲ್ಲವೇ?, ನಾವು ಪ್ರಧಾನಿ ಹಾಗೂ ಹಣಕಾಸು ಸಚಿವೆ ಹಾಗೂ ನಮಗೆ ಸಂಬಂಧಿಸಿದ ಇಲಾಖೆಯ ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದೇವೆ. ಕುಮಾರಸ್ವಾಮಿ ಭೇಟಿ ಮಾಡಲು ಅವರು ವಿತ್ತ ಸಚಿವರಲ್ಲ. ಅವರಿಗೆ ರಾಜ್ಯದ ಬಗ್ಗೆ ಆಸಕ್ತಿ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಿ. ಅವರಿಗೆ ಅವರ ವೈಯಕ್ತಿಕ ಆಸಕ್ತಿ ಹೊರತಾಗಿ ರಾಜ್ಯದ ಬಗ್ಗೆ ಯಾವುದೇ ಆಸಕ್ತಿ ಇಲ್ಲ. ರಾಜ್ಯ ಹಾಗೂ ದೇಶದ ಅಭಿವೃದ್ಧಿ ಬಗ್ಗೆ ಅವರಲ್ಲಿ ನಾನು ಆಸಕ್ತಿ ನೋಡಿಲ್ಲ ಎಂದು ತಿರುಗೇಟು ನೀಡಿದರು.
ಬೇರೆ ರಾಜ್ಯಗಳ ಮುಖ್ಯಮಂತ್ರಿ ಗಳು ನನ್ನನ್ನು ಭೇಟಿ ಮಾಡುತ್ತಾರೆ, ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ನನ್ನನ್ನು ಭೇಟಿ ಮಾಡುವುದಿಲ್ಲ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ಮುಖ್ಯಮಂತ್ರಿಗಳನ್ನು ಕೇಳಿ ಎಂದರು.
ನವೆಂಬರ್ನಲ್ಲಿ ಸಿಎಂ ಬದಲಾವಣೆ ಖಚಿತ ಎಂಬ ಅಶೋಕ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಅಶೋಕ್ ಅವರು ಜ್ಯೋತಿಷ್ಯ ಕಲಿಯುತ್ತಿರುವ ಬಗ್ಗೆ ಕೇಳಿ ಬಹಳ ಸಂತೋಷವಾಯಿತು. ನನಗೂ ಜ್ಯೋತಿಷ್ಯ ಕೇಳುವ ಚಟ ಇದೆ. ಅವರು ಬಿಡುವಿನ ಸಮಯ ನೀಡಿದಾಗ ನಾನು ಹೋಗಿ ಶಾಸ್ತ್ರ ಕೇಳುತ್ತೇನೆ ಎಂದರು.
ಸಿಬಿಐ ತನಿಖೆಗೆ ಯಾಕೆ ನೀಡಬೇಕು? : ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವ ಬಗ್ಗೆ ಹೈಕೋರ್ಟ್ ಇಂದು ತೀರ್ಪು ನೀಡಲಿರುವ ಬಗ್ಗೆ ಕೇಳಿದಾಗ, ಯಾವ ಕಾರಣಕ್ಕೆ ಸಿಬಿಐ ತನಿಖೆಗೆ ನೀಡಬೇಕು? ಲೋಕಾಯುಕ್ತ ತನಿಖೆ ನಡೆಯುತ್ತಿರುವಾಗ, ಇಡಿ ಕೂಡ ತನಿಖೆ ಮಾಡುತ್ತಿದೆ. ಈ ಪರಿಸ್ಥಿತಿಯಲ್ಲಿ ಮೂರನೇ ಸಂಸ್ಥೆ ತನಿಖೆ ಮಾಡಲು ಯಾಕೆ ನೀಡುತ್ತಾರೆ? ಈ ರೀತಿ ನೀಡಲು ಅವಕಾಶ ಇಲ್ಲ. ಈ ಬಗ್ಗೆ ಅನೇಕ ನ್ಯಾಯಾಲಯದ ತೀರ್ಪುಗಳಿವೆ. ನನ್ನ ವಿರುದ್ಧವೂ ಇದೇ ರೀತಿ ಕೇಸ್ ದಾಖಲಿಸಿರುವುದರ ವಿರುದ್ಧ ನಾನು ಬಡಿದಾಡುತ್ತಿದ್ದೇನೆ. ಇದರ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಮೇಲನವಿ ಸಲ್ಲಿಸಿದ್ದೇನೆ ಎಂದು ತಿಳಿಸಿದರು.
ಮೇಕೆದಾಟು ವಿಚಾರದಲ್ಲಿ ಡಿಎಂಕೆ ಸರ್ಕಾರವನ್ನು ಡಿಕೆಶಿ ಒಪ್ಪಿಸಲಿ
ಬೆಂಗಳೂರು,ಫೆ.7-ಮೇಕೆದಾಟು ಅಣೆಕಟ್ಟೆ ವಿಚಾರದಲ್ಲಿ ಇಂಡಿ ಮೈತ್ರಿಕೂಟದ ಡಿಎಂಕೆ ಸರ್ಕಾರವನ್ನು ಒಪ್ಪಿಸುವ ಕೆಲಸವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮೊದಲು ಮಾಡಲಿ ಎಂದು ಜೆಡಿಎಸ್ ಆಗ್ರಹಿಸಿದೆ.
ಈ ಸಂಬಂಧ ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ನ್ಯಾಯಾಲಯದಲ್ಲಿರುವ ಅರ್ಜಿಯನ್ನು ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಹಿಂತೆಗೆದುಕೊಳ್ಳುವ ಕೆಲಸ ಮಾಡಿಸಲಿ. ಆಮೇಲೆ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರಮೋದಿ ಅವರೊಂದಿಗೆ ಚರ್ಚಿಸಿ ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸುವ ಕೆಲಸ ಮಾಡುತ್ತಾರೆ ಎಂದಿದ್ದಾರೆ.
ಹಲವು ದಶಕಗಳಿಂದ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರ ಕಾವೇರಿ ನೀರಿನ ಸಮಸ್ಯೆ ಬಗ್ಗೆ ಇಲ್ಲಿಯವರೆಗೂ ಸಂಸತ್ನಲ್ಲಿ ರಾಜ್ಯದ ಪರ ಗಟ್ಟಿ ದನಿಯಲ್ಲಿ ಪ್ರಶ್ನೆಯನ್ನೇ ಮಾಡಲಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ಸಂಸದರು ಕರ್ನಾಟಕದ ಸಮಸ್ಯೆ ಬಗ್ಗೆ ಎಷ್ಟು ಮಾತನಾಡಿದ್ದಾರೆ ಂದು ಪ್ರಶ್ನಿಸಿರುವ ಜೆಡಿಎಸ್, ನಿಮನ್ನು ನೀವೇ ಪ್ರಶ್ನೆ ಮಾಡಿಕೊಳ್ಳಿ ಕಾಂಗ್ರೆಸ್ಸಿಗರೇ ಎಂದು ಛೇಡಿಸಿದೆ.