ಯೋಜನಾ ಆಯೋಗದ ಮಾಜಿ ಸದಸ್ಯ, ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ ನಿಧನ

Social Share

ನವದೆಹಲಿ, ಆ.30 -ಯೋಜನಾ ಆಯೋಗದ ಮಾಜಿ ಸದಸ್ಯ ಹಾಗೂ ಗ್ರಾಮೀಣ ಆರ್ಥಿಕತೆಯ ಕುರಿತು ದೇಶದ ಅಗ್ರಗಣ್ಯ ತಜ್ಞರಲ್ಲಿ ಒಬ್ಬರಾಗಿದ್ದ ಅರ್ಥಶಾಸ್ತ್ರಜ್ಞ ಅಭಿಜಿತ್ ಸೇನ್ (72) ತಡರಾತ್ರಿ ನಿಧನರಾಗಿದ್ದಾರೆ.
ಕಳೆದ ರಾತ್ರಿ 11 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದೆ. ನಾವು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಕೊನೆಯುಸಿರೆಳೆದಿದ್ದಾರೆ ಎಂದು ಅವರ ಸಹೋದರ ಡಾ. ಪ್ರಣಬ್ ಸೇನ್ ಹೇಳಿದ್ದಾರೆ.

ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ವೃತ್ತಿಜೀವನದಲ್ಲಿ, ಪ್ರೊ.ಅಭಿಜಿತ್ ಸೇನ್ ಆಕ್ಸಪರ್ಡ್, ಕೇಂಬ್ರಿಡ್ಜï ಮತ್ತು ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪ್ರೊಪೆಸರ್‍ಆಗಿದ್ದರು ಮತ್ತು ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗದ ಅಧ್ಯಕ್ಷರು ಸೇರಿದಂತೆ ಹಲವಾರು ಪ್ರಮುಖ ಸರ್ಕಾರಿ ಹುದ್ದೆಗಳನ್ನು ಅಲಂಕರಿಸಿದ್ದರು
ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 2004ರಿಂದ 2014ರವರೆಗೆ ಯೋಜನಾ ಆಯೋಗದ ಸದಸ್ಯರಾಗಿದ್ದರು.

2010 ರಲ್ಲಿ ಸಾರ್ವಜನಿಕ ಸೇವೆಗಾಗಿ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದರು.2014 ರಲ್ಲಿ ಎನ್‍ಡಿಎ ಅಧಿಕಾರಕ್ಕೆ ಬಂದಾಗ, ದೀರ್ಘಾವಯ ಧಾನ್ಯ ನೀತಿಯನ್ನು ರೂಪಿಸಲು ಉನ್ನತ ಮಟ್ಟದ ಕಾರ್ಯಪಡೆಯ ಮುಖ್ಯಸ್ಥರಾಗಿ ಸೇನ್ ಅವರನ್ನು ನೇಮಿಸಲಾಗಿತ್ತು .

ಬೊಕ್ಕಸದ ಮೇಲೆ ಆಹಾರ ಸಬ್ಸಿಡಿಯ ಹೊರೆ ಹೆಚ್ಚಾಗಿ ಉತ್ಪ್ರೇಕ್ಷಿತವಾಗಿದೆ ಮತ್ತು ಸಾರ್ವತ್ರಿಕ ಪಿಡಿಎಸ್ ಅನ್ನು ಬೆಂಬಲಿಸಲು ಮಾತ್ರವಲ್ಲದೆ ರೈತರಿಗೆ ಅವರ ಉತ್ಪನ್ನಗಳಿಗೆ ನ್ಯಾಯಯುತ ಬೆಲೆಯನ್ನು ಖಾತರಿಪಡಿಸಲು ದೇಶವು ಸಾಕಷ್ಟು ಹಣಕಾಸಿನ ಹೆಡ್ರೂಮ್ ಅನ್ನು ಹೊಂದಿದೆ ಎಂದು ಅವರು ಹೇಳಿದ್ದರು .

ಹಲವಾರು ಜಾಗತಿಕ ಸಂಶೋಧನೆ ಮತ್ತು ಬಹುಪಕ್ಷೀಯ ಸಂಸ್ಥೆಗಳೊಂದಿಗೆ ಸೇನ್ ಸಂಬಂಧ ಹೊಂದಿದ್ದರು. ಅವರ ತಂದೆ ಸಮರ್ ಸೇನ್ ವಿಶ್ವಬ್ಯಾಂಕ್ ಅರ್ಥಶಾಸ್ತ್ರಜ್ಞರಾಗಿದ್ದರು.

Articles You Might Like

Share This Article