ಮದ್ಯಪಾನ ಮಾಡಿ ವಾಹನ ಚಾಲನೆ : 146 ಪ್ರಕರಣ ದಾಖಲು

Social Share

ಬೆಂಗಳೂರು,ಡಿ.24- ನಗರದಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಸಂಚಾರಿ ಪೊಲೀಸರು ನಿನ್ನೆ ರಾತ್ರಿ ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ 146 ಪ್ರಕರಣಗಳನ್ನು ದಾಖಲಿಸಿದ್ದಾರೆ.

ನಗರದಲ್ಲಿ ವಾಹನ ಸವಾರರು ಮದ್ಯಪಾನ ಮಾಡಿ ವಾಹನ ಚಲಾಯಿಸುವುದರಿಂದ ಮಾರಣಾಂತಿಕ ಅಪಘಾತಗಳು ಸಂಭವಿಸುವ ಸಾಧ್ಯತೆ ಗಣನೀಯವಾಗಿ ಹೆಚ್ಚುತ್ತಿರುವುದು ಆತಂಕಕ್ಕೀಡು ಮಾಡಿದೆ.

ಈ ಪಿಡುಗನ್ನು ಪರಿಣಾಮಕಾರಿಯಾಗಿ ಹತ್ತಿಕ್ಕುವ ಅಗತ್ಯವಿದ್ದು, ಅಪಘಾತಗಳನ್ನು ತಡೆಯುವುದು ಹಾಗೂ ರಸ್ತೆ ಬಳಕೆದಾರರ ಸುರಕ್ಷತೆಯನ್ನು ಕಾಪಾಡುವುದು ಸಂಚಾರಿ ಪೊಲೀಸರ ಮೂಲಭೂತ ಕರ್ತವ್ಯ ಹಾಗೂ ಮೊದಲ ಆದ್ಯತೆಯಾಗಿರುತ್ತದೆ.

ಮಾಲ್ ಆಫ್ ಅಮೆರಿಕಾದಲ್ಲಿ ಗುಂಡಿನ ದಾಳಿ, ಯುವಕನ ಹತ್ಯೆ

ನಗರದ ರಸ್ತೆಗಳಲ್ಲಿ ಅಪಘಾತಗಳನ್ನು ತಡೆಯುವ ಮೂಲಕ ಅಮಾಯಕರ ಪ್ರಾಣಹಾನಿಯನ್ನು ತಡೆಗಟ್ಟುವ ಹೊಣೆಗಾರಿಕೆ ಸಂಚಾರ ಪೊಲೀಸರ ಹಾಗೂ ನಮ್ಮೆಲ್ಲರ ಮೇಲಿದ್ದು, ಅಪಘಾತಗಳನ್ನು ತಡೆಯಲು ಬದ್ದತೆಯಿಂದ ಹಾಗೂ ಪ್ರಾಮಾಣಿಕವಾಗಿ ಶ್ರಮಿಸಲಾಗುತ್ತಿದೆ ಎಂದು ಸಂಚಾರ ವಿಭಾಗದ ವಿಶೇಷ ಪೊಲೀಸ್ ಆಯುಕ್ತರಾದ ಡಾ.ಎಂ.ಎ.ಸಲೀಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಲ್ ಆಫ್ ಅಮೆರಿಕಾದಲ್ಲಿ ಗುಂಡಿನ ದಾಳಿ, ಯುವಕನ ಹತ್ಯೆ

ನಗರದಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಗ್ಗಿಸುವ ನಿಟ್ಟಿನಲ್ಲಿ ಸಂಚಾರ ವಿಭಾಗದ ಪೊಲೀಸರು ನಿನ್ನೆ ರಾತ್ರಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ಒಟ್ಟು 146 ಪ್ರಕರಣಗಳನ್ನು ದಾಖಲಿಸಿದ್ದು, ಈ ವಿಶೇಷ ಕಾರ್ಯಾಚರಣೆಯು ಮುಂದಿನ ಜನವರಿ 1ರವರೆಗೂ ಮುಂದುವರೆಯುವುದು ಎಂದು ಅವರು ತಿಳಿಸಿದ್ದಾರೆ.

drunken driving, 146 cases, registered, traffic police,

Articles You Might Like

Share This Article