Friday, May 3, 2024
Homeಬೆಂಗಳೂರುಹೊಸ ವರ್ಷ ಆಚರಣೆ : ಡ್ರಗ್ಸ್ ಸೇವನೆ ಮತ್ತು ಸರಬರಾಜು ಮೇಲೆ ಹದ್ದಿನ ಕಣ್ಣು

ಹೊಸ ವರ್ಷ ಆಚರಣೆ : ಡ್ರಗ್ಸ್ ಸೇವನೆ ಮತ್ತು ಸರಬರಾಜು ಮೇಲೆ ಹದ್ದಿನ ಕಣ್ಣು

ಬೆಂಗಳೂರು, ಡಿ.26- ಹೊಸ ವರ್ಷ ಆಚರಣೆ ವೇಳೆ ಡ್ರಗ್ಸ್ ಸೇವನೆ ಮತ್ತು ಸರಬರಾಜು ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಕಳೆದ ವಾರದಿಂದ ಹಳೆ ಪೆಡ್ಲರ್ ವಿಚಾರಣೆ ಮತ್ತು ಅವರ ಮನೆಗಳಲ್ಲಿ ಶೋಧ ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವರ್ಷ ಆಚರಣೆ ಸಲುವಾಗಿ ಮಾದಕ ವಸ್ತು ಸೇವನೆ ಹಾಗೂ ರೇವು ಪಾರ್ಟಿಗಳನ್ನು ಮಾಡುವವರ ಮೇಲೆ ತೀವ್ರ ನಿಗಾ ಇಡಲು ನಗರದ ಎಲ್ಲಾ ಡಿಸಿಪಿ ಮತ್ತು ಸಿಸಿಬಿ ಅಧಿಕಾರಿಗಳ ವಿಶೇಷ ತಂಡ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ತಿಂಗಳಲ್ಲಿ 9 ವಿದೇಶಿ ಡ್ರಗ್ಸ್ ಪೆಡ್ಲರ್ ಸೇರಿದಂತೆ 56 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಅವರಿಂದ ಸುಮಾರು 99.85 ಕೆಜಿ ಡ್ರಗ್ಸ್ ವಶಪಡಿಸಿಕೊಂಡು 40 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದರು.

ಫ್ರಾನ್ಸ್ ನಲ್ಲಿ ಸಿಲುಕಿಕೊಂಡಿದ್ದ 276 ಭಾರತೀಯರು ಮುಂಬೈಗೆ ವಾಪಸ್

ಅಕ್ರಮವಾಗಿ ಮದ್ಯ ಸಂಗ್ರಹಣೆ ಮಾಡಿರುವ ಬಗ್ಗೆ ಪತ್ತೆ ಹಚ್ಚಲು ಅಬಯಕಾರಿ ಇಲಾಖೆಯೊಂದಿಗೆ ಜಂಟಿ ಕಾರ್ಯಾಚರಣೆಗಳನ್ನು ನಡೆಸಿ ಕಾನೂನು ಕ್ರಮ ಜರುಗಿಸಲಾಗುವುದು. ಕ್ಲಬ್, ಹೊಟೇಲ್, ಪಪ್, ರೆಸ್ಟೋರೆಂಟ್, ಅತಿಥಿಗಳ ಔತಣಕೂಟ ಅಥವಾ ವಿಶೇಷ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದರೆ ಅದನ್ನು ನಿಗದಿತ ಸಮಯದೊಳಗೆ ನಿಲ್ಲಿಸಬೇಕು. ಮತ್ತು ಅಲ್ಲಿ ಸಾಂದ್ರತೆಗೆ ತಕ್ಕಂತೆ ಪಾಸ್‍ಗಳನ್ನು ವಿತರಿಸಬೇಕು. ಇಲ್ಲದಿದ್ದರೆ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಯಾವುದೇ ಕಾನೂನು ಬಾಹಿರ ಚಟುವಟಿಕೆಗಳು, ಡ್ರಗ್ಸ್ ಸರಬರಾಜು, ಅಕ್ರಮ ಚಟುವಟಿಕೆಗಳ ಬಗ್ಗೆ ಕಂಡು ಬಂದಲ್ಲಿ ಸಾರ್ವಜನಿಕರು ತಕ್ಷಣ ಪೊಲೀಸ್ ದೂರವಾಣಿ ಸಂಖ್ಯೆ 112ಗೆ ಕರೆ ಮಾಡಿ ಮಾಹಿತಿ ನೀಡಿ ಎಂದು ಆಯುಕ್ತರು ಮನವಿ ಮಾಡಿಕೊಂಡಿದ್ದಾರೆ.

RELATED ARTICLES

Latest News