ನಾಳೆ ಡಾ.ನಾಗರಾಜ ಜಮಖಂಡಿ ಮೆಮೋರಿಯಲ್ ಟ್ರಸ್ಟ್‍ನಿಂದ ಪ್ರಶಸ್ತಿ ಪ್ರದಾನ

Social Share

ಬೆಂಗಳೂರು,ನ.18- ಡಾ.ನಾಗರಾಜ ಜಮಖಂಡಿ ಮೆಮೋರಿಯಲ್ ಟ್ರಸ್ಟ್ ವತಿಯಿಂದ ನಾಳೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

ಬೆಂಗಳೂರಿನ ಅರಮನೆ ರಸ್ತೆಯ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಅವರಣದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಮುರುಗೇಶ್ ನಿರಾಣಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ವಿಧಾನಪರಿಷತ್ ಮಾಜಿ ಸದಸ್ಯರಾದ ಆರ್.ವಿ.ವೆಂಕಟೇಶ್, ಮೋಹನ್ ಲಿಂಬೆಕಾಯಿ ಸೇರಿದಂತೆ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

ಇದೇ ವೇಳೆ ಪತ್ರಿಕೋದ್ಯಮದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಾದ ಬಿ.ಪಿ.ಮಲ್ಲಪ್ಪ , ಪ್ರಶಾಂತ್ ನಾಥು ಹಾಗೂ ಮರಣೋತ್ತರವಾಗಿ ಗುರುಲಿಂಗಸ್ವಾಮಿ ಅವರಿಗೆ ಡಾ.ನಾಗರಾಜ್ ಜಮಖಂಡಿ ಸ್ಮಾರಕ ಮಾಧ್ಯಮ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತದೆ.

ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ ದೇವೇಗೌಡರು-ಮಾಧುಸ್ವಾಮಿ ಭೇಟಿ

ಡಿಜಿಟಲ್ ಮಾಧ್ಯಮದ ಬೆಳವಣಿಗೆ ಮತ್ತು ಪ್ರಭಾವ ಉಪನ್ಯಾಸ ಕಾರ್ಯಕ್ರಮದಲ್ಲಿ ಪತ್ರಕರ್ತರಾದ ಪ್ರಸಾದ್ ನಾಯಕ್, ಗೌರೀಶ್ ಹಕ್ಕಿ, ಹನುಮೇಶ್.ಕೆ ಯಾವಗಲ್ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ನಿಮಿತ್ತ ವಿವಿಧ ಸಾಂಸ್ಕøತಿಕ ಸೌರಭ ನಡೆಯಲಿದೆ. ಪೂರ್ಣಿಮ ರಜನಿ ಅವರ ನಿದಮ್ ತಂಡದಿಂದ ವೃತ್ತ ಕಾರ್ಯಕ್ರಮ, ಗ್ರಾಮಸ್ಪೂರ್ತಿ ಫ್ಯಾಷನ್ ಶೋ, ಭರತನಾಟ್ಯ ಸೇರಿದಂತೆ ಹಲವಾರು ಕಾರ್ಯಕ್ರಮಗಳು ಜರುಗಲಿವೆ.

ಬಿಬಿಎಂಪಿ ಮುಖ್ಯ ಆಯುಕ್ತರ ಎತ್ತಂಗಡಿ..?

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಡಾ.ನಾಗರಾಜ ಜಮಖಂಡಿ ಮೆಮೊರಿಯಲ್ ಟ್ರಸ್ಟ್‍ನ ಕಾರ್ಯದರ್ಶಿಯಾಗಿರುವ ಮಂಗಳ ನಾಗರಾಜ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Articles You Might Like

Share This Article