ದೆಹಲಿ, ಜು. 10: ರಾಷ್ಟ್ರ ರಾಜಧಾನಿ ದೆಹಲಿ, ಹರ್ಯಾಣ ಹಾಗೂ ಉತ್ತರ ಪ್ರದೇಶದಲ್ಲಿ ಇಂದು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಸುಮಾರು 10 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವವಾಯಿತು ಎಂದು ಜನರು ಹೇಳಿದ್ದಾರೆ.
ಈ ಸಮಯದಲ್ಲಿ ಜನರು ತಮ್ಮ ಮನೆಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿ ಬಂದಿದ್ದಾರೆ ಇಂದು ಬೆಳಗ್ಗೆ 9.04ಕ್ಕೆ ಭೂಮಿ ತೀವ್ರವಾಗಿ ಕಂಪಿಸಿತು. ದೆಹಲಿ, ನೋಯ್ಡಾ, ಗಾಜಿಯಾಬಾದ್, ಗುರುಗ್ರಾಮ್, ಫರಿದಾಬಾದ್, ಜಿಂದ್, ರೋಕ್ಟಕ್, ಭಿವಾನಿ, ಝಜ್ಜರ್, ಬಹದ್ದೂರ್ಗಢ ಸೇರಿದಂತೆ ಹಲವು ನಗರಗಳಲ್ಲಿ ಕಂಪನದ ಅನುಭವವಾಯಿತು. ಭೂಕಂಪದ ಕೇಂದ್ರಬಿಂದು ಹರ್ಯಾಣವಾಗಿದೆ.
ಎರಡು ನಿಮಿಷಗಳಲ್ಲಿ ಝಜ್ಜರ್‌ನಲ್ಲಿ ಎರಡು ಬಾರಿ ಭೂಕಂಪ ಸಂಭವಿಸಿದೆ. ಬೆಳಗ್ಗೆ 9.07 ಕ್ಕೆ ಝಜ್ಜರ್‌ನಲ್ಲಿ ಮೊದಲ ಭೂಕಂಪ ಸಂಭವಿಸಿದೆ. ನಂತರ ಬೆಳಗ್ಗೆ 9.10 ಕ್ಕೆ ಸೌಮ್ಯ ಭೂಕಂಪ ಸಂಭವಿಸಿದೆ. ಹಠಾತ್ ಕಂಪನದಿಂದಾಗಿ ಜನರು ಭಯಭೀತರಾಗಿದ್ದರು.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ (ಎನ್‌ಸಿಎಸ್) ಪ್ರಕಾರ, ಭೂಕಂಪದ ಕೇಂದ್ರಬಿಂದು ಝಜ್ಜರ್‌ನಿಂದ ಉತ್ತರಕ್ಕೆ 10 ಕಿಲೋಮೀಟರ್ ದೂರದಲ್ಲಿತ್ತು ಮತ್ತು ಅದರ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.4 ಎಂದು ಅಳೆಯಲಾಗಿದೆ.ಝಜ್ಜರ್ ಪಕ್ಕದಲ್ಲಿರುವ ಬಹದ್ದೂರ್ಗಢದಲ್ಲೂ ಭೂಕಂಪನದ ಅನುಭವವಾಗಿದೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಕಂಪನದ ಅನುಭವವಾದ ನಂತರ ಜನರು ಬೀದಿಗಿಳಿದಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಜನರು ಜಾಗರೂಕರಾಗಿರಲು ಆಡಳಿತವು ಮನವಿ ಮಾಡಿದೆ. ಭಿವಾನಿಯಲ್ಲಿಯೂ ಸೌಮ್ಯ ಕಂಪನಗಳು ದಾಖಲಾಗಿವೆ ಎಂದು ಎನ್‌ಸಿಎಸ್ ದೃಢಪಡಿಸಿದೆ, ಆದರೆ ಅದರ ತೀವ್ರತೆ ಮತ್ತು ಕೇಂದ್ರಬಿಂದುವಿನ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.
ರಿಕ್ಟರ್ ಮಾಪಕವನ್ನು ಬಳಸಿಕೊಂಡು ಭೂಕಂಪಗಳನ್ನು ಅಳೆಯಲಾಗುತ್ತದೆ. ಇದನ್ನು ರಿಕ್ಟರ್ ಮ್ಯಾಗ್ನಿಟ್ಯೂಡ್ ಟೆಸ್ಟ್ ಮಾಪಕ ಎಂದು ಕರೆಯಲಾಗುತ್ತದೆ. ರಿಕ್ಟರ್ ಮಾಪಕದಲ್ಲಿ, ಭೂಕಂಪಗಳನ್ನು 1 ರಿಂದ 9 ರ ಆಧಾರದ ಮೇಲೆ ಅಳೆಯಲಾಗುತ್ತದೆ. ಭೂಕಂಪಗಳನ್ನು ಅದರ ಕೇಂದ್ರಬಿಂದುವಿನಿಂದ ಅಳೆಯಲಾಗುತ್ತದೆ. ಭೂಕಂಪದ ಸಮಯದಲ್ಲಿ ಭೂಮಿಯ ಒಳಗಿನಿಂದ ಬಿಡುಗಡೆಯಾಗುವ ಶಕ್ತಿಯ ತೀವ್ರತೆಯನ್ನು ಇದರಿಂದ ಅಳೆಯಲಾಗುತ್ತದೆ.
- ಸಿದ್ದರಾಮಯ್ಯನವರೇ ಸಿಎಂ ಆಗಿ ಸಿದ್ದು ಮುಂದುವರೆಯುತ್ತಾರೆ : ಪುತ್ರ ಯತೀಂದ್ರ
- ಪಾಲಿಕೆಗಳ ನೌಕರರ ಕಷ್ಟಗಳನ್ನೂ ಕೇಳಿಸಿಕೊಳ್ಳಿ : ರಾಜ್ಯ ಸರ್ಕಾರಕ್ಕೆ HDK ಆಗ್ರಹ
- ಬೆಂಗಳೂರಿನ ಬೀದಿ ನಾಯಿಗಳಿಗೆ ನಿತ್ಯ ಬಾಡೂಟದ ಭಾಗ್ಯ
- ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರ ಮೊಬೈಲ್ ಕಳವು ಮಾಡುತ್ತಿದ್ದ ಚೋರನ ಬಂಧನ
- ದಕ್ಷಿಣ ಭಾರತೀಯರು ಡ್ಯಾನ್ಸ್ ಬಾರ್ ನಡೆಸಲು ಮಾತ್ರ ಯೋಗ್ಯರು : ಶಿವಸೇನೆ ಶಾಸಕ ಗಾಯಕ್ವಾಡ್