ಬೆಂಗಳೂರು, ನ. 14- ಅನಾರೋಗ್ಯದ ಕಾರಣ ನೀಡಿ ಇತ್ತೀಚೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಪ್ತ ಕೆ.ಮರೀಗೌಡ ಅವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆಗೊಳಪಡಿಸಿದರು.
ವಿಚಾರಣೆಗೆ ಹಾಜರಾಗಬೇಕೆಂದು ಮುಡಾದ ಮಾಜಿ ಅಧ್ಯಕ್ಷ ಮರಿಗೌಡ ಅವರಿಗೆ ಕೆಲ ದಿನಗಳ ಹಿಂದೆ ಸಮನ್ಸ್ ಜಾರಿ ಮಾಡಿತ್ತು. ಅನಾರೋಗ್ಯದ ಹಿನ್ನಲೆಯಲ್ಲಿ ಸಮಯ ಅವಕಾಶ ನೀಡಬೇಕೆಂದು ಕೋರಿದ್ದರು. ಗುರುವಾರ ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಆಗಮಿಸಿದ ಮರಿಗೌಡ ಅವರನ್ನು ತನಿಖಾ ತಂಡ ಪ್ರಕರಣ ಸಂಬಂಧ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟರು ಎಂದು ಗೊತ್ತಾಗಿದೆ.
ಮರಿಗೌಡ ಮುಡಾ ಅಧ್ಯಕ್ಷರಾಗಿದ್ದ ವೇಳೆ ನಿಯಮ ಉಲ್ಲಂಘಿಸಿ ನಿವೇಶನ ಹಂಚಿಕೆಯಲ್ಲಿ ಬೇಕಾಬಿಟ್ಟಿ ನಿವೇಶನಗಳನ್ನು ಹಂಚಿಕೆ ಮಾಡಿದ್ದಾರೆ ಎಂಬ ಆರೋಪವಿತ್ತು. ಇದರ ಕುರಿತು ಇಡಿ ಅಧಿಕಾರಿಗಳು ಇಂಚಿಂಚು ಮಾಹಿತಿಯನ್ನು ಕಲೆ ಹಾಕಿದ್ದಾರೆ.
ಇತ್ತಚೆಗಷ್ಟೆ ಕೆ.ಮರೀಗೌಡ ಅವರು ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮುಡಾ ಪ್ರಕರಣವನ್ನ ಇತ್ತ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು ಈಗಾಗಲೇ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಅವರನ್ನ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.