ಪ್ರವೀಣ್ ನೆಟ್ಟಾರು ಕುಟುಂಬಕ್ಕೆ 10 ಲಕ್ಷ ರೂ. ವೈಯಕ್ತಿಕ ನೆರವು ಘೋಷಿಸಿದ ಸಚಿವ ಅಶ್ವತ್ಥನಾರಾಯಣ

Social Share

ಬೆಂಗಳೂರು, ಜು.28- ಸಮಾಜವಿರೋಧಿ ಶಕ್ತಿಗಳ ಅಮಾನುಷ ಕ್ರೌರ್ಯಕ್ಕೆ ಬಲಿಯಾದ ಬಿಜೆಪಿ ಕಾರ್ಯಕರ್ತ ಮತ್ತು ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬಕ್ಕೆ ವೈಯಕ್ತಿಕ ವಾಗಿ 10 ಲಕ್ಷ ರೂ. ನೆರವು ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಇದನ್ನು ನೆರವು ಎಂದು ಹೇಳಲು ಇಷ್ಟ ಪಡುವುದಿಲ್ಲ. ಇದು ನನ್ನ ಕರ್ತವ್ಯ ವಾಗಿದೆ ಎಂದರು. 10 ಲಕ್ಷ ರೂ.ಗಳ ಚೆಕ್ ಅನ್ನು ಪ್ರವೀಣ್ ಅವರ ಕುಟುಂಬಕ್ಕೆ ತಲುಪಿಸಲಾಗುವುದು. ಅವರ ಬಲಿದಾನಕ್ಕೆ ನಾವು ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಅವರು ಗದ್ಗದಿತರಾದರು.

ಪ್ರವೀಣ್ ಅವರ ಹಂತಕರು ಎಲ್ಲೇ ಇದ್ದರೂ ಕಠಿಣ ಕ್ರಮ ಜರುಗಿಸಲಾಗುವುದು. ಪಕ್ಷದ ಕಾರ್ಯಕರ್ತರ ಆಕ್ರೋಶ ನನಗೆ ಅರ್ಥವಾಗುತ್ತದೆ. ಅಪರಾಧಿಗಳ ಹೆಡೆಮುರಿ ಕಟ್ಟುವ ಶಕ್ತಿ ಬಿಜೆಪಿ ಸರಕಾರಕ್ಕಿದೆ ಎಂದು ಸಚಿವರು ಪ್ರತಿಕ್ರಿಯಿಸಿದರು.
ಕೆಲ ತಿಂಗಳ ಹಿಂದೆ ಶಿವಮೊಗ್ಗದಲ್ಲಿ ಹೀಗೆಯೇ ಹತ್ಯೆಯಾದ ಹರ್ಷನ ಕುಟುಂಬಕ್ಕೂ ಸಚಿವರು ಮಾನವೀಯವಾಗಿ ಸ್ಪಂದಿಸಿದ್ದರು.

Articles You Might Like

Share This Article