Monday, March 10, 2025
Homeರಾಜ್ಯಡಿ. ಕೆ.ಶಿವಕುಮಾರ್ ಅವರೇ ಕಲಾವಿದರನ್ನು ಕಾಂಗ್ರೆಸ್ ಕಾರ್ಯಕರ್ತರಂತೆ ನಡೆಸಿಕೊಳ್ಳಬೇಡಿ : ಆರ್.ಆಶೋಕ್ ಕಿಡಿ

ಡಿ. ಕೆ.ಶಿವಕುಮಾರ್ ಅವರೇ ಕಲಾವಿದರನ್ನು ಕಾಂಗ್ರೆಸ್ ಕಾರ್ಯಕರ್ತರಂತೆ ನಡೆಸಿಕೊಳ್ಳಬೇಡಿ : ಆರ್.ಆಶೋಕ್ ಕಿಡಿ

Don't treat artists like Congress party workers: R. Ashok

ಬೆಂಗಳೂರು, ಮಾ.2- ಕಲಾವಿದರು ನಿಮ್ಮ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ. ನಿಮ್ಮ ಪಕ್ಷದ ಕಾರ್ಯಕರ್ತರನ್ನು ನಡೆಸಿಕೊಂಡ ರೀತಿ ಕಲಾವಿದರನ್ನು ನಡೆಸಿಕೊಳ್ಳಬೇಡಿ. ಕಲಾವಿದರಿಗೆ ಗೌರವ ಕೊಡುವುದನ್ನು ಕಲಿಯಿರಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್ .ಆಶೋಕ್ ಕಿಡಿಕಾರಿದ್ದಾರೆ.

ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಉಲ್ಲೇಖಿಸಿ ಸರ್ಕಾರದ ವಿರುದ್ಧ ಪೋಸ್ಟ್ ಮಾಡಿದ್ದಾರೆ. ಅನುದಾನ ಬೇಕಾದರೆ ಶಾಸಕರು ತಮ್ಮ ಬಳಿ ತಗ್ಗಿ-ಬಗ್ಗಿ ನಡೆಯಬೇಕು ಎಂದು ದರ್ಪ ಮೆರೆದಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಸಾಹೇಬರು ಈಗ ಕನ್ನಡ ಸಿನಿಮಾ ಕಲಾವಿದರಿಗೆ ಬಹಿರಂಗ ವೇದಿಕೆಯಲ್ಲಿ ಧಮ್ಮಿ ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು, ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ ಕಲಾವಿದರಿಗೆ ಮನ್ನಣೆ ಸಿಗುತ್ತದೆ, ಇಲ್ಲವಾದರೆ ಸಿಗುವುದಿಲ್ಲ ಎನ್ನುವ ನಿಮ್ಮ ಮಾತು ನಿಮ್ಮ ಸ್ಥಾನಕ್ಕೆ ಶೋಭೆ ತರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಾಜದಲ್ಲಿ ಎಲ್ಲರೂ ತಮಗೆ ಮತ್ತು ತಮ್ಮ ಪಕ್ಷಕ್ಕೆ ಸೆಲ್ಯೂಟ್ ಹೊಡೆದು, ತಮ್ಮ ಅಡಿಯಾಳುಗಳಂತೆ ನಡೆದುಕೊಳ್ಳಬೇಕು ಎನ್ನುವ ಕೆಟ್ಟ ಮನಸ್ಥಿತಿಯಿಂದ ಹೊರಗೆ ಬನ್ನಿ. ಕಲಾವಿದರು ಯಾರ ಸ್ವತ್ತೂ ಅಲ್ಲ. ಕಲಾವಿದರಿಗೆ ಅವರ ವಿವೇಚನೆಗೆ ತಕ್ಕಂತೆ ನಡೆದುಕೊಳ್ಳುವ, ಯಾರ ಜೊತೆ ಬೇಕಾದರೂ ಗುರುತಿಸಿಕೊಳ್ಳುವ ಅಥವಾ ಗುರುತಿಸಿಕೊಳ್ಳದಿರುವ ಸ್ವಾತಂತ್ರ್ಯವಿದೆ, ಹಕ್ಕಿದೆ ಎಂದು ಆಶೋಕ್ ಅವರು, ಡಿಸಿಎಂ ಶಿವಕುಮಾ‌ರ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

RELATED ARTICLES

Latest News