Wednesday, February 28, 2024
Homeಮನರಂಜನೆವಿಷ್ಣು ಅಭಿಮಾನಿಗಳ ಹೋರಾಟಕ್ಕೆ ಕಿಚ್ಚ ಸುದೀಪ್ ಸಾಥ್

ವಿಷ್ಣು ಅಭಿಮಾನಿಗಳ ಹೋರಾಟಕ್ಕೆ ಕಿಚ್ಚ ಸುದೀಪ್ ಸಾಥ್

ಬೆಂಗಳೂರು,ಡಿ.17- ಸಾಹಸಸಿಂಹ ಡಾ.ವಿಷ್ಣುವರ್ಧನ್ ಪುಣ್ಯಭೂಮಿಗಾಗಿ ಅಭಿಮಾನಿಗಳು ಹೋರಾಟಕ್ಕೆ ಮುಂದಾಗಿದ್ದಾರೆ. ವಿಷ್ಣು ಅಭಿಮಾನಿಗಳ ಬೆಂಬಲಕ್ಕೆ ಕಿಚ್ಚ ಸುದೀಪ್ ನಿಂತಿದ್ದಾರೆ. ವಿಷ್ಣು ಸಮಾಧಿ, ಸ್ಮಾರಕ ವಿಚಾರವಾಗಿ ಕಿಚ್ಚ ಸುದೀಪ್ ತಡರಾತ್ರಿ ಟ್ವೀಟ್ ಮಾಡಿರುವ ಅವರು, ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು-ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದಿದ್ದಾರೆ.

ರಾಮಮಂದಿರ ಉದ್ಘಾಟನೆ : ಅಮೆರಿಕದಲ್ಲಿನ ಹಿಂದೂ ಸಮುದಾಯದಿಂದ ಕಾರು ರ‍್ಯಾಲಿ

ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ನೀವು ಮುನ್ನಡೆಯಿರಿ. ನನ್ನಿಂದಾಗುವ ಎಲ್ಲವನ್ನೂ ಪುಣ್ಯಭೂಮಿಗಾಗಿ ಮಾಡುವೆ ಎಂದು ಸುದೀಪ್ ಪೋಸ್ಟ್ ಹಾಕಿದ್ದಾರೆ. ಬೆಂಗಳೂರಿನ ವಿಷ್ಣುವರ್ಧನ್ ಪುಣ್ಯಭೂಮಿ ವಿಚಾರವಾಗಿ ಮಾತನಾಡಲು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಗೂ ಸುದೀಪ್ ಮುಂದಾಗಿದ್ದಾರೆ ಎನ್ನಲಾಗಿದೆ.

RELATED ARTICLES

Latest News