ಅಕ್ರಮ ಹಣ ವರ್ಗಾವಣೆ ಪ್ರಕರಣ ; ಹಲವೆಡೆ ಇಡಿ ದಾಳಿ

ಮುಂಬೈ/ಹೈದರಾಬಾದ್, ಜು.28-ಮುಂಬೈ ವಿಮಾನ ನಿಲ್ದಾಣಗಳ ನಿರ್ವಹಣೆ ವಿಚಾರದಲ್ಲಿ ನಡೆದಿದೆ ಎನ್ನಲಾದ 705 ಕೋಟಿ ರೂ. ಗಳ ಅವ್ಯವಹಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಹಲವಡೆ ದಾಳಿಗಳನ್ನು ನಡೆಸಿದೆ.

ಜಿವಿಕೆ ಗ್ರೂಪ್, ಮುಂಬೈ ಇಂಟರ್‍ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ (ಎಂಐಎಎಲ್) ಮತ್ತು ಇತರ ಸಂಸ್ಥೆಗಳು ಈ ಅವ್ಯವಹಾರದಲ್ಲಿ ಶಾಮೀಲಾಗಿದ್ದು, ಇಂದು ಬೆಳಗ್ಗೆಯಿಂದ ವಾಣಿಜ್ಯ ರಾಜಧಾನಿ ಮುಂಬೈ ಮತ್ತು ಮುತ್ತಿನ ನಗರಿ ಹೈದರಾಬಾದ್‍ನ ವಿವಿಧೆಡೆ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿಗಳನ್ನು ನಡೆದಿ ಅಕ್ರಮಗಳನ್ನು ಪತ್ತೆ ಮಾಡಿದ್ದಾರೆ.

ಈ ಹಗರಣದಲ್ಲಿ ಜಿವಿಕೆ ಗ್ರೂಪ್‍ನ ವ್ಯವಸ್ಥಾಪಕ ನಿರ್ದೇಶರು, ಎಂಐಎಎಲ್‍ನ ಮುಖ್ಯಸ್ಥರು ಹಾಗೂ ಸರ್ಕಾರದ ಅಧಿಕಾರಿಗಳೂ ಶಾಮೀಲಾಗಿದ್ದು, ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ತೀವ್ರಗೊಳಿಸಿದ್ದಾರೆ.

Sri Raghav

Admin