ದೊಡ್ಡಬಳ್ಳಾಪುರ,ಸೆ.3- ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಪಟಾಕಿ ದುರಂತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ಬಾಲಕ ರಾತ್ರಿ ಮೃತಪಟ್ಟಿದ್ದಾನೆ. ದೊಡ್ಡಬಳ್ಳಾಪುರದ ಮುತ್ತೂರಿನಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಬಾಲಕನೊಬ್ಬ ಸಾವನ್ನಪ್ಪಿ ಪೊಲೀಸ್ ಸಿಬ್ಬಂದಿ ಹಾಗೂ ಮತ್ತೊಬ್ಬ ಬಾಲಕ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಯುವಕ ಯೋಗೇಶ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಪಟಾಕಿ ಸ್ಫೋಟದಲ್ಲಿ 15 ವರ್ಷದ ಮುನಿ (ಧನುಷ್ ರಾವ್) ಎಂಬ ಬಾಲಕ ಮರಣ ಹೊಂದಿದ್ದು, ತೀವ್ರವಾಗಿ ಗಾಯಗೊಂಡಿದ್ದ ಯೋಗೇಶ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಮೂವರ ಬಂಧನ: ಈಗಾಗಲೆ ಆಯೋಜಕರಲ್ಲಿ ಮೂವರನ್ನು ದೊಡ್ಡಬಳ್ಳಾಪುರ ನಗರಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ.
ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಜಾಕೀರ್ ಹುಸೇನ್, ನಾಗರಾಜು, ಪವರ್ ಲ್ಟಿ್ ವಾಹನ ಆಪರೇಟರ್ ಮುನಿರಾಜು, ಚೇತನ್, ಗಣೇಶ್, ಲೋಕೇಶ್, ಮುನಿ ಅಕ್ಕಯ್ಯಮ, ಧನಂಜಯ ಸೇರಿ 9 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.ಪಟಾಕಿ ನಿಷೇಧ: ಮುತ್ತೂರು 2025-26ನೇ ಸಾಲಿನ ಗೌರಿ-ಗಣೇಶ ಹಬ್ಬದ ಪ್ರಯುಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುಮಾರು 1800 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.
ಸಾರ್ವಜನಿಕರ ಹಿತದೃಷ್ಟಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಗಣೇಶ ಪ್ರತಿಷ್ಠಾಪನೆ ಸಮಯದಲ್ಲಾಗಲಿ, ಗಣೇಶ ವಿಸರ್ಜನಾ ಸಮಯದಲ್ಲಾಗಲಿ, ಮೆರವಣಿಗೆಯ ಸಂದರ್ಭದಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸ್ಥಳಗಳಲ್ಲಾಗಲಿ ಮತ್ತು ಯಾವುದೇ ರಾಜಕೀಯ ಹಾಗೂ ಧಾರ್ಮಿಕ ಸಮಾವೇಶ ಕಾರ್ಯಕ್ರಮಗಳಲ್ಲಾಗಲಿ ಪಟಾಕಿ, ಸಿಡಿಮದ್ದು ಮತ್ತು ಇನ್ನಿತರೆ ಸ್ಫೋಟಕ ವಸ್ತುಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಡಳಿತ ಆದೇಶಿಸಿದೆ.
- ಛತ್ತೀಸ್ಗಢ : ಅಣೆಕಟ್ಟಿನ ಒಂದು ಭಾಗ ಕುಸಿದು ಪ್ರವಾಹ, ನಾಲ್ವರ ಸಾವು
- ಎಸ್-400 ಕ್ಷಿಪಣಿಗಳ ಹೆಚ್ಚುವರಿ ಪೂರೈಕೆ ಬಗ್ಗೆ ಮಾತುಕತೆ
- ನಾನು ಯಾವ ಪಕ್ಷಕ್ಕೂ ಸೇರಲ್ಲ, ಕೊನೆಯವರೆಗೂ ಕಾಂಗ್ರೆಸ್ನಲ್ಲೇ ಇರುತ್ತೇನೆ : ಕೆ.ಎನ್.ರಾಜಣ್ಣ
- ಪ್ರಧಾನಿ ಮೋದಿ ತಾಯಿಗೆ ನಿಂದನೆ ಖಂಡಿಸಿ ನಾಳೆ ಬಿಹಾರ ಬಂದ್
- ಪ್ರತಿ ಮಗುವಿಗೂ ಪೋಷಕರಿಬ್ಬರ ಪ್ರೀತಿ ಪಡೆಯುವ ಹಕ್ಕಿದೆ ; ಸುಪ್ರೀಂ ಕೋರ್ಟ್