Homeರಾಜಕೀಯಬಿಜೆಪಿ ಗುಡ್ ಬೈ ಹೇಳಿದ ನೆ.ಲ.ನರೇಂದ್ರಬಾಬು ; ಸೆ.13ರಂದು ಕಾಂಗ್ರೆಸ್‌‍ ಸೇರ್ಪಡೆ

ಬಿಜೆಪಿ ಗುಡ್ ಬೈ ಹೇಳಿದ ನೆ.ಲ.ನರೇಂದ್ರಬಾಬು ; ಸೆ.13ರಂದು ಕಾಂಗ್ರೆಸ್‌‍ ಸೇರ್ಪಡೆ

ಬೆಂಗಳೂರು,ಸೆ.11- ಬಿಜೆಪಿ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ರಾಜಾಜಿನಗರ ಮತ್ತು ಮಹಾಲಕ್ಷ್ಮಿಲೇಔಟ್‌ ವಿಧಾನಸಭಾ ಕ್ಷೇತ್ರಗಳ ಮಾಜಿ ಶಾಸಕ ನೆ.ಲ.ನರೇಂದ್ರಬಾಬು, ಸೆ.13ರಂದು ಕಾಂಗ್ರೆಸ್‌‍ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ.

ನಗರದ ಮೌರ್ಯ ಹೋಟೆಲ್‌ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 40 ವರ್ಷಗಳಿಂದ ಸಾರ್ವಜನಿಕರ ಬೆಂಬಲದೊಂದಿಗೆ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ಮೂರು ಬಾರಿ ಮಹಾನಗರ ಪಾಲಿಕೆ ಸದಸ್ಯನಾಗಿ ಹಾಗೂ ಎರಡು ಬಾರಿ ಶಾಸಕನಾಗಿ ಕಾರ್ಯನಿರ್ವಹಿಸಿದ್ದೇನೆ ಎಂದು ತಿಳಿಸಿದರು.

ಕಳೆದ 10 ವರ್ಷಗಳಿಂದ ಬಿಜೆಪಿ ಪಕ್ಷಕ್ಕೆ ಸಮರ್ಪಣೆಯಿಂದ ಕೆಲಸ ಮಾಡಿದ್ದರೂ, ರಾಜಾಜಿನಗರ ಮತ್ತು ಮಹಾಲಕ್ಷ್ಮಿಲೇಔಟ್‌ ಕ್ಷೇತ್ರಗಳಲ್ಲಿ ತಮನ್ನು ಹಾಗೂ ತಮ ಬೆಂಬಲಿಗ ಕಾರ್ಯಕರ್ತರನ್ನು ಪಕ್ಷದಿಂದ ದೂರ ಮಾಡಲಾಗಿದೆ ಎಂದು ಆರೋಪಿಸಿದರು.

ತಮ ವಿರುದ್ಧ ಪಿತೂರಿ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬಿಜೆಪಿ ಜಾಣ ಕುರುಡು, ಜಾಣ ಮೌನದ ನೀತಿ ಅನುಸರಿಸುತ್ತಿದೆ. ಪಕ್ಷಕ್ಕಾಗಿ ತ್ಯಾಗ ಮಾಡಿದ ಕಾರ್ಯಕರ್ತರಿಗೆ ಸರ್ಕಾರ ಬಂದ ಬಳಿಕ ಬೆಲೆ ಇಲ್ಲ. ಹಿಂಬಾಲಕರಿಗೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಬಿಜೆಪಿ ತಂದೆ-ಮಕ್ಕಳ ಪಕ್ಷವಾಗಬಾರದು ಎಂದು ಟೀಕಿಸಿದರು.

ರಾಜ್ಯಾದ್ಯಂತ ನಾಲ್ಕು ಬಾರಿ ಪ್ರವಾಸ ಮಾಡಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇನೆ. ಎರಡು ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಗೆಲುವಿನಲ್ಲಿ ತಮ ಮತ್ತು ಕಾರ್ಯಕರ್ತರ ಶ್ರಮವಿದೆ ಎಂದರು. ಸೆ.13ರಂದು ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ ಅವರ ಸಮುಖದಲ್ಲಿ ತಮ ಸ್ನೇಹಿತರು ಮತ್ತು ಕಾರ್ಯಕರ್ತರೊಂದಿಗೆ ಕಾಂಗ್ರೆಸ್‌‍ ಸೇರುವುದಾಗಿ ಘೋಷಿಸಿದರು.

RELATED ARTICLES
spot_img

Latest News