ಡ್ರಗ್ ಪೆಡ್ಲಿಂಗ್ : ರೌಡಿ ಸೇರಿ ಮೂವರು ವಶಕ್ಕೆ

Social Share

ಬೆಂಗಳೂರು, ಜ.3- ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದ ರೌಡಿ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ 3 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಮ್ರಾನ್ ಬಾಷಾ, ಶಹಬಾಜ್ ಖಾನ್, ರೌಡಿ ಸೈಯದ್ ಯಾರಬ್ ಬಂಧಿತ ಡ್ರಗ್ ಪೆಡ್ಲರ್‍ಗಳು.

ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಕೊಲೆ ಪ್ರಕರಣದ ಆರೋಪಿಯಾಗಿರುವ ಸೈಯದ್ ಯಾರಬ್ ಅದೇ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿದೆ. ಈತ ಸಹಚರರ ಗುಂಪು ಕಟ್ಟಿಕೊಂಡು ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಬ್ಬ ರೌಡಿಯಿಂದ ಮಾದಕ ವಸ್ತುಗಳನ್ನು ಖರೀದಿ ಮಾಡಿ ತನ್ನ ಏರಿಯಾದಲ್ಲಿ ಅಪ್ರಾಪ್ತ ಯುವಕರಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಾ ಹಣ ಗಳಿಕೆಯಲ್ಲಿ ತೊಡಗಿದ್ದಲ್ಲದೆ, ಸಾಮಾಜಿ ಸ್ವಸ್ಥ್ಯವನ್ನು ಹಾಳುಮಾಡುತ್ತಿದ್ದನು.

ವೇದಿಕೆ ಬಿಟ್ಟಿಳಿಯದ ನಾಯಕರು, ತಳಮಟ್ಟದಲ್ಲಿ ಸೊರಗುತ್ತಿರುವ ಕಾಂಗ್ರೆಸ್

ಈ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಸಂಘಟಿತ ಅಪರಾಧ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದ ರೌಡಿ ಸೇರಿ ಮೂವರನ್ನು ಬಂಧಿಸಿದ್ದಾರೆ.

ಈ ಬಗ್ಗೆ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಎನ್‍ಡಿಪಿಎಸ್ ಕಾಯ್ದೆ ಯಡಿ ಪ್ರಕರಣದ ದಾಖಲಿಸಲಾಗಿದ್ದು, ತನಿಖೆ ಮುಂದುವರೆದಿದೆ. ಈ ಕಾರ್ಯಾಚರಣೆಯನ್ನು ಜಂಟಿ ಪೊಲೀಸ್ ಆಯುಕ್ತ(ಅಪರಾಧ) ಮತ್ತು ಉಪಪೊಲೀಸ್ ಆಯುಕ್ತ(ಅಪರಾಧ-2) ಅವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ತಂಡ ಯಶಸ್ವಿಯಾಗಿ ಕೈಗೊಂಡಿರುತ್ತಾರೆ.

ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್

Drug peddling, Three arrested, Bengaluru,

Articles You Might Like

Share This Article