ಬೆಂಗಳೂರು,ಜ.23- ಮುಖ್ಯಮಂತ್ರಿ ಹುದ್ದೆಯ ವಿಚಾರವಾಗಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ ದಿನದ ಅಂಗವಾಗಿ ವಿಧಾನಸೌಧದ ಮುಂದಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಅವರು ಮುಖ್ಯಮಂತ್ರಿಗಳಾಗುವಂತೆ ಆಶಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದರು.ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆ ವರದಿ ನೀಡಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.
ದಾವೋಸ್ ಶೃಂಗಸಭೆ :
ದಾವೋಸ್ ಶೃಂಗಸಭೆಯಲ್ಲಿ ಭಾಗವಹಿಸುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಸಾಲಿನ ಆಯವ್ಯಯದ ಸಿದ್ಧತೆಯಲ್ಲಿ ತೊಡಗಿಕೊಳ್ಳಬೇಕಾಗಿರುವುದರಿಂದ 2025 ರ ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.
ಬಿಜೆಪಿಯ ಆರೋಪಗಳು ರಾಜಕೀಯ ಪ್ರೇರಿತ :
ನಿಗಮ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಯವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದರು.
ಲೋಕಾಯುಕ್ತದವರು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಕುಟುಂಬದವರಿಗೆ ಕ್ಲೀನ್ ಚಿಟ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ತಮಗೆ ಮಾಹಿತಿ ಇಲ್ಲವೆಂದು ತಿಳಿಸಿದರು.
ಭಾರತವನ್ನು ಬ್ರಿಟಿಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟಿಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ರವರು ದೇಶಕ್ಕಾಗಿ ತಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128 ನೇ ಜನ ದಿನ. ದೇಶದ ಬಗ್ಗೆ ಅಪಾರ ಗೌರವಾಭಿಮಾನ ಹೊಂದಿದ್ದ ಮಹಾನ್ ದೇಶಭಕ್ತ. ಈಗಿನ ಐಎಎಸ್ನಂತೆ ಬ್ರಿಟೀಷರ ಕಾಲದಲ್ಲಿದ್ದ ಐಸಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಆದರೆ ತಮ ಉಜ್ವಲ ಭವಿಷ್ಯವನ್ನು ತ್ಯಾಗ ಮಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ ಬದುಕನ್ನು ಮೀಸಲಾಗಿಟ್ಟರು. ಎರಡು ಬಾರಿ ಕಾಂಗ್ರೆಸ್ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮಹಾತಗಾಂಧಿಯವರು ಪ್ರತಿಪಾದಿಸುತ್ತಿದ್ದ ಸತ್ಯ ಹಾಗೂ ಅಹಿಂಸೆಯ ಮಾರ್ಗದಲ್ಲಿ ನಡೆದರೆ ಭಾರತ ಸ್ವಾತಂತ್ರ್ಯ ಹೊಂದುವುದು ಕಷ್ಟಸಾಧ್ಯ ಎಂಬುದು ಸುಭಾಷರ ಅಭಿಪ್ರಾಯವಾಗಿತ್ತು.
ಆದ್ದರಿಂದ ಶಸ್ತ್ರಾಸ್ತ್ರಗಳನ್ನು ಬಳಸಿಯೇ ಬ್ರಿಟೀಷರನ್ನು ಭಾರತದಿಂದ ಹೊರದೂಡುವ ಉದ್ದೇಶದಿಂದ ಐಎನ್ಎ (ಇಂಡಿಯನ್ ನ್ಯಾಷನಲ್ ಆರ್ಮಿ)ಯನ್ನು ಸ್ಥಾಪಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ರ ಜನದಿನದಂದು ಅವರ ಜೀವನ-ಸಾಧನೆಗಳನ್ನು ಸರಿಸುವ ಜೊತೆಗೆ ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಬೇಕಿದೆ. ಈ ದಿಸೆಯಲ್ಲಿ ಸರ್ಕಾರ ಈ ಮಹಾನ್ ನಾಯಕನಿಗೆ ಗೌರವ ಸಲ್ಲಿಸಿದೆ ಎಂದರು.