ಬೆಂಗಳೂರು,ಸೆ.11-ತಮ್ಮ ಮೇಲೆ ಬಂದಿರುವ ವರದಕ್ಷಿಣೆ ಕಿರುಕುಳ ಆರೋಪವನ್ನು ನಟ, ನಿರ್ದೇಶಕ ಎಸ್. ನಾರಾಯಣ್ ತಳ್ಳಿ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಸೊಸೆ ಮನೆಬಿಟ್ಟು ಹೋಗಿ 14 ತಿಂಗಳಾಗಿವೆ. ಮನೆ ಬಿಟ್ಟು ಹೋದ ಕೂಡಲೇ ದೂರು ಕೊಡಬಹುದಿತ್ತಲ್ಲ. ಯಾಕೆ ಇಷ್ಟು ತಡ ಮಾಡಿದರು ಎಂದು ಪ್ರಶ್ನಿಸಿದರು.
ವರದಕ್ಷಿಣೆ ಪಿಡುಗು ತೊಲಗಬೇಕು ಎಂದು ಸಿನಿಮಾ ಮಾಡಿದವನು ನಾನು, ಆದರೆ ಈಗ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಈ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.