ಚೆನ್ನೈ .ಅ 28-ದುಬೈಗೆ ತೆರಳುವ ಸಂದರ್ಭದಲ್ಲಿ ಖಾಸಗಿ ವಿಮಾನಯಾನ ಸಂಸ್ಥೆಗೆ ಬೆಳಿಗ್ಗೆ ಬಾಂಬ್ ಬೆದರಿಕೆ ಕರೆ ಬಂದು ಕೆಲ ಕಾಲ ಆತಂಕದ ವಾತಾವರಣ ಸೃಷ್ಠಯಾದ ಘಟನೆ ಇಲ್ಲಿನಡೆದಿದೆ.
ಪೊಲೀಸ್ ಕಂಟ್ರೋಲ್ ರೂಂಗೆ ಅನಾಮಧೇಯ ಕರೆ ಬಂದಿದ್ದು, ವಿಮಾನ ನಿಲ್ದಾಣದ ಪೊಲೀಸರಿಗೆ ಎಚ್ಚರಿಕೆ ನೀಡಲಾಗಿದೆ. ತರುವಾಯ, ಸುಮಾರು 160 ಪ್ರಯಾಣಿಕರೊಂದಿಗೆ ಬೆಳಿಗ್ಗೆ 7.20 ಕ್ಕೆ ಹೊರಡಲು ಸಿದ್ಧವಾಗಿದ್ದ ಇಂಡಿಗೋ ವಿಮಾನದೊಳಗೆ ಭದ್ರತಾ ಸಿಬ್ಬಂದಿ ಶೋಧ ನಡೆಸಲಾಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
ನಂತರ ಅದು ಹುಸಿ ಎಂದು ತಿಳಿಯುತ್ತಿದ್ದಂತೆ ಎಲ್ಲರೂ ನಿಟ್ಟುಸಿರುಬಿಟ್ಟಿದ್ದಾರೆ. ಕರೆ ಮಾಡಿದವರ ಪೋಡನ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸಂಪೂರ್ಣ ತಪಾಸಣೆ ನಂತರ ವಿಮಾನ ಹಾರಾಟಕ್ಕೆ ಅನುಮತಿ ನೀಡಲಾಗಿದೆ.