ಕೊಲ್ಕತ್ತಾ.ಅ.12- ಶಿಕ್ಷಕರ ನೇಮಕಾತಿ ಹಗರಣದಲ್ಲಿ ಟಿಎಂಸಿ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಹಿಂದೆ ಮಾಣಿಕ್ ಭಟ್ಟಾಚಾರ್ಯ ಅವರು ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರಾವಧಿಯಲ್ಲಿಯೇ ನೇಮಕಾತಿ ಹಗರಣ ನಡೆದಿತ್ತು ಈ ಕಾರಣ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು ಎಂದು ಇಡಿ ಮೂಲಗಳು ತಿಳಿಸಿವೆ.
ನಿನ್ನೆ ರಾತ್ರಿಯವರೆಗೂ ನಡೆದ ವಿಚಾರಣೆ ಬಳಿಕ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊಲ್ಕತ್ತಾ ಹೈಕೋರ್ಟ್‍ಗೆ ಸಲ್ಲಿಸಿದ ವರದಿಯಲ್ಲಿ ಅವರ ಹೆಸರನ್ನು ಉಲ್ಲೇಖಿಸಲಾಗಿತ್ತು ನಂತರ ಭಟ್ಟಾಚಾರ್ಯ ಅವರನ್ನು ಶಿಕ್ಷಣ ಮಂಡಳಿಯ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಲಾಗಿತ್ತು.
ನಂತರ ತನಿಖೆಗಾಗಿ ಕೋಲ್ಕತ್ತಾ ಹೈಕೋರ್ಟ್ ಸಮಿತಿ ರಚಿಸಿತ್ತು ನಂತರ ಬಹು ಕೋಟಿ ಹಗರಣ ಕಂಡುಬಂದ ಹಿನ್ನಲೆಯಲ್ಲಿ ಇಡಿ ಪ್ರಕರಣ ದಾಖಲಿಸಿದೆ.ಈಗಾಗಲೆ ಇದೇ ಪ್ರಕರಣದಲ್ಲಿ ಶಾಸಕ ಪಾರ್ಥ ಚಟರ್ಜಿ ಬಂಧಿಸಿತ್ತುಇಂದು ಮಾಣಿಕ್ ಭಟ್ಟಾಚಾರ್ಯ ಬಂಧಿಸಿದ್ದು ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ದೊಡ್ಡ ಶಾಕ್ ನೀಡಿದೆ.