Friday, November 22, 2024
Homeರಾಜ್ಯಜಯದೇವ ಆಸ್ಪತ್ರೆ ನಿರ್ದೇಶಕ ಸ್ಥಾನದಿಂದ ಡಾ.ಸಿ.ಎನ್.ಮಂಜುನಾಥ್ ನಿವೃತ್ತಿ

ಜಯದೇವ ಆಸ್ಪತ್ರೆ ನಿರ್ದೇಶಕ ಸ್ಥಾನದಿಂದ ಡಾ.ಸಿ.ಎನ್.ಮಂಜುನಾಥ್ ನಿವೃತ್ತಿ

ಬೆಂಗಳೂರು, ಜ.24- ಟ್ರೀಟ್ಮೆಂಟ್ ಫಸ್ಟ್, ಪೇಮೆಂಟ್ ನೆಕ್ಟ್ಸ್ ಎಂಬ ಧ್ಯೇಯದೊಂದಿಗೆ ಜನಸಾಮಾನ್ಯರಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಮೂಲಕ ಖಾಸಗಿ ಆಸ್ಪತ್ರೆಗಳಿಗಿಂತ ಹೆಚ್ಚಿನ ಮನ್ನಣೆ ಪಡೆದಿದ್ದ ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಇಂದು ಸೇವೆಯಿಂದ ನಿವೃತ್ತರಾದರು.

ಕಳೆದ 16 ವರ್ಷಗಳಿಂದ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಅವರ ಅವಧಿಯಲ್ಲಿ ವಿಶ್ವದ ಭೂಪಟದಲ್ಲಿ ಗುರುತಿಸುವ ಮಟ್ಟಕ್ಕೆ ಜಯದೇವ ಆಸ್ಪತ್ರೆ ಖ್ಯಾತಿ ಪಡೆದಿದೆ. ಸುಮಾರು 75 ಲಕ್ಷ ಜನರಿಗೆ ಹೃದ್ರೋಗ ಚಿಕಿತ್ಸೆ, 8 ಲಕ್ಷ ಜನರಿಗೆ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಆಸ್ಪತ್ರೆ ದಾಖಲೆ ನಿರ್ಮಿಸಿದೆ.

ಪಕ್ಷಾತೀತವಾಗಿ ಮಂಜುನಾಥ್ ಅವರ ಸೇವೆಯನ್ನು ಪ್ರಶಂಸಿಸಲಾಗುತ್ತದೆ. ನಿರಂತರವಾಗಿ ಅಭಿವೃದ್ಧಿ ಹೊಂದಿದ ಆಸ್ಪತ್ರೆಯು ರೋಗಿಗಳ ಪಾಲಿನ ಸಂಜೀವಿನಿಯಾಗಿದೆ. ಬಡವ-ಶ್ರೀಮಂತ ಎಂಬ ತಾರತಮ್ಯವಿಲ್ಲದೆ ಎಲ್ಲರಿಗೂ ಗುಣಮಟ್ಟದ ಚಿಕಿತ್ಸೆ ನೀಡುವುದಕ್ಕೆ ಸರ್ಕಾರಿ ಆಸ್ಪತ್ರೆ ಹೆಸರಾಗಿದೆ.

ಭಾರತದ ಯಾವುದೇ ಆಸ್ಪತ್ರೆಯಲ್ಲಿ ಇಲ್ಲದಷ್ಟು 125 ಹೃದ್ರೋಗ ತಜ್ಞರು ಜಯದೇವ ಆಸ್ಪತ್ರೆಯಲಿದ್ದಾರೆ. 2022ರ ಅಧ್ಯಯನದಲ್ಲಿ ಟಾಪ್ 5 ಸೆಂಟರ್ಗಳ ಪೈಕಿ ನಂಬರ್ 1 ಸ್ಥಾನದಲ್ಲಿ ಜಯದೇವ ಆಸ್ಪತ್ರೆ ಇದೆ. 300 ಹಾಸಿಗೆ ಸಾಮಥ್ರ್ಯವಿದ್ದ ಆಸ್ಪತ್ರೆಯು ಮಂಜುನಾಥ್ ಅವರ ಆಡಳಿತ ಅವಧಿಯಲ್ಲಿ 2 ಸಾವಿರ ಹಾಸಿಗೆ ಸಾಮಥ್ರ್ಯಕ್ಕೆ ಹೆಚ್ಚಳವಾಗಿದೆ. ದಕ್ಷಿಣ ಏಷ್ಯಾದಲ್ಲಿ ಅತಿ ದೊಡ್ಡ ಹೃದ್ರೋಗ ಸಂಸ್ಥೆಯಾಗಿದೆ.

