ನವದೆಹಲಿ,ಜ.17- ಮುಂದಿನ ಜೂನ್ ನಂತರ ಭಾರತದಲ್ಲೂ ಆರ್ಥಿಕ ಹಿಂಜರಿತದ ಪರಿಣಾಮ ಎದುರಾಗಲಿದೆ ಎಂದು ಕೇಂದ್ರ ಸಚಿವರ ಹೇಳಿಕೆಯನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಪ್ರಧಾನ ಮಂತ್ರಿ ಮತ್ತು ಕೇಂದ್ರ ಹಣಕಾಸು ಸಚಿವರು ದೇಶದ ಜನರಿಂದ ಏನನ್ನು ಮುಚ್ಚಿಡಲು ಬಯಸುತ್ತಿದ್ದಾರೆ ಎಂದು ಪ್ರಶ್ನಿಸಿದೆ.
ಕೇಂದ್ರ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್ಎಂಇ) ಸಚಿವ ನಾರಾಯಣರಾಣೆ ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಈಗಾಗಲೇ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಆರ್ಥಿಕ ಹಿಂಜರಿತ ಕಾಡುತ್ತಿದೆ. ಭಾರತದಲ್ಲಿ ಜೂನ್ ಬಳಿಕ ಅದರ ಪರಿಣಾಮ ಕಾಣಿಸಿಕೊಳ್ಳಬಹುದು. ಕೇಂದ್ರ ಸರ್ಕಾರ ಅದನ್ನು ತಡೆಯಲು ಅಥವಾ ನಿಯಂತ್ರಿಸಲು ಅಗತ್ಯವಾದ ಎಲ್ಲಾ ಪ್ರಯತ್ನಗಳನ್ನು ಕೈಗೊಂಡಿದೆ ಎಂದು ಹೇಳಿದ್ದರು.
ಬೈಕ್ಗೆ ಕ್ಯಾಂಟರ್ ಡಿಕ್ಕಿ ಹೊಡೆದು ಸ್ನೇಹಿತರ ದುರ್ಮರಣ
ಈ ಹೇಳಿಕೆಯನ್ನು ಆಧರಿಸಿ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ದೇಶದಲ್ಲಿ 2014 ರಿಂದಲೂ ಉದ್ಯಮ ನಾಶವಾಗಿದೆ. ಮುಂದಿನ 6 ತಿಂಗಳ ನಂತರ ಭಾರತದಲ್ಲಿ ಮತ್ತಷ್ಟು ಆರ್ಥಿಕ ಹಿಂಜರಿತ ಎದುರಾಗಲಿದೆ ಎಂದು ಕೇಂದ್ರ ಸಚಿವರು ಮುನ್ಸೂಚನೆ ನೀಡುತ್ತಿದ್ದಾರೆ.
ಹಾಗಿದ್ದ ಮೇಲೆ ಎಲ್ಲವೂ ಸರಿಯಿದೆ, ದೇಶ ಅಭಿವೃದ್ಧಿಯಾಗಿದೆ ಎಂದು ಬಿಂಬಿಸಿಕೊಳ್ಳುತ್ತಿರುವ ಪ್ರಧಾನಿ ಮತ್ತು ಕೇಂದ್ರ ಹಣಕಾಸು ಸಚಿವರು ದೇಶದ ಜನರಿಂದ ಏನನ್ನು ಮುಚ್ಚಿಡಲು ಬಯಸುತ್ತಿದ್ದಾರೆ ಎಂದು ಜೈರಾಮ್ರಮೇಶ್ ಪ್ರಶ್ನಿಸಿದ್ದಾರೆ.
economic, crisis, India, Jairam Ramesh,