ಕಾಂಗ್ರೆಸ್ ಪಾದಯಾತ್ರೆಯಿಂದ ಟ್ರಾಫಿಕ್ ಕಿರಿಕಿರಿ, ಹೈಕೋರ್ಟ್ ಅಸಮಾಧಾನ

Social Share

ಬೆಂಗಳೂರು, ಮಾ.3- ಕಾಂಗ್ರೆಸ್‍ನ ಪಾದಯಾತ್ರೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ನಗರದಲ್ಲಿ ಇನ್ನು ಮುಂದೆ ಯಾವುದೇ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ತಾಕೀತು ಮಾಡಿದೆ. ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆಯಿಂದ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ಅನುಭವಿಸಿದ ತೊಂದರೆ, ಸ್ವತಃ ನ್ಯಾಯಾಧೀಶರೇ ಟ್ರಾಫಿಕ್‍ಜಾಮ್‍ನಲ್ಲಿ ಸಿಲುಕಿ ನ್ಯಾಯಾಲಯಕ್ಕೆ ತಡವಾಗಿ ಬರಬೇಕಾದ ಪರಿಸ್ಥಿತಿ ಉಂಟಾಯಿತು. ಇದರಿಂದ ತೀವ್ರ ಅಸಮಾಧಾನಗೊಂಡ ನ್ಯಾಯಾಲಯ ಇನ್ನು ಮುಂದೆ ನಗರದಲ್ಲಿ ಯಾವುದೇ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಆದೇಶ ನೀಡಿದೆ.
ಮುಖ್ಯ ನ್ಯಾಯಮೂರ್ತಿ ರಿತುರಾಜ್ ಆವಸ್ಥಿ ಹಾಗೂ ನ್ಯಾಯಮೂರ್ತಿ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ಈ ಆದೇಶ ನೀಡಿದ್ದು, ಫ್ರೀಡಂಪಾರ್ಕ್‍ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ನೀಡಿ ಆ ಸಂದರ್ಭದಲ್ಲೂ ಕೂಡ ಸಂಚಾರಕ್ಕೆ ಅಡಚಣೆಯಾಗದಂತೆ ನೋಡಿಕೊಳ್ಳಬೇಕು.
ಪ್ರತಿಭಟನೆ ನಡೆಯುವ ವೇಳೆ ಜನರ ದಿನನಿತ್ಯದ ಚಟುವಟಿಕೆಗಳಿಗೆ, ವಹಿವಾಟುಗಳಿಗೆ ಧಕ್ಕೆಯಾಗ ದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದೆ. ಮೇಕ್ರಿ ಸರ್ಕಲ್‍ನಿಂದ ಹೈಕೋರ್ಟ್ ತಲುಪಲು ನ್ಯಾಯಾೀಶರಾದ ನಮಗೇ ಒಂದು ಗಂಟೆ ಬೇಕಾಯಿತು. ಇನ್ನು ಜನಸಾಮಾನ್ಯರ ಪಾಡೇನು? ಇಂತಹ ಪರಿಸ್ಥಿತಿಯಲ್ಲಿ ಸಿಲುಕಿ ಜನಸಾಮಾನ್ಯರು ಓಡಾಡುವುದು ಹೇಗೆ ಎಂದು ಪ್ರಶ್ನಿಸಿದ ನ್ಯಾಯಾಲಯ ಇದಕ್ಕೆಲ್ಲ ಕೂಡಲೇ ನಿರ್ಬಂಧ ವಿಧಿಸಿ ಎಂದು ಸೂಚನೆ ನೀಡಿತು.

Articles You Might Like

Share This Article