ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದ ವೈದ್ಯರ ಬಂಧನ

Social Share

ಬಸ್ತಿ(ಉತ್ತರಪ್ರದೇಶ),ಅ.4-ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿದ್ದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಇಲ್ಲಿನ ಪೊಲೀಸರು ವೈದ್ಯರನ್ನು ಬಂಧಿಸಿದ್ದಾರೆ. ಬಸ್ತಿ ಸದರ್ ಕೊಟ್ವಾಲಿ ಪ್ರದೇಶದಲ್ಲಿರುವ ಆಸ್ಪತ್ರೆಗೆ ಮಹಿಳೆಯನ್ನು ಕರೆಸಿಕೊಂಡ ವೈದ್ಯ ನಂತರ ಆಕೆಯನ್ನು ಹಾಸ್ಟೆಲ್ ಕೋಣೆಗೆ ಕರೆದೊಯ್ದು, ಅಲ್ಲಿ ಆತ ಹಾಗು ಇಬ್ಬರು ಸಹೋದ್ಯೋಗಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೀತಿಗೊಂಡ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿರುವ ಸಂತ್ರಸ್ಥೆ ಬಸ್ತಿಯಿಂದ ಲಖನೌಗೆ ಆಗಮಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡು ಅಸ್ಪತ್ರೆ ಮೇಲೆ ದಾಳಿ ನಡೆಸಲಾಗಿದೆ.

ಕಾಮುಕ ವೈದ್ಯರನ್ನು ಬಂಧಿಸಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Articles You Might Like

Share This Article