ರಾಜ್ಯದ ಎಲ್ಲಾ ಕಾಲೇಜುಗಳ ಅಧ್ಯಾಪಕರಿಗೆ ಸಿಹಿಸುದ್ದಿ

Social Share

ಬೆಂಗಳೂರು,ಅ.1- ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಪದವಿ ಕಾಲೇಜುಗಳ ಅಧ್ಯಾಪಕರಿಗೆ ಇಂದಿನಿಂದ ಅ.9ರವರೆಗೆ ರಜೆ ಘೋಷಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈ ಕುರಿತು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು, ಖಾಸಗಿ ಅನಿದಾನಿತ ಪದವಿ ಕಾಲೇಜುಗಳು ಹಾಗೂ ಖಾಸಗಿ ಪದವಿ ಕಾಲೇಜುಗಳ ಅಧ್ಯಾಪಕರಿಗೆ ಇಂದಿನಿಂದ ಅ.9 ರವರೆಗೆ ರಜೆ ಘೋಷಿಸಲಾಗಿದೆ.

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು, ಖಾಸಗಿ ಅನಿದಾನಿತ ಪದವಿ ಕಾಲೇಜುಗಳು ಹಾಗೂ ಖಾಸಗಿ ಪದವಿ ಕಾಲೇಜುಗಳ ಅಧ್ಯಾಪಕರುಗಳಿಗೆ ದಿನಾಂಕ 01-10-2022ರಿಂದ 09-10-2022 ರವರೆಗೆ ರಜೆ ಘೋಷಿಸಲು ಸರ್ಕಾರ ಅನುಮತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ, ಸರ್ಕಾರದ ಪ್ರಧಾನ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 30, 2022ಕ್ಕೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳ ಮಧ್ಯವಾರ್ಷಿಕ ಪರೀಕ್ಷೆ ಮುಕ್ತಾಯವಾಗಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಗಳ ಅನ್ವಯ ಅ.1ರಿಂದ ಅ.13ರವರೆಗೆ ಮಧ್ಯಂತರ ರಜೆ ನಿಗದಿಪಡಿಸಲಾಗಿತ್ತು.

ಆದರೆ ಇತ್ತೀಚೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಅಕ್ಟೋಬರ್ 1, 2022 ರಿಂದ ಅಕ್ಟೋಬರ್ 13, 2022 ಮಧ್ಯಂತರ ರಜೆ ನಿಗದಿಯಾಗಿದ್ದ ಮಧ್ಯಂತರ ರಜೆಯನ್ನು ಒಂದು ದಿನ ಹೆಚ್ಚುವರಿಯಾಗಿ ರಜೆಯನ್ನು ವಿಸ್ತರಿಸಲಾಗಿದೆ.
ಹೀಗಾಗಿ ಎಲ್ಲಾ ಪದವಿ ಪೂರ್ವ ಕಾಲೇಜುಗಳನ್ನು ದಿನಾಂಕ 14-10-2022 ರಿಂದ ಪುನರಾರಂಭಿಸೋದಕ್ಕೆ ಸೂಚಿಸಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಈ ಬಾರಿ ಒಟ್ಟು 13 ದಿನ ಮಧ್ಯಂತರ ರಜೆ ಸಿಗಲಿವೆ.

Articles You Might Like

Share This Article