ಕಳೆದ ಮೇ ತಿಂಗಳಲ್ಲಿ ಕೇಂದ್ರೀಯ ಸಂಸದೀಯ ಸಂಸ್ಥೆ ಭೇಟಿ ನೀಡಿದ್ದು, ಆ ಸಂದರ್ಭದಲ್ಲಿ ಇಲ್ಲಿನ ಚಿಕಿತ್ಸೆ ಕಂಡು ದೇಶದ ಎಲ್ಲಾ ಸರ್ಕಾರಿ ಆಸ್ಪತ್ರೆಗೆ ಜಯದೇವ ಆಸ್ಪತ್ರೆ ಮಾದರಿ ಅಂದಿತ್ತು. ಜಯದೇವ ಹೃದ್ರೋಗ ಸಂಸ್ಥೆ ಮೈಸೂರಲ್ಲಿ ನಿರ್ಮಾಣಗೊಂಡಿದೆ. ಬೆಂಗಳೂರು ಮಧ್ಯಭಾಗ ಮಲ್ಲೇಶ್ವರದಲ್ಲೂ ಸ್ಯಾಟಲೈಟ್ ಸೆಂಟರ್ ತೆರೆದಿದ್ದೇವೆ. ಇಎಸ್ಐ ಆಸ್ಪತ್ರೆಯಲ್ಲೂ ಶಾಖೆಯನ್ನು ತೆರೆದಿದೆ.

3 ತಿಂಗಳಲ್ಲಿ ಎಲ್ಲಾ ದಾಖಲೆಗಳ ಡಿಜಿಟಲೀಕರಣ : ಸಚಿವ ಕೃಷ್ಣಭೈರೇಗೌಡ

ಕಲ್ಯಾಣ ಕರ್ನಾಟಕದಲ್ಲಿ 135 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ಕಾಮಗಾರಿ ಶೇ. 85ರಷ್ಟು ಪೂರ್ಣಗೊಂಡಿದ್ದು, ಏಪ್ರಿಲ್ನಲ್ಲಿ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ. ಸೇವಾ ನಿವೃತ್ತಿಯಾದ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆ ಸಿಬ್ಬಂದಿಯಿಂದ ನಿನ್ನೆ ಹೃದಯಪೂರ್ವಕ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ನೂರಾರು ಸಿಬ್ಬಂದಿ ಮಂಜುನಾಥ್ ಅವರಿಗೆ ಅಭಿನಂದಿಸಿದರು.

ಈ ವೇಳೆ ಮಾತನಾಡಿದ ಡಾ.ಸಿ.ಎನ್ ಮಂಜುನಾಥ್ ಅವರು, ಜಯದೇವ ಹೃದ್ರೋಗ ಆಸ್ಪತ್ರೆ ಜನರ ಆಸ್ಪತ್ರೆಯಾಗಿದೆ. ನಾವು ಪಂಚತಾರಾ ಖಾಸಗಿ ಆಸ್ಪತ್ರೆಯಂತೆ ಈ ಆಸ್ಪತ್ರೆ ಸೇವೆ ಸಲ್ಲಿಸುತ್ತಿದೆ. ಪ್ರತಿಯೋಬ್ಬರಿಗೂ ಸೇವಾ ಮನೋಭಾವ ಬೆಳೆಸಲಾಗಿದೆ. ಸರ್ಕಾರ ಮತ್ತು ದಾನಿಗಳ ಸಹಕಾರದಿಂದ ಈ ಮಟ್ಟಕ್ಕೆ ಆಸ್ಪತ್ರೆ ಬೆಳೆದಿದೆ ಎಂದು ಮನದಾಳದ ಮಾತನ್ನು ಹಂಚಿಕೊಂಡರು.

ಕರ್ನಾಟಕ ರತ್ನ ಪ್ರಶಸ್ತಿಗೆ ಅಶೋಕ್ ಆಗ್ರಹ :
ಬೆಂಗಳೂರು,ಜ.31- ನಾಡಿನ ಖ್ಯಾತ ವೈದ್ಯ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಸುದೀರ್ಘ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.

