ದೊಡ್ಡಬಳ್ಳಾಪುರ, ಫೆ.19- ಕ್ರಿಕೆಟ್ ಪಂದ್ಯಾವಳಿ ವೇಳೆ ನಡೆದಿದ್ದ ಗಲಾಟೆ ಸಂದರ್ಭದಲ್ಲಿ ಇಬ್ಬರು ಯುವಕರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳು ಪೊಲೀಸರ ಗುಂಡೇಟಿನಿಂದ ಗಾಯಗೊಂಡು ಸಿಕ್ಕಿಬಿದ್ದಿದ್ದಾರೆ.
ವಿನಯ್ ಮತ್ತು ತ್ರಿಮೂರ್ತಿ (ಅಪ್ಪಾಜಿ) ಬಂತ ಆರೋಪಿ ಗಳಾಗಿದ್ದು, ಇವರಿಬ್ಬ ರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಫೆ.17ರಂದು ಮಧ್ಯಾಹ್ನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕ್ರಿಕೆಟ್ ಪಂದ್ಯಾವಳಿ ವೇಳೆ ಕ್ಷುಲ್ಲಕ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ.
ಆ ಸಂದರ್ಭದಲ್ಲಿ ಒಂದು ಗುಂಪಿನಲ್ಲಿದ್ದವರು ಚಾಕುವಿನಿಂದ ಭರತ್ ಮತ್ತು ಪ್ರತೀಕ್ ಎಂಬ ಇಬ್ಬರು ಯುವಕರಿಗೆ ನಡುರಸ್ತೆಯಲ್ಲಿ ಭೀಕರವಾಗಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ದೊಡ್ಡಬೆಳವಂಗಲ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ಆರೋಪಿಗಳಿಗಾಗಿ ಶೋಧ ಕೈಗೊಂಡಿದ್ದರು. ಇಂದು ಬೆಳಗಿನ ಜಾವ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ಹರೀಶ್ ಮತ್ತು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಹರೀಶ್ ಅವರಿಗೆ ಆರೋಪಿಗಳು ಸ್ನೇಹಿತರ ಬಳಿ ಹಣ ತೆಗೆದುಕೊಳ್ಳಲು ಬರುತ್ತಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ಭಾರತದೊಳಗೆ ನುಸುಳಲೆತ್ನಿಸಿದ 13 ಮಂದಿ ನುಸುಳುಕೋರರ ಬಂಧನ
ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದ ಹಳೆ ಪೆಟ್ರೋಲ್ ಬಂಕ್ ಬಳಿ ಆರೋಪಿಗಳಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಅವರನ್ನು ಇಂದು ಬೆಳಗಿನ ಜಾವ ಬಂಸಲು ತೆರಳಿದ್ದಾರೆ. ಪೊಲೀಸರನ್ನು ಕಂಡ ಆರೋಪಿಗಳು ಅವರ ಮೇಲೆಯೇ ಹಲ್ಲೆ ನಡೆಸಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಮುಂದಾದಾಗ ಇನ್ಸ್‍ಪೆಕ್ಟರ್ ಅವರು ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದ್ದಾರೆ.
ಪೊಲೀಸರ ಮಾತಿಗೆ ಕಿವಿಗೊಡದೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಇಬ್ಬರು ಇನ್ಸ್‍ಪೆಕ್ಟರ್‍ಗಳು ಹಾರಿಸಿದ ಗುಂಡುಗಳು ಇಬ್ಬರು ಆರೋಪಿಗಳ ಕಾಲಿಗೆ ತಗುಲಿ ಕುಸಿದುಬಿದ್ದಿದ್ದಾರೆ. ತಕ್ಷಣ ಆರೋಪಿಗಳನ್ನು ಸುತ್ತುವರೆದು ವಶಕ್ಕೆ ಪಡೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಿನ್ನೆ ಸಚಿವ ಎಂಟಿಬಿ ನಾಗರಾಜ್ ಅವರು ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುತ್ತೇವೆ ಎಂದು ಭರವಸೆ ನೀಡಿದ್ದರು. ಭರವಸೆ ಕೊಟ್ಟ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪಂದ್ಯಾವಳಿಗೆ ನಿರ್ಬಂಧ: ಚುನಾವಣೆ ಮುಗಿಯುವವರೆಗೂ ಯಾವುದೇ ಪಂದ್ಯಾವಳಿ ನಡೆಸದಂತೆ ಬೆಂಗಳೂರು ಗ್ರಾಮಾಂತರ ಎಸ್‍ಪಿ ಮಲ್ಲಿಕಾರ್ಜುನ ಬಾಲದಂಡಿ ತಾಕೀತು ಮಾಡಿದ್ದಾರೆ.
ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಸಮಸ್ಯೆಗಳಿಗೆ ಇನ್ನೂ ಸಿಕ್ಕಿಲ್ಲ ಮುಕ್ತಿ
ಕ್ರಿಕೆಟ್ ಆಡುವಾಗ ಚಾಕುವಿನಿಂದ ಇರಿದು ಇಬ್ಬರು ಯುವಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ರಾಜಕೀಯ ಪ್ರೇರಿತ ಟೂರ್ನಿಗೆ ನಿರ್ಬಂಧ ವಿಧಿಸಲಾಗಿದೆ. ಚುನಾವಣೆ ಮುಗಿಯುವವರೆಗೂ ಯಾವುದೇ ಟೂರ್ನಿಗೂ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.
ಅಕ್ರಮವಾಗಿ ಪಂದ್ಯಾವಳಿ ಆಯೋಜನೆ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಾಲದಂಡಿ ಅವರು ಎಚ್ಚರಿಕೆ ನೀಡಿದ್ದಾರೆ.
double, murder, Two accused, Shot,