Sunday, May 5, 2024
Homeರಾಜ್ಯಕೇಂದ್ರದ ಹಣ ಬಿಡುಗಡೆ ವಿಳಂಬವಾದರೆ ರಾಜ್ಯ ಸರ್ಕಾರದಿಂದಲೇ ಬರ ಪರಿಹಾರ: ಸಚಿವ ಚಲುವರಾಯಸ್ವಾಮಿ

ಕೇಂದ್ರದ ಹಣ ಬಿಡುಗಡೆ ವಿಳಂಬವಾದರೆ ರಾಜ್ಯ ಸರ್ಕಾರದಿಂದಲೇ ಬರ ಪರಿಹಾರ: ಸಚಿವ ಚಲುವರಾಯಸ್ವಾಮಿ

ಮಳವಳ್ಳಿ,ನ.21- ರಾಜ್ಯದ 224 ತಾಲ್ಲೂಕುಗಳು ಕೂಡ ಬರ ಪೀಡಿತ ಎಂದು ಘೋಷಣೆಯಾಗಿದೆ. ಈಗಾಗಲೇ ಕೇಂದ್ರ ತಂಡ ರಾಜ್ಯದಲ್ಲಿ ಅಧ್ಯಯನ ನಡೆಸಿ ವರದಿ ಸಲ್ಲಿಸಿದೆ. ಕೇಂದ್ರದಿಂದ ಹಣ ಬಿಡುಗಡೆ ವಿಳಂಬವಾದರೆ ರಾಜ್ಯ ಸರ್ಕಾರವೇ ರೈತರ ನೆರವಿಗೆ ನಿಲ್ಲಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ತಾಲ್ಲೂಕಿನ ಹಲಗೂರು, ಬಿ.ಜಿ.ಪುರ ಹೋಬಳಿಯಲ್ಲಿ ಬರ ಪರಿಸ್ಥಿತಿ ವೀಕ್ಷಿಸಿ ಮಾತನಾಡಿ, ರೈತರಿಗೆ ಧೈರ್ಯ ತುಂಬಿದರು. ಈ ಬಾರಿ ಮಳೆ ಕೊರತೆಯಿಂದ ಬೆಳೆಗಳು ಒಣಗಿ ರೈತರಿಗೆ ತುಂಬಾ ನಷ್ಟವಾಗಿದೆ. ಅನ್ನದಾತರ ಸಂಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಲಿದೆ. ಇಂದಿನ ವರದಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ 18 ಸಾವಿರ ಕೋಟಿ ರೂ. ಅನುದಾನವನ್ನು ಕೇಳಲಾಗಿದೆ.

ಉದ್ಯಮಿಗಳು, ಆಭರಣ ಮಳಿಗೆಗಳ ಮೇಲೆ ಐಟಿ ದಾಳಿ

ಹಣ ಬಿಡುಗಡೆಯಾದ ನಂತರ ಹಂತ ಹಂತವಾಗಿ ಪರಿಹಾರ ವಿತರಿಸುವ ಕಾರ್ಯ ನಡೆಯಲಿದೆ ಎಂದರು.
ಒಣಗಿದ ಮುಸುಕಿನ ಜೋಳ, ರಾಗಿ ಸೇರಿದಂತೆ ಮತ್ತಿತರ ಬೆಳೆಗಳನ್ನು ವೀಕ್ಷಿಸಿ ರೈತರಿಗೆ ಪರಿಹಾರದ ಭರವಸೆ ನೀಡಿದ ಸಚಿವರು, ರೈತರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸಬೇಕೆಂದು ಸೂಚಿಸಿದರು.

ಈ ವೇಳೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಜಿಲ್ಲಾಧಿಕಾರಿ ಕುಮಾರ್, ಜಿಪಂ ಸಿಇಒ ಶೇಕ್ ತನ್ವೀರ್ ಆಸಿಫ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ಮಂಡ್ಯ ಜಿಲ್ಲಾಧಿಕಾರಿ ಕುಮಾರ್, ತಹಸೀಲ್ದಾರ್ ಲೋಕೇಶ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

RELATED ARTICLES

Latest News