ಬೆಂಗಳೂರು,ಮಾ.15- ತಂದೆ ತಾಯಿ ಇಲ್ಲದ ಹಾಗೂ ಜಾತಿ ಗೊತ್ತಿರದ ಅನಾಥ ಮಕ್ಕಳಿಗೆ ಶೈಕ್ಷಣಿಕ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡಲು ಅನುಕೂಲವಾಗುವಂತೆ ಪ್ರವರ್ಗ 1ರಡಿ ಮೀಸಲಾತಿ ನೀಡಬೇಕೆಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.
ಈಗಾಗಲೇ ತೆಲಂಗಾಣ, ಮಹಾರಾಷ್ಟ್ರ ಸೇರಿದಂತೆ ಮತ್ತಿತರ ರಾಜ್ಯಗಳಲ್ಲಿ ತಂದೆತಾಯಿ ಇಲ್ಲದ ಮತ್ತು ಜಾತಿ ಗೊತ್ತಿರದ ಅನಾಥ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಲಾಗುತ್ತದೆ. ಇದೇ ಮಾದರಿಯನ್ನು ಕರ್ನಾಟಕದಲ್ಲೂ ಅಳವಡಿಸಿಕೊಳ್ಳಬೇಕೆಂದು ಆಯೋಗ ಮನವಿ ಮಾಡಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಅವರು, ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಲ್ಲಿ ಸೇರ್ಪಡೆಗೊಳ್ಳದ ಹಾಗೂ ಕೆನೆಪದರ ವ್ಯಾಪ್ತಿಗೆ ಒಳಪಡುವ ಸಮುದಾಯಗಳಿಗೂ ಜಾತಿ ಪ್ರಮಾಣ ಪತ್ರ ಪಡೆಯಲು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗಿದೆ.
ನರೇಗಾ ಯೋಜನೆ ಸ್ಥಗಿತಗೊಳಿಸುವ ಹುನ್ನಾರ : ಕೇಂದ್ರದ ವಿರುದ್ಧ ವ್ಯಾಪಕ ಆಕ್ರೋಶ
ಶೈಕ್ಷಣಿಕ ಮತ್ತು ಉದ್ಯೋಗ ಮೀಸಲಾತಿ ಹೊರತುಪಡಿಸಿ ಉಳಿದ ಉದ್ದೇಶಗಳಿಗೆ ಮಾತ್ರ ಜಾತಿ ಪ್ರಮಾಣಪತ್ರ ನೀಡುವ ಕುರಿತು ಅಗತ್ಯ ಕ್ರಮ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದರು.
ಹಿಂದುಳಿದ ವರ್ಗಗಳಿಗೆ ಜಾತಿ/ಆದಾಯ ಪ್ರಮಾಣಪತ್ರ ನೀಡುವಾಗ ಕೆನೆಪದರ ನೀತಿ ಅನ್ವಯ ಅಭ್ಯರ್ಥಿ ಮತ್ತು ತಂದೆ, ತಾಯಿ, ಗಂಡ/ಹೆಂಡತಿ ಇವರ ಆದಾಯವನ್ನು ಮಾತ್ರ ಪರಿಗಣಿಸಲಾಗುತ್ತಿತ್ತು. ಇದರಿಂದ ಉದ್ಯೋಗ ಮೀಸಲಾತಿಗಾಗಿ ಆದಾಯವನ್ನು ಪರಿಗಣಿಸುವಾಗ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ಪಡೆಯುವಾಗ ತೊಂದರೆ ಉಂಟಾಗುತ್ತಿತ್ತು.
ಇದನ್ನು ತಪ್ಪಿಸಲು ಸುಪ್ರೀಂಕೋರ್ಟ್ ಹಾಗೂ ಹೈಕೋರ್ಟ್ ನೀಡಿರುವ ತೀರ್ಪುಗಳನ್ನು ಆಧಾರವಾಗಿಟ್ಟುಕೊಂಡು ಇನ್ನು ಮುಂದೆ ಉದ್ಯೋಗ ಮೀಸಲಾತಿಗಾಗಿ ಆದಾಯವನ್ನು ಪರಿಗಣಿಸುವಾಗ ಕೇವಲ ಪೋಷಕರ ಆದಾಯವನ್ನು ಮಾತ್ರ ಪರಿಗಣಿಸುವ ಮಾದರಿಯನ್ನು ಸರ್ಕಾರ ಅಳವಡಿಸಿಕೊಂಡು ಜಾರಿಗೆ ತರಲು ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ನಾವು ವರದಿ ಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದರು.
ಇಟ್ಟಿಗೆ ಭಟ್ಟಿ ಕಾರ್ಖಾನೆಯಲ್ಲಿ ಉಸಿರುಗಟ್ಟಿ 5 ಕಾರ್ಮಿಕರ ಸಾವು
ಹಿಂದುಳಿದ ವರ್ಗಗಳ ಮೀಸಲಾತಿ ಜಾತಿ ಪಟ್ಟಿಯಲ್ಲಿರುವ 46 ಅಲೆಮಾರಿ/ ಅರೆ ಅಲೆಮಾರಿ ಜಾತಿಗಳಿಗೆ ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಆಯಾ ಜಾತಿ ಮುಂದೆ ಅಲೆಮಾರಿ/ ಅರೆ ಅಲೆಮಾರಿ ಎಂದು ನಮೂದಿಸಿದ ಜಾತಿ ಪ್ರಮಾಣ ಪತ್ರ ನೀಡಲು ಆಯೋಗವು ಶಿಫಾರಸ್ಸು ನೀಡಿದೆ.
education, employment, reservation, jayaprakash hegde,