Thursday, May 2, 2024
Homeಜಿಲ್ಲಾ ಸುದ್ದಿಗಳುಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ

ಶಿವಮೊಗ್ಗ, ಅ.5- ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ ಮಾಡಿದೆ. ಶಿವಮೊಗ್ಗ ಹಾಗೂ ತೀರ್ಥಹಳ್ಳಿ ತಾಲೂಕಿನಲ್ಲಿ ಬೆಳ್ಳಂಬೆಳಗ್ಗೆಯೇ ಎರಡು ಕಾರುಗಳಲ್ಲಿ ಆಗಮಿಸಿರುವ ಇಡಿ ಅಧಿಕಾರಿಗಳು, ಶಿವಮೊಗ್ಗದ ಶರಾವತಿ ನಗರದ ನಿವಾಸ ಹಾಗೂ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಮಂಜುನಾಥಗೌಡ ಮನೆ ಮೇಲೂ ದಾಳಿ ಮಾಡಿದ್ದಾರೆ.

ಪಟ್ಟಣದ ಬೆಟ್ಟಮಕ್ಕಿಯ ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಿರುವ ಅಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಆರ್.ಎಂ. ಮಂಜುನಾಥ್ ಗೌಡರು ಬೆಂಗಳೂರಿನಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿರುವ ಆರ್.ಎಂ.ಎಂ. ಅವರ ಮೂರು ನಿವಾಸಗಳ ಮನೆಗಳ ಮೇಲೆ ಇಡಿ ದಾಳಿ ಮಾಡಿದ್ದು, ತೀರ್ಥಹಳ್ಳಿ ಪಟ್ಟಣದ ಬೆಟ್ಟಮಕ್ಕಿಯಲ್ಲಿರುವ ನಿವಾಸ, ತೀರ್ಥಹಳ್ಳಿಯ ಕಲ್ಲುಕೊಪ್ಪ ನಿವಾಸದ ಮೇಲೆ ಹಾಗೂ ಶಿವಮೊಗ್ಗದ ಶರಾವತಿ ನಗರದಲ್ಲಿರುವ ನಿವಾಸದ ಮೇಲೂ ದಾಳಿ ಮಾಡಿದ್ದರೆನ್ನಲಾಗಿದೆ.

ಮನೆ ಸುತ್ತಮುತ್ತ ಶಸ್ತ್ರಾಸ್ತ್ರ ಪೊಲೀಸರು ಸುತ್ತುವರೆದಿದ್ದರು. ಸರ್ಕಾರಿ ಕಾರುಗಳಲ್ಲಿ ಬಂದಿದ್ದ ಅಧಿಕಾರಿಗಳ ತಂಡ ಆರ್.ಎಂ.ಎಂ. ನಿವಾಸಗಳಲ್ಲಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಇಸ್ರೇಲ್‍ನಲ್ಲಿ ಸದ್ದು ಮಾಡುತ್ತಿದೆ ಅಖೇಲಿ ವೆಬ್‍ಸರಣಿ

ರಿಯಲ್ ಎಸ್ಟೇಟ್ ಕಂಪನಿ ಮೇಲೆ ದಾಳಿ: ಮತ್ತೊಂದೆಡೆ ರಾಜಧಾನಿ ಬೆಂಗಳೂರಿನ ರಿಯಲ್ ಎಸ್ಟೇಟ್ ಕಂಪನಿ ಪುರವಂಕರ ಲಿಮಿಟೆಡ್‍ನ ಹಲವು ನಗರಗಳಲ್ಲಿ ಇರುವ ಕಚೇರಿಗಳ ಮೇಲೆ ದಾಳಿ ನಡೆಸಿದೆ.

ಪುರವಂಕರ ಲಿಮಿಟೆಡ್ ಕಂಪನಿಗೆ ಸಂಬಂಧಿಸಿದ ಸುಮಾರು 40 ಕಚೇರಿ, ಸ್ಥಳ, ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆಯು ನಿನ್ನೆ (ಅಕ್ಟೋಬರ್ 4) ದಾಳಿ ನಡೆಸಿದೆ. ಆದಾಯ ತೆರಿಗೆ ಇಲಾಖೆಯು ರಿಯಲ್ ಎಸ್ಟೇಟ್ ಕಂಪನಿ ಪುರವಂಕರ ಲಿಮಿಟೆಡ್‍ನ ಬೆಂಗಳೂರು, ಹೈದರಾಬಾದ್ ಮತ್ತು ಮುಂಬೈ ಸೇರಿದಂತೆ ಹಲವು ನಗರಗಳಲ್ಲಿ ಇರುವ ಕಚೇರಿಗಳ ಮೇಲೆ ದಾಳಿಯನ್ನು ನಡೆಸಲಾಗಿದೆ.

ವಸತಿ ಮತ್ತು ವಾಣಿಜ್ಯ ಸಂಕೀರ್ಣಗಳ ವಲಯದ ನಿರ್ಮಾಣದ ಕಂಪನಿಯಾದ ಪುರವಂಕರ ಲಿಮಿಟೆಡ್, ಪ್ರತಿ ಷೇರಿಗೆ 124.70 ರೂಪಾಯಿಯಂತೆ ಬುಧವಾರ ವಹಿವಾಟು ಕೊನೆಗೊಳಿಸಿದೆ. ಬುಧವಾರ ಮಧ್ಯಾಹ್ನ 3:59ಕ್ಕೆ ಸ್ಟಾಕ್ ಸುಮಾರು ಶೇಕಡ 2.73 ರಷ್ಟು ಕುಸಿತವನ್ನು ದಾಖಲಿಸಿದೆ.

ಪ್ರೀತಿ ಒಪ್ಪಿಕೊಳ್ಳದ ಕುಟುಂಬ, ಪ್ರೇಮ ವಿವಾಹವಾಗಿದ್ದ ದಂಪತಿ ಆತ್ಮಹತ್ಯೆ

ಇನ್ನು ಗುರುವಾರ ಈ ಸಮಯಕ್ಕೆ ಪುರವಂಕರ ಲಿಮಿಟೆಡ್ ಸ್ಟಾಕ್ ಸುಮಾರು ಶೇಕಡ 3.29 ರಷ್ಟು ಜಿಗಿತ ಕಂಡು, 128.80 ರೂಪಾಯಿಗೆ ತಲುಪಿದೆ. ಸ್ಟಾಕ್‍ನ 52 ವಾರಗಳ ಗರಿಷ್ಠ ಮಟ್ಟ 136.45 ರೂಪಾಯಿ ಆಗಿದ್ದು, 52 ವಾರಗಳ ಕನಿಷ್ಠ ಮಟ್ಟ 58.20 ರೂಪಾಯಿ ಆಗಿದೆ.

RELATED ARTICLES

Latest News