Friday, November 15, 2024
Homeರಾಷ್ಟ್ರೀಯ | Nationalಮಹಾರಾಷ್ಟ್ರದಲ್ಲಿ 6382 ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲು

ಮಹಾರಾಷ್ಟ್ರದಲ್ಲಿ 6382 ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲು

EC reports 6382 poll code violations in Maharashtra

ಮುಂಬೈ,ನ.15- ಮಹಾರಾಷ್ಟ್ರದಲ್ಲಿ ಚುನಾವಣಾ ಆಯೋಗವು ಕಳೆದ ಒಂದು ತಿಂಗಳಲ್ಲಿ ಮಾದರಿ ನೀತಿಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ 6,382 ದೂರುಗಳನ್ನು ಸ್ವೀಕರಿಸಿದೆ ಮತ್ತು ಒಂದನ್ನು ಹೊರತುಪಡಿಸಿ ಎಲ್ಲವನ್ನೂ ಪರಿಹರಿಸಲಾಗಿದೆ.

ಇದೇ ವೇಳೆ 536 ಕೋಟಿ ರೂ.ಗೂ ಹೆಚ್ಚು ನಗದು ಮತ್ತು ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಅ.15ರಂದು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ಘೋಷಣೆಯೊಂದಿಗೆ ಮಾದರಿ ನೀತಿ ಸಂಹಿತೆ(ಎಂಸಿಸಿ) ಜಾರಿಗೆ ಬಂದಿದ್ದು, ನವೆಂಬರ್ 14ರವರೆಗೆ ಚುನಾವಣಾ ಸಮಿತಿಯ ಸಿವಿಐಜಿಐಎಲ್ ಅಪ್ಲಿಕೇಶನ್ ಮೂಲಕ 6,382 ದೂರುಗಳನ್ನು ಸ್ವೀಕರಿಸಲಾಗಿದೆ ಎಂದು ರಾಜ್ಯ ಚುನಾವಣಾ ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ದೂರು ದಾಖಲಾದ ನಂತರ, ಸಂಬಂಧಿತ ತಂಡವು ತನಿಖೆ ನಡೆಸಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತದೆ ಎಂದು ಚುನಾವಣಾ ಆಯೋಗ ಹೇಳಿದೆ.ಅ.15ರಿಂದ ನ.14ರವರೆಗೆ ರಾಜ್ಯ ಮತ್ತು ಕೇಂದ್ರ ಏಜೆನ್ಸಿಗಳು 536.45 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿವೆ.

ಇದರಲ್ಲಿ ಅಕ್ರಮ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಅಮೂಲ್ಯ ಲೋಹಗಳು ಸೇರಿವೆ ಎಂದು ಪ್ರಕಟಣೆ ತಿಳಿಸಿದೆ.ನವೆಂಬರ್ 20ರಂದು ಒಂದೇ ಹಂತದಲ್ಲಿ ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ.

RELATED ARTICLES

Latest News