ನವದೆಹಲಿ/ಬೆಂಗಳೂರು, ಮಾ.13– ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸಿಲುಕಿಕೊಂಡಿರುವ ನಟಿ ರನ್ಯಾರಾವ್ ಅವರ ಐಷಾರಾಮಿ ಫ್ಲಾಟ್ ಹಾಗೂ ಅವರ ಆಪ್ತರ ಮನೆ, ಕಚೇರಿಗಳು ಸೇರಿದಂತೆ ನಗರದ ವಿವಿಧ ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಅಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ಈಗಾಗಲೇ ಈ ಪ್ರಕರಣದ ಅಂತಾರಾಷ್ಟ್ರೀಯ ಜಾಲದ ಬಗ್ಗೆ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ನಡು ವೆಯೇ ಇಡಿ ಅಕಾರಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಈ ದಾಳಿ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.
ರನ್ಯಾರಾವ್ ವಾಸಿಸುತ್ತಿದ್ದ ಲ್ಯಾವೆಲ್ಲೆ ರಸ್ತೆಯಲ್ಲಿರುವ ಅವರ ಅಪಾರ್ಟ್‌ಮೆಂಟ್, ಕೋರಮಂಗಲ, ಜಯನಗರ, ಬಸವನಗುಡಿ ಮುಂತಾದ ಪ್ರದೇಶಗಳಲ್ಲಿನ ಅವರ ಆಪ್ತರ ನಿವಾಸ ಹಾಗೂ ಕಚೇರಿಗಳ ಮೇಲೆ ಇಡಿ ಅಕಾರಿಗಳು ದಾಳಿ ನಡೆಸಿ ಪರಿಶೀಲನೆ ಕೈಗೊಂಡಿ ದ್ದಾರೆ.
ರನ್ಯಾರಾವ್ ಅವರಿಗೆ ವಿಮಾನದ ಟಿಕೆಟ್ ಬುಕ್ ಮಾಡಿದವರು ಮತ್ತು ಪ್ರವಾಸಕ್ಕೆ ನೆರವು ನೀಡಿದವರು ಮತ್ತು ವ್ಯವಹಾರದಲ್ಲಿ ಪಾಲುದಾರರಾಗಿರುವವರನ್ನು ಇಡಿ ಗುರಿ ಮಾಡಿಕೊಂಡು ದಾಳಿ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಈಗಾಗಲೇ ರನ್ಯಾರವರನ್ನು ಬಂಸಿ ವಿಚಾರಣೆ ನಡೆಸಿರುವ ಡಿಆರ್‌ಐ ಕೆಲವು ಮಾಹಿತಿಯನ್ನು ಕಲೆ ಹಾಕಿತ್ತು. ನಂತರ ಸಿಬಿಐ ಕೂಡ ಪ್ರತ್ಯೇಕವಾಗಿ ತನಿಖೆ ಕೈಗೊಂಡಿದೆ. ಈಗ ಇಡಿ ಕೂಡ ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ದಾಳಿ ಸಂದರ್ಭದಲ್ಲಿ ಕೆಲವು ಮಹತ್ವದ ದಾಖ ಲೆಗಳನ್ನು ವಶಪಡಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಚಿನ್ನ ಕಳ್ಳ ಸಾಗಾಣಿಕೆಯಲ್ಲಿ ಕೋಟ್ಯಂತರ ರೂ. ವ್ಯವಹಾರ ನಡೆದಿರಬಹುದೆಂದು ಶಂಕಿಸಲಾಗಿದೆ. ಈ ಜಾಲ ದೇಶವ್ಯಾಪಿ ಹೊಂದಿ ರುವ ಸಾಧ್ಯತೆ ಹೊಂದಿರುವುದರಿಂದ ಇಡಿ ಮಧ್ಯಪ್ರವೇಶಿಸಿದೆ ಎಂದು ತಿಳಿದುಬಂದಿದೆ.