Friday, May 3, 2024
Homeರಾಷ್ಟ್ರೀಯಪಂಜಾಬ್ ಕಾಂಗ್ರೆಸ್ ನಾಯಕರ ನಿವಾಸಗಳ ಮೇಲೆ ಇಡಿ ದಾಳಿ

ಪಂಜಾಬ್ ಕಾಂಗ್ರೆಸ್ ನಾಯಕರ ನಿವಾಸಗಳ ಮೇಲೆ ಇಡಿ ದಾಳಿ

ಚಂಡೀಗಢ, ಜ4 (ಪಿಟಿಐ) ಯಮುನಾ ನಗರ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ಹರಿಯಾಣ ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್, ಮಾಜಿ ಐಎನ್‍ಎಲ್‍ಡಿ ಶಾಸಕ ದಿಲ್‍ಬಾಗ್ ಸಿಂಗ್ ಮತ್ತು ಇತರ ಕೆಲವರ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.
ಯಮುನಾ ನಗರ, ಸೋನಿಪತ್, ಮೊಹಾಲಿ, ಫರಿದಾಬಾದ್, ಚಂಡೀಗಢ ಮತ್ತು ಕರ್ನಾಲ್‍ನಲ್ಲಿ ಇಬ್ಬರು ರಾಜಕಾರಣಿಗಳ 20 ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ.

ಮತ್ತು ಸಂಬಂಧಿತ ಘಟಕಗಳನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‍ಎ) ನಿಬಂಧನೆಗಳ ಅಡಿಯಲ್ಲಿ ಶೋಧಿಸಲಾಗುತ್ತಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಕಾಂಗ್ರೆಸ್‍ಗೆ ಸೇರ್ಪಡೆಗೊಂಡ ವೈ ಎಸ್ ಶರ್ಮಿಳಾ

ಈ ಹಿಂದೆ ಯಮುನಾ ನಗರ ಮತ್ತು ಸಮೀಪದ ಜಿಲ್ಲೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸಲು ಹರಿಯಾಣ ಪೊಲೀಸರು ದಾಖಲಿಸಿಕೊಂಡಿರುವ ಹಲವು ಎಫ್‍ಐಆರ್‍ಗಳಿಂದ ಹಣ ವರ್ಗಾವಣೆ ಪ್ರಕರಣವು ಹುಟ್ಟಿಕೊಂಡಿದೆ.

RELATED ARTICLES

Latest News