ಬೆಂಗಳೂರು,ಜ.7- ಬಿಬಿಎಂಪಿ ವತಿಯಿಂದ 2016ರಲ್ಲಿ ನಡೆದ ಬೋರ್ವೆಲ್ ಹಗರಣಕ್ಕೆ ಸಂಬಂಧಿಸಿದ ಬಿಬಿಎಂಪಿ ಪ್ರಧಾನ ಅಭಿಯಂತರ ಕಚೇರಿ ಮೇಲೆ ಇಂದು ಜಾರಿ ನಿರ್ದೇಶನಾಲಯ(ಇ.ಡಿ) ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದೆ.
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ಪ್ರಧಾನ ಅಭಿಯಂತರರಾದ ಪ್ರಹ್ಲಾದ್ ರಾವ್ ಅವರ ಕಚೇರಿ ಮೇಲೆ ಬೆಳಗ್ಗೆ 11 ಗಂಟೆಗೆ ದಾಳಿ ನಡೆಸಿದ ಏಳು ಅಧಿಕಾರಿಗಳ ತಂಡ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿ ಪ್ರಧಾನ ಅಭಿಯಂತರರಿಗೆ ಡ್ರಿಲ್ ನಡೆಸಿದೆ.
ಬೆಂಗಳೂರು ವ್ಯಾಪ್ತಿಯಲ್ಲಿ ಬಿಬಿಎಂಪಿ ವತಿಯಿಂದ ಕೊರೆಸಿದ್ದ ಬೋರ್ವೆಲ್ನಲ್ಲಿ 9 ಸಾವಿರ ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆಯನ್ನು ಇಡಿ ನಡೆಸಿದೆ. ಈ ಸಂದರ್ಭದಲ್ಲಿ ಫೀಲ್‌್ಡನಲ್ಲಿ ಕೆಲಸ ಮಾಡಿದ್ದ ಎಂಜಿನಿಯರ್ ಹಾಗೂ ಎಕ್ಸಿಕ್ಯೂಟಿವ್ ಎಂಜಿನಿಯರ್ಗಳ ವಿಚಾರಣೆಯನ್ನು ಇ.ಡಿ ನಡೆಸಿದೆ.
ಕಚೇರಿಗೆ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಗಳನ್ನು ಕರೆಸಿಕೊಂಡು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಬಿಬಿಎಂಪಿ ಗುತ್ತಿಗೆದಾರ ಸಂಘದ ಉಪಾಧ್ಯಕ್ಷರಾಗಿದ್ದ ಅಂಬಿಕಾಪತಿ ಮನೆಯಲ್ಲಿ ಭಾರೀ ಪ್ರಮಾಣದ ಹಣ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.