ಬೆಂಗಳೂರು,ಜ.27- ಡ್ರಗ್ಸ್ ಪೆಡ್ಲರ್ಗಳ ಮೇಲೆ ಪ್ರಿವೆಂಟಿವ್ ಡಿಟೆನ್ಷನ್ ಆಕ್ಟ್ ಮೂಲಕ ಬಂಸಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೆÇಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದರು. ದೊಡ್ಡಕಲ್ಲಸಂದ್ರದ ಶಂಕರ್ ಫೌಂಡೇಷನ್‍ನಲ್ಲಿ ಹಮ್ಮಿಕೊಂಡಿದ್ದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ವಿದೇಶಿ ಸಂಸ್ಕøತಿಯ ಪ್ರಭಾವಕ್ಕೆ ಒಳಗಾಗಿ ಇತ್ತೀಚಿನ ಯುವಪೀಳಿಗೆ ವೇಗವಾಗಿ ಮಾದಕ ವಸ್ತುಗಳಿಗೆ ಆಕರ್ಷಣೆಯಾಗುತ್ತಿದೆ. ದುರದೃಷ್ಟಕರ ಎಂದರೆ ಕೆಲವು ವಿದೇಶಗಳಲ್ಲಿ ಕೆಲ ಮಾದಕ ವಸ್ತುಗಳ ಬಳಕೆಗೆ ಅನುವು ಮಾಡಿಕೊಡಲಾಗಿದೆ. ಇದರಿಂದ ಪ್ರಭಾವಿತರಾಗಿ ಯುವಕರು ಫ್ಯಾಶನ್ ರೀತಿ ಇದನ್ನು ಬಳಕೆ ಮಾಡುತ್ತಿದ್ದಾರೆ ಎಂದರು.
ಇದನ್ನು ತಡೆಯಲು ಗೂಂಡಾ ಕಾಯ್ದೆ ಮಾದರಿಯಲ್ಲೇ ಪೆಡ್ಲರ್‍ಗಳ ಮೇಲೆಯೂ ಪ್ರಿವೇಂಟಿವ್ ಡೆಟೆನ್ಷನ್ ಆಕ್ಟ್ ಹಾಕುವ ಅವಕಾಶ ಕಾನೂನಿನಲ್ಲಿದ್ದು, ಅದನ್ನು ಮುಂದಿನ ದಿನಗಳಲ್ಲಿ ಜಾರಿಗೊಳಿಸುತ್ತೇವ ಎಂದು ಹೇಳಿದರು. ಪೆÇಲೀಸ್ ಇಲಾಖೆಯು ಇದರ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸುತ್ತಿದ್ದು, ಡ್ರಗ್ಸ್ ಪೆಡ್ಲರ್ಗಳ ಮೇಲೆ ಹೆಚ್ಚೆಚ್ಚು ಪ್ರಕರಣಗಳನ್ನು ದಾಖಲಿಸುತ್ತಿದ್ದು, ಸಾಕಷ್ಟು ಸಂಖ್ಯೆಯ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾ ಗುತ್ತಿದೆ.
ಕೇವಲ ಗಾಂಜಾ, ಡ್ರಗ್ಸ್ ಮಾತ್ರವಲ್ಲದೆ ಸಿಂಥೆಟಿಕ್ ಡ್ರಗ್ಸ್‍ಗಳಾದ ಕೊಕೇನ್, ಹೆರಾಯಿನ್, ಎಂಬಿಎಂಎನಂತಹ ಅತ್ಯಾಧುನಿಕ ಡ್ರಗ್ಸ್‍ಗಳನ್ನು ಸಹ ಅಪಾರ ಪ್ರಮಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ಮಾದಕ ವಸ್ತುಗಳ ಸೇವನೆಯಿಂದ ಬೇಡಿಕೆ ಹೆಚ್ಚಾಗಿರುವುದರಿಂದ ನಗರದಲ್ಲಿ ಹೆಚ್ಚು ಮಾರಾಟ ಜಾಲ ಹಬ್ಬಿದೆ. ಇದು ಕೇವಲ ಪೊಲೀಸ್ ಇಲಾಖೆಯಿಂದ ತಡೆಯಲು ಸಾಧ್ಯವಿಲ್ಲ. ಯುವ ಪೀಳಿಗೆಯಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಸಮಾಜ ಮಾಡಬೇಕು ಎಂದರು.
ಇಂಡಿಯಾ ಬಣದಲ್ಲಿ ಯಾರಿಗೂ ನ್ಯಾಯ ಸಿಗುತ್ತಿಲ್ಲ : ಅನುರಾಗ್ ಠಾಕೂರ್
ಟ್ರಾಫಿಕ್ ಜಂಕ್ಷನ್‍ಗಳಲ್ಲಿ ಸಿಸಿ ಕ್ಯಾಮೆರಾಗಳ ಜೊತೆ ಲೋಡ್ ಸ್ಪೀಕರ್‍ನಂತಹ ಡಿವೈಸ್‍ಗಳನ್ನು ಅಳವಡಿಸಲಾಗಿದ್ದು, ಸಂಚಾರಿ ನಿಯಮ ಉಲ್ಲಂಘನೆ ಮತ್ತು ದಟ್ಟಣೆ ನಿರ್ವಹಣೆಗೆ ಠಾಣೆಯಿಂದಲೇ ಮಾತನಾಡುವ ಮೂಲಕ ತಕ್ಷಣ ಸಮಸ್ಯೆ ಬಗೆಹರಿಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆಯುಕ್ತರು ತಿಳಿಸಿದರು. ದಕ್ಷಿಣ ವಿಭಾಗದ ಡಿಸಿಪಿ ರಾಹುಲ್‍ಕುಮಾರ್ ಶಹಪುರವಾಡ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.