ಶಾಲೆಗಳ ಪುನರಾರಂಭ ಕುರಿತು ಶುಕ್ರವಾರ ತೀರ್ಮಾನ : ಸಚಿವ ಬಿ.ಸಿ.ನಾಗೇಶ್

Social Share

ಬೆಂಗಳೂರು,ಜ.19-ಕೋವಿಡ್ ಹೆಚ್ಚಳದಿಂದ ಬೆಂಗಳೂರು ಸೇರಿದಂತೆ ಮತ್ತಿತರ ಕಡೆ ಮುಚ್ಚಲ್ಪಟ್ಟಿದ್ದ ಶಾಲೆಗಳನ್ನು ಪುನರಾರಂಭಿಸುವ ಕುರಿತು ಶುಕ್ರವಾರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಶಾಲೆಗಳನ್ನು ಬಂದ್ ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ಸೋಂಕು ತಗುಲಬಹುದೆಂಬ ಕಾರಣಕ್ಕಾಗಿ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿತ್ತು ಎಂದರು.
ಈಗ ಮುಚ್ಚಲ್ಪಟ್ಟಿರುವ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹತ್ವದ ಸಭೆ ನಡೆಸಲಿದ್ದಾರೆ. ಅಲ್ಲಿ ಎಲ್ಲ ಸಾಧಕಬಾಧಕಗಳ ಬಗ್ಗೆ ಚರ್ಚೆ ನಡೆ ಶಾಲೆಗಳನ್ನು ಆರಂಭಿಸುವ ನಿರ್ಧಾರದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಶಾಲೆಗಳನ್ನು ಬಂದ್ ಮಾಡಬೇಕೆಂದು ತಾಂತ್ರಿಕ ಸಲಹಾ ಸಮಿತಿ ಇಲ್ಲವೇ ತಜ್ಞರು ಕೂಡ ಹೇಳಿರಲಿಲ್ಲ. 3ನೇ ಅಲೆಯಲ್ಲಿ ಸೋಂಕು ಒಬ್ಬರಿಂದ ಒಬ್ಬರಿಗೆ ಬಹು ವೇಗವಾಗಿ ಹಬ್ಬುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದರು. ಇದು ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು ಎಂಬ ಕಾರಣಕ್ಕಾಗಿ ಬಂದ್ ಮಾಡುವ ತೀರ್ಮಾನವನ್ನು ಕೈಗೊಂಡಿದ್ದೇವೆ ಎಂದರು.
ಶಾಲೆಗಳನ್ನು ಮುಚ್ಚದಂತೆ ಖಾಸಗಿ ಶಾಲಾ ಒಕ್ಕೂಟದವರು ಮನವಿ ಮಾಡಿದ್ದಾರೆ. ಈಗ ಯಾವ ಯಾವ ಶಾಲೆಗಳಲ್ಲಿ ಎಷ್ಟೆಷ್ಟು ಪಾಸಿಟಿವ್ ಬಂದಿದೆ ಎಂಬುದನ್ನು ನಾವು ಅಧ್ಯಯನ ಮಾಡಿದ್ದೇವೆ. ಹೆಚ್ಚು ಸೋಂಕು ಇರುವ ಶಾಲೆಗಳನ್ನು ಬಂದ್ ಮಾಡಲು ಜಿಲ್ಲಾಡಳಿತಕ್ಕೆ ಸೂಚನೆ ಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದರು.
ಹೆಚ್ಚು ಸೋಂಕು ಕಾಣಿಸಿಕೊಂಡಿರುವ ಶಾಲೆಗಳನ್ನು ಸದ್ಯಕ್ಕೆ ಬಂದ್ ಮಾಡಲಾಗಿದೆ. ಉಳಿದಿರುವ ಕಡೆ ಎಂದಿನಂತೆ ಶಾಲೆಗಳು ನಡೆಯುತ್ತಿವೆ. ಬಂದ್ ಮಾಡುವ ಇಲ್ಲವೇ ಮುಂದುವರೆಸುವ ಬಗ್ಗೆ ಈಗಾಗಲೇ ಮುಖ್ಯಮಂತ್ರಿಯವರೇ ಜಿಲ್ಲಾಕಾರಿಗಳಿಗೆ ಅನುಮತಿ ನೀಡಿದ್ದಾರೆ. ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ನಿರ್ಧಾರವನ್ನು ಜಿಲ್ಲಾಡಳಿತ ತೆಗೆದುಕೊಳ್ಳುತ್ತದೆ ಎಂದರು.
ಸದ್ಯಕ್ಕೆ ಬಂದ್ ಆಗಿರುವ ಜಿಲ್ಲೆಗಳಲ್ಲಿ ಶಾಲೆಗಳ ಪುನಾರಂಭಿಸಲು ಚಿಂತನೆ ನಡೆಸಿದ್ದೇವೆ. 5ನೇ ತರಗತಿ ಮೇಲ್ಪಟ್ಟು ಶಾಲೆಗಳನ್ನು ತೆರೆಯಲು ಗಂಭೀರ ಚಿಂತನೆ ನಡೆದಿದೆ. ಅಂತಿಮವಾಗಿ ಶುಕ್ರವಾರದ ಸಭೆ ಮೇಲೆ ಎಲ್ಲವೂ ಅವಲಂಬಿತವಾಗಿದೆ ಎಂದರು.
ಕ್ಲಸ್ಟರ್ ಮಟ್ಟದಲ್ಲಿ ಶಾಲೆ ಬಂದ್ ಮಾಡಲು ಸಲಹೆ ಬಂದಿದೆ. ನಾವು ಏಕಾಏಕಿ ಶಾಲೆ ಬಂದ್ ಮಾಡಲು ಸಾಧ್ಯವಿಲ್ಲ. ಎಲ್ಲ ಸಾಧಕಬಾಧಕಗಳ ಬಗ್ಗೆ ಚರ್ಚೆ ಮಾಡಬೇಕು. ವಿದ್ಯಾರ್ಥಿಗಳ ಹಿತದೃಷ್ಟಿ, ಆರೋಗ್ಯ, ಪೆÇೀಷಕರ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.

Articles You Might Like

Share This Article