Friday, May 3, 2024
Homeಅಂತಾರಾಷ್ಟ್ರೀಯBREAKING : ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ, ನಡುಗಿದ ದೆಹಲಿ

BREAKING : ಅಫ್ಘಾನಿಸ್ತಾನ, ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ, ನಡುಗಿದ ದೆಹಲಿ

ಇಸ್ಲಾಮಾಬಾದ್, ಜ 11: ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುವಾರ ಮಧ್ಯಾಹ್ನ ಭೂಕಂಪನ ಸಂಭವಿಸಿದೆ. ನೋಯ್ಡಾ, ಘಾಜಿಯಾಬಾದ್, ಫರಿದಾಬಾದ್ ಮತ್ತು ಗುರುಗ್ರಾಮ್ ಸೇರಿದಂತೆ ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲೂ ಭೂಕಂಪನದ ಅನುಭವವಾಗಿದೆ. ಪಾಕಿಸ್ತಾನದ ಕೆಲವು ಭಾಗಗಳಲ್ಲಿ ಇಂದು ಮಧ್ಯಾಹ್ನ ರಿಕ್ಟರ್ ಮಾಪನದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ. ಇದನ್ನು ಪಾಕ್‍ನ ಹವಾಮಾನ ಇಲಾಖೆ ಖಚಿತಪಡಿಸಿದೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿತ್ತು ಎಂದು ವರದಿ ಮಾಡಿದೆ.

ಪ್ರಿಯಕರ ಜೊತೆ ಸೇರಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೊಂದ ಪಾಪಿ ಪತ್ನಿ

ಭೂಕಂಪವು ಮಧ್ಯಾಹ್ನ 2:20 ಕ್ಕೆ (ಸ್ಥಳೀಯ ಕಾಲಮಾನ) ಹಿಂದೂಕುಶ್ ಪ್ರದೇಶದಲ್ಲಿ ಭೂಮಿಯ 213 ಕಿಮೀ ಆಳದಲ್ಲಿ ಸಂಭವಿಸಿದೆ.ಕೆಲವೆಡೆ ಜನರು ಬೀತಿಯಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಹಲವು ಕಟ್ಟಡಗಳು ಬಿರಿಕು ಬಿಟ್ಟಿದ್ದು ಆಫ್ಘಾನ್ ಗಡಿ ಬಲಿ ಹಲವೆಡೆ ಮನೆಗಳು ಉರುಳಿವೆ.

ಭಾರತದ ರಾಜಧಾನಿ ನವದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ಜನರಿಗೆ ಕಂಪನದ ಅನುಭವವಾಗಿದೆ. ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ಪಂಜಾಬ್ ಮತ್ತು ಉತ್ತರ ಭಾರತದ ಇತರ ಭಾಗಗಳಲ್ಲಿಯೂ ಕಂಪನದ ಅನುಭವವಾಗಿದೆ.

ಪಾಕಿಸ್ತಾನದ ಮಾಧ್ಯಮಗಳ ವರದಿಗಳ ಪ್ರಕಾರ, ಲಾಹೋರ್, ಇಸ್ಲಾಮಾಬಾದ್ ಮತ್ತು ಖೈಬರ್ ಪಖ್ತುಂಕ್ವಾ ನಗರಗಳಲ್ಲಿಯೂ ಕಂಪನದ ಅನುಭವವಾಗಿದೆ.

RELATED ARTICLES

Latest News