Wednesday, January 29, 2025
Homeರಾಜ್ಯಸಿಎಂ ಪತ್ನಿ, ಸಚಿವ ಬೈರತಿ ಸುರೇಶ್‌ಗೆ ಇ.ಡಿ ನೋಟೀಸ್ : ರಾಜಕೀಯ ಪಿತೂರಿ ಎಂದ ಡಿಕೆಶಿ

ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್‌ಗೆ ಇ.ಡಿ ನೋಟೀಸ್ : ರಾಜಕೀಯ ಪಿತೂರಿ ಎಂದ ಡಿಕೆಶಿ

ED notice to CM's wife, Minister Bairati Suresh: Political conspiracy, says DK

ಬೆಂಗಳೂರು,ಜ.27- ರಾಜಕೀಯ ಪಿತೂರಿಯಿಂದ ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್ ಅವರಿಗೆ ಇ.ಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್ ಅವರಿಗೆ ಇ.ಡಿ ಸಂಸ್ಥೆ ನೋಟಿಸ್ ನೀಡಿದೆ ಎಂದು ಕೇಳಿದಾಗ, ನನ್ನ ವಿರುದ್ಧದ ಪ್ರಕರಣದಲ್ಲೂ ಹೀಗೆ ಆಗಿತ್ತು.

ಒಂದು ಪ್ರಕರಣವನ್ನು ಒಂದೇ ಸಮಯದಲ್ಲಿ ಎರಡು ಸಂಸ್ಥೆಗಳು ತನಿಖೆ ನಡೆಸಲು ಸಾಧ್ಯವಿಲ್ಲ. ಲೋಕಾಯುಕ್ತ ಸಂಸ್ಥೆ ಈಗಾಗಲೇ ತನಿಖೆ ಮಾಡುತ್ತಿದೆ. ಲೋಕಾಯುಕ್ತ ತನಿಖೆ ನಡೆಸುತ್ತಿರುವಾಗ ಬೇರೆ ಸಂಸ್ಥೆಗಳು ತನಿಖೆ ನಡೆಸಲು ಆಗುವುದಿಲ್ಲ ಎಂದು ನ್ಯಾಯಾಲಯಗಳು ಅನೇಕ ತೀರ್ಪು ನೀಡಿವೆ. ಈ ವಿಚಾರವಾಗಿ ಸಂಪೂರ್ಣ ಮಾಹಿತಿ ಪಡೆದ ನಂತರ ನಾನು ಮಾತನಾಡುತ್ತೇನೆ ಎಂದು ತಿಳಿಸಿದರು.

ಮುಡಾ ಪ್ರಕರಣ ಸಿಬಿಐ ತನಿಖೆ ನೀಡಬೇಕು ಎಂಬ ವಿಚಾರವಾಗಿ ಕೇಳಿದಾಗ, ನನ್ನ ಪ್ರಕರಣದಲ್ಲೂ ಸಿಬಿಐ ಹಾಗೂ ಇ.ಡಿ ಒಟ್ಟಿಗೆ ತನಿಖೆ ಮಾಡುತ್ತಿದ್ದವು. ಯಾವುದೇ ಪ್ರಕರಣಗಳಾಗಲಿ ಒಟ್ಟಿಗೆ ಒಂದೇ ಪ್ರಕರಣವನ್ನು ಎರಡು ಸಂಸ್ಥೆಗಳು ತನಿಖೆ ಮಾಡುವಂತಿಲ್ಲ. ಈ ಕುರಿತಾಗಿ ಬಂದಿರುವ ನ್ಯಾಯಾಲಯದ ತೀರ್ಪುಗಳನ್ನು ನನ್ನ ಪ್ರಕರಣದಲ್ಲಿ ನ್ಯಾಯಾಲಯದ ಮುಂದೆ ಪ್ರಸ್ತಾಪ ಮಾಡಿದ್ದೇನೆ ಎಂದು ತಿಳಿಸಿದರು.

ಸರ್ಕಾರ ಸುಭದ್ರವಾಗಿದೆ :
ಸಿಎಂ ಹ್ದುೆ ವಿಚಾರವಾಗಿ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, ಆ ರೀತಿಯಾಗಿ ಯಾರೂ ಏನೂ ಮಾತನಾಡಿಲ್ಲ. ಸರ್ಕಾರ ಸುಭದ್ರವಾಗಿದೆ. ನಾವೆಲ್ಲರೂ ಸಿಎಂ ಅವರ ಕೆಳಗೆ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

RELATED ARTICLES

Latest News