ಈ ಕುರಿತಾಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದು, ಡಾ. ಮಂಜುನಾಥ್ ಅವರು ಬಡವರ ಪಾಲಿನ ಧನ್ವಂತರಿ ಎಂದರೆ ಅತಿಶಯೋಕ್ತಿಯಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ನಿವೃತ್ತರಾಗುತ್ತಿರುವ ನಾಡಿನ ಪ್ರಖ್ಯಾತ ವೈದ್ಯರಾದ ಡಾ.ಸಿ.ಎನ್.ಮಂಜುನಾಥ್ ಅವರ ನಿವೃತ್ತಿ ಜೀವನ ಸುಖಕರವಾಗಿರಲೆಂದು ಮನಸಾರೆ ಶುಭ ಹಾರೈಸುತ್ತೇನೆ ಎಂದಿದ್ದಾರೆ.

ಬಡರೋಗಿಗಳ ಪಾಲಿನ ಆಶಾಕಿರಣವಾಗಿ ಟ್ರೀಟ್ಮೆಂಟ್ ಫಸ್ಟ್, ಪೇಮೆಂಟ್ ನೆಕ್ಸ್ಟ್ ಎಂಬ ಪರಿಕಲ್ಪನೆಯನ್ನಿಟ್ಟುಕೊಂಡು ಸಾವಿರಾರು ಬಡರೋಗಿಗಳಿಗೆ ಚಿಕಿತ್ಸೆ ಕೊಟ್ಟ ಡಾ.ಮಂಜುನಾಥ್ ಅವರು ಬಡವರ ಪಾಲಿನ ಧನ್ವಂತರಿ ಅಂದರೆ ಅತಿಶಯೋಕ್ತಿಯಲ್ಲ. ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಕಾಲದಲ್ಲಿ ಯಾವುದೇ ಖಾಸಗಿ ಕಾರ್ಪೊ ರೇಟ್ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಬಡವರಿಗೆ ಕೈಗೆಟಕುವ ದರದಲ್ಲಿ ಉತ್ಕೃಷ್ಟ ಆರೋಗ್ಯ ಸೇವೆ ನೀಡುವ ಮಟ್ಟಕ್ಕೆ ಒಂದು ಸರ್ಕಾರಿ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಅನನ್ಯ ಸಾಧನೆ ಮಾಡಿದ ಡಾ.ಸಿ.ಎನ್.ಮಂಜುನಾಥ್ ಅವರು ಕರ್ನಾಟಕದ ಹೆಮ್ಮೆಯ ಸುಪುತ್ರ ಎಂದು ಬಣ್ಣಿಸಿದ್ದಾರೆ.
ಡಾ.ಸಿ.ಎನ್.ಮಂಜುನಾಥ್ ಅವರ ಸಾಧನೆಯನ್ನು ಗುರುತಿಸಿ, ಗೌರವಿಸಲು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಆರ್. ಅಶೋಕ್ ಮನವಿ ಮಾಡಿದ್ದಾರೆ.

ಜಯದೇವ ಹೃದ್ರೋಗ ವಿಜಾ್ಞನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಅವರ ಸೇವಾ ಅವ ಜನವರಿ 31 ಕ್ಕೆ ಮುಕ್ತಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಕಚೇರಿಯ ಸಿಬ್ಬಂದಿ ವರ್ಗ ಭಾವಪೂರ್ಣ ವಿದಾಯ ಕೋರಿದ್ದಾರೆ.
ಡಾ. ಸಿ.ಎನ್. ಮಂಜುನಾಥ್ 2007ರಿಂದ ಜಯದೇವ ಹೃದ್ರೋಗ ವಿಜಾ್ಞನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. 2023ರ ಜುಲೈನಲ್ಲಿಯೇ ಅವರ ಸೇವಾವ ಮುಕ್ತಾಯವಾಗಿತ್ತು. ಹಾಗಿದ್ದರೂ ಆಸ್ಪತ್ರೆಯ ಸಿಬ್ಬಂದಿ ಮತ್ತು ಹಲವು ಗಣ್ಯರು ಅವರ ಸೇವೆಯನ್ನು ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದ್ದರಿಂದ ಸರ್ಕಾರ ಮಂಜುನಾಥ್ ಅವರ ಸೇವಾ ಅವಧಿಯನ್ನು ವಿಸ್ತರಿಸಿತ್ತು.

RELATED ARTICLES

Latest News