ಮುಂಬೈ ಫೆ 23.ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ . ಸುದೀರ್ಘ ವಿಚಾರಣೆಯ ನಂತರ ಇಂದು ಮಧ್ಯಾಹ್ನ ಅವರನ್ನು ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಎನ್ ಸಿಪಿಯಲ್ಲಿ ಹಿರಿಯ ಮುಖಂಡರಾಗಿ ಗುರುತಿಸಿಕೊಂಡಿದ್ದ ಮಲಿಕ್ ಅವರು ಕಳೆದ 4ವರ್ಷಗಳ ಹಿಂದೆ ವ್ಯವಹಾರವೊಂದರಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಆರೋಪ ಕೇಳಿ ಬಂದಿತ್ತು
ಇಂದು ಬೆಳಿಗ್ಗೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (ಇಡಿ) ಕಚೇರಿಗೆ ಕರೆದೊಯ್ಯಲಾಯಿತು. ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು ಬೆಳಗ್ಗೆ 6 ಗಂಟೆಗೆ ಎನ್‌ಸಿಪಿ ನಾಯಕನ ಮನೆಗೆ ತಲುಪಿದರು, ಅಲ್ಲಿ ಅವರನ್ನು ಒಂದು ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು. ನಂತರ ಬೆಳಗ್ಗೆ 7:30ಕ್ಕೆ ಇಡಿ ಕಚೇರಿಗೆ ಕರೆತಂದಿದ್ದು, 8:30ರಿಂದ ವಿಚಾರಣೆ ನಡೆಸಲಾಗುತ್ತಿದೆ.
