Thursday, February 22, 2024
Homeರಾಜ್ಯಮದ್ಯ ಸೇವಿಸಿ ವಾಹನ ಚಾಲನೆ ಕೇಸ್ ಫಿಕ್ಸ್

ಮದ್ಯ ಸೇವಿಸಿ ವಾಹನ ಚಾಲನೆ ಕೇಸ್ ಫಿಕ್ಸ್

ಬೆಂಗಳೂರು, ಡಿ.31- ವರ್ಷಾಚರಣೆ ಸಂಭ್ರಮದಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಬೇಡಿ ಎಂದು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಅನುಚೇತ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಒಂದು ವೇಳೆ ಕುಡಿದು ವಾಹನ ಚಲಾಯಿಸಿದರೆ ಅಂತಹ ಚಾಲಕ/ಸವಾರರನ್ನು ಪತ್ತೆಹಚ್ಚಿ ಅವರುಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ನಗರದಾದ್ಯಂತ ಸಂಚಾರ ವಿಭಾಗದ ಪೊಲೀಸರು ತಪಾಸಣೆಯಲ್ಲಿರುತ್ತಾರೆ. ಯಾರಾದರೂ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ವೀಲಿಂಗ್ ಮಾಡುವುದು, ಅತಿ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದರೆ ಅವರುಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ಅನುಚೇತ್ ಅವರು ಎಚ್ಚರಿಕೆ ನೀಡಿದರು.

ಹೊಸ ವರ್ಷಾಚರಣೆ : 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರ

ಮದ್ಯಪಾನ ಮಾಡಿ ವಾಹನ ಚಾಲನೆ/ಸವಾರಿ ಮಾಡುವವರ ವಿರುದ್ಧ ಕಳೆದ 10 ದಿನಗಳಿಂದ ಸಂಚಾರ ವಿಭಾಗದ ಪೆಪೊಲೀಸರು ನಗರದಾದ್ಯಂತ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡಿದ್ದಾರೆ. ಕಳೆದ 21ರಿಂದ 30ರ ವರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ಒಟ್ಟು 27,280ಕ್ಕೂ ಹೆಚ್ಚು ವಾಹನಗಳನ್ನು ತಪಾಸಣೆ ನಡೆಸಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿದ್ದ 717 ವಾಹನ ಸವಾರರು ಮತ್ತು ಚಾಲಕರ ವಿರುದ್ಧ ಐಎಂವಿ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ವರ್ಷಾಂತ್ಯದಲ್ಲಿ ಹೆಚ್ಚಾಗಿ ಸಂಭವಿಸಬಹುದಾದ ರಸ್ತೆ ಅಪಘಾತಗಳನ್ನು ತಡೆಗಟ್ಟುವ ದೃಷ್ಟಿಯಿಂದ ಈ ಕಾರ್ಯಾಚರಣೆಯನ್ನು ನಿರಂತರವಾಗಿ ಮುಂದುವರೆಸಲಾಗುವುದು ಎಂದು ತಿಳಿಸಿದ್ದಾರೆ.

RELATED ARTICLES

Latest News