ಶಿವಮೊಗ್ಗ,ಜು.25- ಇಲ್ಲಿ ನ ಪ್ರತಿಷ್ಠಿತ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿಗಳು ಹಾಡಹಗಲೇ ಮಾದಕ ವಸ್ತು ಸೇವಿಸಿ ಗುಂಗಿನ ನಶೆಯಲ್ಲಿ ಒದ್ದಾಡುತ್ತಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿದ್ಯಾರ್ಥಿಗಳು ಮಾದಕವಸ್ತು ಸೇವಿಸಿ ತೂರಾಡುತ್ತಿದ್ದು, ಮತ್ತಿನಲ್ಲಿ ಕ್ಯಾಂಪಸ್ನಲ್ಲಿ ಎಲ್ಲಂದರಲ್ಲಿ ವಾಲಾಡುತ್ತಾ ಬಿದ್ದಿದ್ದನ್ನು ಕೆಲ ಸಹಪಾಠಿ ವಿದ್ಯಾರ್ಥಿಗಳು ವಿಡಿಯೋ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದು ಇದು ಭಾರಿ ವೈರಲ್ಆಗಿದೆ .ಪೊಲೀಸರು ಈಗ ಕಾಲೇಜಿನ ಮಾಹಿತಿ ಪಡೆದು ಕಾರ್ಯಾಚರಣೆ ಆರಂಭಿಸಿದ್ದಾರೆ.
ಇತ್ತೀಚೆಗೆ ಮಂಗಳೂರಿನ ಕಾಲೇಜು ವಿದ್ಯಾರ್ಥಿಗಳು ಕಿಸ್ಸಿಂಗ್ ಮಾಡಿರುವ ವಿಡಿಯೋ ಕೂಡ ವೈರಲ್ ಆಗಿತ್ತು.ವಿದ್ಯಾರ್ಥಿನಿಯರು ಕಿಸ್ಸಿಂಗ್ ಸ್ಪರ್ಧೆ ಮಾಡಿದ್ದು, ವಿಡಿಯೋ ಮಾಡಿದ ವಿದ್ಯಾರ್ಥಿಯ ಬಂಧನ ಮಾಡಲಾಗಿದೆ.
ಇವರು ಪಿಯುಸಿ ವಿದ್ಯಾರ್ಥಿಗಳು ಎನ್ನಲಾಗಿದೆ. ಬಾವುಟಗುಡ್ಡೆಯಲ್ಲಿರುವ ಈ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳ ಎದುರೇ ಕಿಸ್ ಮಾಡಿರುವುದು ಭಾರೀ ಸಂಚಲನ ಮೂಡಿಸಿತ್ತು .