Friday, November 22, 2024
Homeರಾಜ್ಯಡಾ.ಮಂಜುನಾಥ್ ಸ್ಪರ್ಧೆ ಕುರಿತಂತೆ ಸೂಕ್ತ ಸಮಯದಲ್ಲಿ ನಿರ್ಧಾರ: ಎಚ್‍ಡಿಕೆ

ಡಾ.ಮಂಜುನಾಥ್ ಸ್ಪರ್ಧೆ ಕುರಿತಂತೆ ಸೂಕ್ತ ಸಮಯದಲ್ಲಿ ನಿರ್ಧಾರ: ಎಚ್‍ಡಿಕೆ

ಬೆಂಗಳೂರು, ಫೆ.23- ಜಯದೇವ ಹೃದ್ರೋಗ ಆಸ್ಪತ್ರೆಯ ನಿವೃತ್ತ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ರ್ಪಧಿಸಬೇಕು ಎಂಬ ಬಗ್ಗೆ ಒತ್ತಡವಿದ್ದು, ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಮಂಜುನಾಥ್ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆ ಬಗ್ಗೆ ರಾಜ್ಯಾದ್ಯಂತ ಜನರಲ್ಲಿ ಒಳ್ಳೆಯ ಭಾವನೆ ಇದೆ. ಅವರು ಸಹ ಸಭೆ ಸಮಾರಂಭಗಳಲ್ಲಿ ಭಾಗವಹಿಸಿದಾಗ ಲೋಕಸಭೆ ಚುನಾವಣೆಗೆ ಸ್ರ್ಪಧಿಸುವಂತೆ ಜನರು ಕೂಡ ಒತ್ತಡ ಹಾಕುತ್ತಿದ್ದಾರೆ ಎಂದರು.
ಮಂಜುನಾಥ್ ಅವರು ಚುನಾವಣೆಗೆ ಸ್ರ್ಪಧಿಸುವ ವಿಚಾರದಲ್ಲಿ ಬಹಿರಂಗವಾಗಿ ಇದುವರೆಗೂ ಏನನ್ನೂ ಹೇಳಿಲ್ಲ. ರಾಜಕೀಯ ಪ್ರವೇಶ ಮಾಡುವ ಬಗ್ಗೆ ತೀರ್ಮಾನ ಮಾಡಿಲ್ಲ ಎಂದು ಹೇಳುತ್ತಿದ್ದಾರೆ. ಸಮಯ ಬಂದಾಗ ಈ ಎಲ್ಲಾ ವಿಚಾರ ಗಮನದಲ್ಲಿಟ್ಟುಕೊಂಡು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪ್ರೇಕ್ಷಣೀಯ ಸ್ಥಳವಾಗಿ ಬದಲಾಗಲಿದೆ ಫ್ರೀಡಂಪಾರ್ಕ್

ಫೆ.27ರಂದು ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸದಸ್ಯ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್‍ನಿಂದ ಮಾಜಿ ಸಂಸದ ಕುಪೇಂದ್ರರೆಡ್ಡಿ ಅವರನ್ನು ಕಣಕ್ಕಿಳಿಸಿದ್ದು, ಅವರಿಗೆ ಗೆಲುವು ತಂದುಕೊಡಬೇಕು ಎಂಬ ಗುರಿಯನ್ನಿಟ್ಟುಕೊಂಡು ಕಾರ್ಯತಂತ್ರ ರೂಪಿಸಲಾಗುತ್ತಿದೆ. ನಮ್ಮ ಆಸೆ ಈಡೇರಲಿದೆಯೇ ಎಂಬುದು ಅಂದು ಸಂಜೆ ಬಹಿರಂಗವಾಗಲಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಸ್ಥಾನ ಗೆಲ್ಲಬೇಕೆಂಬ ನಿಟ್ಟಿನಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರೊಂದಿಗೆ ದೆಹಲಿ ಭೇಟಿ ಸಂದರ್ಭದಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ. ಅಮಿತ್ ಷಾ ಅವರು ಸಹ ಹಲವು ಸಲಹೆ- ಸೂಚನೆಗಳನ್ನು ನೀಡಿದ್ದಾರೆ ಎಂದು ಅವರು ಹೇಳಿದರು.

ಬಿಬಿಎಂಪಿ ಬಜೆಟ್‍ಗೆ ದಿನಗಣನೆ : ಎಸ್‍ಎಎಸ್ ತೆರಿಗೆ ಪದ್ಧತಿಗೆ ಕೊಕ್ ಸಾಧ್ಯತೆ

ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಜಂಟಿ ಹೋರಾಟ ಮಾಡಲಿದ್ದು, ಏನೇ ತೀರ್ಮಾನ ಕೈಗೊಂಡರೂ ಉಭಯ ಪಕ್ಷಗಳ ನಾಯಕರು ಚರ್ಚಿಸಿ ಒಮ್ಮತದ ನಿರ್ಣಯ ಕೈಗೊಳ್ಳಲಾಗುವುದು. ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಸೋಮವಾರ ಬಿಜೆಪಿ ಹಮ್ಮಿಕೊಳ್ಳಲಿರುವ ರಾಜಭವನ ಚಲೋ ಕಾರ್ಯಕ್ರಮದಲ್ಲಿ ನಾವು ಭಾಗಿಯಾಗುತ್ತೇವೆ ಎಂದು ಸ್ಪಷ್ಟಪಡಿಸಿದರು.

ಆರೋಗ್ಯ ಸರಿ ಇಲ್ಲದ ಕಾರಣ ವಿಧಾನಸಭೆಯ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ವೈದ್ಯರ ಸಲಹೆ ಮೇರೆಗೆ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

RELATED ARTICLES

Latest News